ನಾನು ರಾಜಕೀಯಕ್ಕೆ ಬರಲ್ಲ, ಚುನಾವಣೆಗೆ ನಿಲ್ಲಲ್ಲ: ಶಿವರಾಜ್‌ಕುಮಾರ್

Posted By:
Subscribe to Oneindia Kannada

ದಾವಣಗೆರೆ, ಮಾರ್ಚ್‌ 26: ನಾನು ಸಿನಿಮಾದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೇನೆ, ರಾಜಕೀಯಕ್ಕೆ ಬರುವ ಮಾತೇ ಇಲ್ಲ ಎಂದು ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ದಾವಣಗೆರೆಯಲ್ಲಿ 'ಟಗರು' ಚಿತ್ರದ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಆದರೆ ನನ್ನ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ಮಾತ್ರ ರಾಜಕೀಯದಲ್ಲಿ ಇರುತ್ತಾರೆ ಎಂದರು.

ಜೆಡಿಎಸ್ ಅಭ್ಯರ್ಥಿ ಪರ ಗೀತಾ ಶಿವರಾಜ್‌ಕುಮಾರ್ ಪ್ರಚಾರ

ಉಪೇಂದ್ರ ಅವರ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿ, 'ಉಪೇಂದ್ರ ಅವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ನಾನು ಸದಾ ಅವರಿಗೆ ಬೆಂಬಲ ನೀಡುತ್ತೇನೆ, ಉಪೇಂದ್ರ ಅವರು ಯಾವಾಗಲೂ ಬದಲಾವಣೆ ತರಲು ಪ್ರಯತ್ನ ಮಾಡುತ್ತಿರುತ್ತಾರೆ, ರಾಜಕೀಯದಲ್ಲೂ ಅದೇ ಪ್ರಯತ್ನ ಮಾಡುತ್ತಿದ್ದಾರೆ' ಎಂದರು.

Shivaraj Kumar clarifies that he wont enters politics

ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಸಂಸ್ಕೃತಿ ಇದೆ ಎಂದು ಮಂಡ್ಯ ರಮೇಶ್ ಅವರು ಹೇಳಿರುವ ಬಗ್ಗೆ ಗಮನ ಸೆಳೆದಾಗ ರಮೇಶ್ ಅವರ ಮಾತಿಗೆ ಬೇಸರ ವ್ಯಕ್ತಪಡಿಸಿದ ಅವರು 'ಮಂಡ್ಯ ರಮೇಶ್ ಅವರು ಏಕೆ ಈ ರೀತಿ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಚಿತ್ರರಂಗದಲ್ಲಿ ಇದುವರೆಗೂ ಈ ರೀತಿಯ ಘಟನೆ ನಡೆದಿಲ್ಲ' ಎಂದು ತಿಳಿಸಿದರು.

ಶಿವಣ್ಣನ ಮನವಿಗೆ ಸರ್ಕಾರದ ಸ್ಪಂದನೆ, ಮಾನ್ಯತಾ ಬಳಿ ಟ್ರಾಫಿಕ್ ಒನ್ವೇ!

ಟಗರು ಚಿತ್ರ 25ನೇ ದಿನದ ವಿಜಯೋತ್ಸವ ಕ್ಕೆ ದಾವಣಗೆರೆಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೋಡ್ ಶೋ ನಡೆಸಿದರು. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಅಶೋಕ ಚಿತ್ರಮಂದಿರದ ವರೆಗೂ ರೋಡ್ ಶೋ ನಡೆಸಿ, ಅಭಿಮಾನಿಗಳಿಗೆ ಖುಷಿಯಿಂದ ಕೈ ಬೀಸಿ ಸಂತಸ ವ್ಯಕ್ತಪಡಿಸಿದರು.

ತಮ್ಮ ಮೆಚ್ಚಿನ ನಟನನ್ನು ನೋಡಲು ಸಾವಿರಾರು ಅಭಿಮಾನಿಗಳು ಆಗಮಿಸಿದ ಕಾರಣ ನೂಕು ನುಗ್ಗಲು ಉಂಟಾಗಿ ಜನರನ್ನು ನಿಯಂತ್ರಿಸಲು ಪೋಲೀಸರು ಲಘು ಲಾಠಿ ಪ್ರಹಾರ ಮಾಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Actor Shivaraj Kumar said He wont enters politics but his wife Geeta Shivarajkumar will remain in politics. He also said that he will welcome the decision of Upendra to enter politics.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ