ಹರ್ಷನನ್ನು ಮುಸ್ಲಿಮರು ಕೊಲೆ ಮಾಡಿದ್ದಾರೆ ಎಂದು ಎಸ್ಪಿಯೇ ಹೇಳಿದ್ದು: ಈಶ್ವರಪ್ಪ

ಬೆಂಗಳೂರು, ಫೆ.22: ಮುಸ್ಲಿಮರೇ ಹರ್ಷನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನನಗೆ ಮಾಹಿತಿ ನೀಡಿದರು. ಅದಕ್ಕಾಗಿ ನಾನು ಆ ರೀತಿ ಹೇಳಿಕೆ ನೀಡಿದ್ದೆ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

'ಭಜರಂಗದಳ ಕಾರ್ಯಕರ್ತನಾಗಿದ್ದ ಹರ್ಷನನ್ನು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ನಾನು ಹೇಳಿಕೆ ನೀಡಿರುವುದರ ಹಿಂದೆ ಸೂಕ್ತ ಮಾಹಿತಿ ಇತ್ತು' ಎಂದು ಈಶ್ವರಪ್ಪ ಮಂಗಳವಾರ ಶಿವಮೊಗ್ಗದಲ್ಲಿ ಸಮರ್ಥಿಸಿಕೊಂಡಿದ್ದಾರೆ.

'ಹರ್ಷನ ಕೊಲೆ ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗ ಎಸ್‌ಪಿಗೆ ಕರೆ ಮಾಡಿದೆ. ಮುಸ್ಲಿಂ ವ್ಯಕ್ತಿಗಳು ಕೊಲೆ ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಬಳಿಕ ಕೊಲೆಯಾದ ಸ್ಥಳದ ಅಕ್ಕಪಕ್ಕದ ನಿವಾಸಿಗಳೂ ಸಹ ಮುಸ್ಲಿಮರೇ ಹರ್ಷನನ್ನು ಕೊಲೆ ಮಾಡಿದ್ದಾರೆ ಎಂದು ಖಚಿತ ಪಡಿಸಿದರು' ಎಂದು ಈಶ್ವರಪ್ಪ ಹೇಳಿದರು.

arsha was murdered by Muslims: KS Eshwarappa

ಪ್ರಕರಣ ಸಂಬಂಧ ಈಗಾಗಲೇ ಮೂವರ ಬಂಧನ ಆಗಿದ್ದರೆ, 12 ಜನರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ಹೇಳಿಕೆ ನೀಡಿದ್ದಾರೆ. ನಿನ್ನೆ ಬಂಧನ ಆದವರ ಹೆಸರು ನೋಡಿ, ಮುಸ್ಲಿಮರೇ ಇದ್ದಾರೆ. ನಾನು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಅವರು ಸಮರ್ಥಿಸಿಕೊಂಡರು.

ಕಾಂಗ್ರೆಸ್‌ಗೆ ಟಾಂಗ್:

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ನಿನ್ನೆ ಮಾತನಾಡಿ ಈಶ್ವರಪ್ಪ ಅವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇರಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

ಮುಸ್ಲಿಮರು ಕೊಲೆ ಮಾಡಿರುವುದು ಈಶ್ವರಪ್ಪಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನೆ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಾತನಾಡಿದ್ದೇನೆ. ಈಗ ಬಂಧನ ಆಗಿರುವವರ ಹೆಸರನ್ನಾದರೂ ಒಮ್ಮೆ ನೋಡಿ ಮುಸ್ಲಿಮರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಹರಿಪ್ರಸಾದ್ ಹೇಳಿಕೆ ಕೊಡುತ್ತಾರಾ? ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+