ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್

Posted By: Gururaj
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 12 : ನಟ ಶಿವರಾಜ್ ಕುಮಾರ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕುಮಾರಸ್ವಾಮಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.

'ಡಾ.ಸತ್ಯಕಿ ನನಗೆ ಎರಡನೇ ಜನ್ಮ ನೀಡಿದ್ದಾರೆ'

ಜೆ.ಪಿ.ನಗರದಲ್ಲಿನ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದ ಶಿವರಾಜ್ ಕುಮಾರ್ ಅವರು ಆರೋಗ್ಯ ವಿಚಾರಿಸಿದರು. ಅರ್ಧಗಂಟೆಗೂ ಹೆಚ್ಚು ಕಾಲ ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿದರು. ಶಾಸಕ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.

Shivaraj Kumar meets HD Kumaraswamy

ಆರೋಗ್ಯದ ಕಡೆ ಹೆಚ್ಚು ಗಮನ ಕೊಡಿ, ಹೆಚ್ಚು ವಿಶ್ರಾಂತಿ ಪಡೆಯಿರಿ. ನಂತರ ರಾಜ್ಯ ಪ್ರವಾಸ ಮಾಡಬಹುದು ಎಂದು ಶಿವಣ್ಣ ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ದಾರೆ.

ಎಚ್ ಡಿ ಕುಮಾರಸ್ವಾಮಿಗೆ ಆಪರೇಷನ್ ಸಕ್ಸಸ್:ಡಾ.ಮಂಜುನಾಥ

ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಅಕ್ಟೋಬರ್ 1ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಜೆ.ಪಿ.ನಗರದ ನಿವಾಸದಲ್ಲಿ ಅವರು ವಿಶ್ರಾಂತಿ ಪಡೆಯುತ್ತಿದ್ದು, ಯಾರನ್ನೂ ಭೇಟಿ ಮಾಡುತ್ತಿಲ್ಲ.

ಎಚ್.ಡಿ.ಕುಮಾರಸ್ವಾಮಿ ಅವರು ಸುಮಾರು ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದು, ನವೆಂಬರ್ 1ರಿಂದ ರಾಜ್ಯಪ್ರವಾಸ ಮಾಡಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kannada actor Shivaraj Kumar met JDS state president H.D.Kumaraswamy on October 12, 2017. Kumaraswamy underwent a heart surgery recently.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ