ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಮಕೂರು, ಶಿವಮೊಗ್ಗ, ಮೈಸೂರು ಪಾಲಿಕೆ ಚುನಾವಣೆ ಘೋಷಣೆ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 09 : ಚುನಾವಣಾ ಆಯೋಗ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕರ್ನಾಟಕ ಹೈಕೋರ್ಟ್ ಚುನಾವಣೆ ದಿನಾಂಕ ಘೋಷಣೆ ಮಾಡಲು ಒಪ್ಪಿಗೆ ನೀಡಿತ್ತು.

ಗುರುವಾರ ಚುನಾವಣಾ ಆಯೋಗ ಶಿವಮೊಗ್ಗ, ತುಮಕೂರು ಮತ್ತು ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಆಗಸ್ಟ್ 31ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.

ಮೈಸೂರು, ಶಿವಮೊಗ್ಗ, ತುಮಕೂರು ಪಾಲಿಕೆ ಚುನಾವಣೆಗೆ ಒಪ್ಪಿಗೆಮೈಸೂರು, ಶಿವಮೊಗ್ಗ, ತುಮಕೂರು ಪಾಲಿಕೆ ಚುನಾವಣೆಗೆ ಒಪ್ಪಿಗೆ

ಚುನಾವಣೆ ದಿನಾಂಕ ಘೋಷಣೆಯಾದ ತಕ್ಷಣ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. 2011ರ ಜನಗಣತಿಯಂತೆ ಕ್ಷೇತ್ರ ಪುನರ್ ವಿಂಗಡನೆ ಮಾಡಿ, ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ರಾಜ್ಯ ಪತ್ರ ಹೊರಡಿಸಲಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಅಂಕಿ ಸಂಖ್ಯೆಗಳ ಲೆಕ್ಕಸ್ಥಳೀಯ ಸಂಸ್ಥೆಗಳ ಚುನಾವಣೆ ಅಂಕಿ ಸಂಖ್ಯೆಗಳ ಲೆಕ್ಕ

ಚುನಾವಣಾ ವೇಳಾಪಟ್ಟಿ

* ಆಗಸ್ಟ್ 13 ರಂದು ಅಧಿಸೂಚನೆ ಪ್ರಕಟ
* ಆಗಸ್ಟ್ 20 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
* ಆಗಸ್ಟ್ 21 ನಾಮಪತ್ರಗಳ ಪರಿಶೀಲನೆ
* ಆಗಸ್ಟ್ 23 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
* ಆಗಸ್ಟ್ 31 ಮತದಾನ (ಬೆಳಗ್ಗೆ 7 ರಿಂದ ಸಂಜೆ 5 ಗಂಟೆ)
* ಆಗಸ್ಟ್ 2 ಅಗತ್ಯವಿದ್ದರೆ ಮರು ಮತದಾನ
* ಸೆಪ್ಟೆಂಬರ್ 3 ಮತ ಎಣಿಕೆ (ಬೆಳಗ್ಗೆ 8ರಿಂದ)

ಮೈಸೂರು ಮಹಾನಗರ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆಯಲ್ಲಿ 65 ವಾರ್ಡ್‌ಗಳಿವೆ. 725 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ.

* ಒಟ್ಟು 7,99,422 ಮತದಾರರು ಇದ್ದಾರೆ. ಪುರುಷರು 4,01,730, ಮಹಿಳೆಯರು 3,97,594, ಇತರೆ 98

ಶಿವಮೊಗ್ಗ ಪಾಲಿಕೆ

ಶಿವಮೊಗ್ಗ ಪಾಲಿಕೆ

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 35 ವಾರ್ಡ್‌ಗಳಿವೆ. 228 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ.

* ಒಟ್ಟು 2,74,218 ಮತದಾರರು ಇದ್ದಾರೆ. ಪುರುಷರು 1,35,524, ಮಹಿಳೆಯರು 1,38,673, ಇತರೆ 21.

* ಒಬ್ಬರು ಐಎಎಸ್ ಅಧಿಕಾರಿಯನ್ನು ವಿಶೇಷ ವೀಕ್ಷಕರಾಗಿ ಚುನಾವಣೆಗೆ ನೇಮಿಸಲಾಗಿದೆ.

ತುಮಕೂರು ಮಹಾನಗರ ಪಾಲಿಕೆ

ತುಮಕೂರು ಮಹಾನಗರ ಪಾಲಿಕೆ

ತುಮಕೂರು ಮಹಾನಗರ ಪಾಲಿಕೆಯಲ್ಲಿ 35 ವಾರ್ಡ್‌ಗಳಿವೆ. 271 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ.

* ಒಟ್ಟು 2,59,513 ಮತದಾರರು ಇದ್ದಾರೆ. 1,28,882 ಪುರುಷ, 1,30,597 ಮಹಿಳೆಯರು, 34 ಇತರ ಮತದಾರರು ಇದ್ದಾರೆ.

ಖರ್ಚು, ಇತರ ಮಾಹಿತಿ

ಖರ್ಚು, ಇತರ ಮಾಹಿತಿ

* ಚುನಾವಣೆಯಲ್ಲಿ ಅಭ್ಯರ್ಥಿ 3 ಲಕ್ಷ ರೂ.ಗಳನ್ನು ಖರ್ಚು ಮಾಡಬಹುದಾಗಿದೆ.

* ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಕೆ ಮಾಡಲಾಗುತ್ತದೆ. ಚುನಾವಣೆಗೆ ಒಟ್ಟು 1, 534ಮತ ಯಂತ್ರಗಳನ್ನು ಸಿದ್ಧಪಡಿಸಲಾಗಿದೆ.

* ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನೋಟಾ (ಮೇಲ್ಕಂಡ ಯಾರೂ ಅಲ್ಲ) ಮತ ಚಲಾವಣೆಗೆ ಅವಕಾಶ ನೀಡಲಾಗಿದೆ.

English summary
Karnataka State Election Commission announced the timetable for Shivamogga, Tumakuru and Mysuru city corporation elections 2018. The code of conduct will come in force with immediate effect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X