Shivaraj Tangadagi: ರಾಜ್ಯದಲ್ಲಿನ ಎಲ್ಲಾ ಬ್ಯಾಂಕ್‌ಗಳೂ ಕನ್ನಡಿಗರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು: ಶಿವರಾಜ್‌ ತಂಗಡಗಿ

ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಂದು ಬ್ಯಾಂಕ್‌ ಕೂಡ ಕನ್ನಡಿಗರೊಂದಿಗೆ ಕನ್ನಡದಲ್ಲೇ ಸ್ಪಂದಿಸಿ ವ್ಯವಹರಿಸುವ ಜವಾಬ್ದಾರಿ ಹೊಂದಿದೆ. ಕನ್ನಡದಲ್ಲಿ ಸೇವೆ ಪಡೆಯುವುದು ಕನ್ನಡಿಗರ ಭಾಷಾ ಹಕ್ಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ಸ್ಥಳೀಯ ಭಾಷೆ ಮಾತನಾಡಬಲ್ಲ ಅಧಿಕಾರಿಗಳನ್ನು ನೇಮಿಸಲು ಮುಂದಾಗಿರುವ ಬ್ಯಾಂಕ್‌ ಆಫ್‌ ಬರೋಡಾ ಕ್ರಮವನ್ನು ಸ್ವಾಗತಿಸಿರುವ ಅವರು, ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕ್‌ಗಳು ಕನ್ನಡ ಬಲ್ಲ ಅಭ್ಯರ್ಥಿಗಳ ನೇಮಕಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Shivaraj Tangadagi Said that All banks in the Karnataka state should deal with Kannadigas in Kannada

ಈ ವಿಚಾರಕ್ಕಾಗಿ ಹೋರಾಟ ನಡೆಸಿದ ಕನ್ನಡಪರ ಸಂಘಟನೆಗಳು ಹಾಗೂ ಧ್ವನಿ ಎತ್ತಿದ ಕನ್ನಡಿಗರಿಗೆ ಅಭಿನಂದನೆ ಸಲ್ಲಿಸಿರುವ ತಂಗಡಗಿ, ಕರ್ನಾಟಕದಲ್ಲಿ ಬ್ಯಾಂಕಿಂಗ್ ಸೇರಿದಂತೆ ಯಾವುದೇ ಸೇವೆ ಪಡೆಯುವ ಸಂದರ್ಭದಲ್ಲಿ ಕನ್ನಡಿಗರು ಭಾಷೆಯ ಅಡೆತಡೆ ಎದುರಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕೇಂದ್ರದಿಂದ ಸೂಕ್ತ ನಿಯಮ ರೂಪಿಸಲು ಆಗ್ರಹ

ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲ ಸಿಬ್ಬಂದಿ ಹಾಗೂ ಅಧಿಕಾರಿಗಳ ನೇಮಕಕ್ಕೆ ಆದ್ಯತೆ ನೀಡುವಂತೆ ಕೇಂದ್ರ ಹಣಕಾಸು ಇಲಾಖೆ ಸೂಕ್ತ ನಿಯಮ ರೂಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತಮ್ಮದೇ ನೆಲದಲ್ಲಿ ಬ್ಯಾಂಕಿಂಗ್ ಸೇರಿದಂತೆ ಯಾವುದೇ ಸೇವೆ ಪಡೆಯುವಾಗ ಭಾಷೆಯ ಸಮಸ್ಯೆ ಎದುರಾಗಬಾರದು. ಕನ್ನಡದಲ್ಲಿ ಸೇವೆ ಪಡೆಯುವುದು ಕನ್ನಡಿಗರ ಹಕ್ಕಾಗಿದ್ದು, ಅದನ್ನು ಖಾತ್ರಿಪಡಿಸುವುದು ಪ್ರತಿಯೊಂದು ಸಂಸ್ಥೆಯ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.

'ಇದು ಆತ್ಮಗೌರವದ ಪ್ರಶ್ನೆ'

ಕನ್ನಡಕ್ಕೆ ಆದ್ಯತೆ ನೀಡುವುದು ಕೇವಲ ಉದ್ಯೋಗದ ವಿಚಾರವಲ್ಲ. ಇದು ಕನ್ನಡಿಗರ **ಭಾಷಾ ಹಕ್ಕು ಮತ್ತು ಆತ್ಮಗೌರವದ ಪ್ರಶ್ನೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಸೇವೆ ನೀಡುವ ಸಂಸ್ಥೆಗಳಿಗೆ ಕನ್ನಡ ಭಾಷೆಯ ಅರಿವು ಇರಬೇಕು. ಅದೇ ರೀತಿ, ಕರ್ನಾಟಕದಲ್ಲಿ ಉದ್ಯೋಗ ನೀಡುವಾಗ ಕನ್ನಡ ಬಲ್ಲ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ವ್ಯವಸ್ಥೆ ಜಾರಿಗೆ ಬರಬೇಕು. ಬ್ಯಾಂಕಿಂಗ್ ಕ್ಷೇತ್ರ ಸೇರಿದಂತೆ ಎಲ್ಲ ಸೇವಾ ವಲಯಗಳಲ್ಲೂ ಕನ್ನಡಿಗರಿಗೆ ಕನ್ನಡದಲ್ಲೇ ಸೇವೆ ದೊರೆಯುವಂತಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ

ಭ್ರಷ್ಟಾಚಾರದ ಪಿತಾಮಹರೇ ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ನಡೆಸುತ್ತಿರುವ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಂದೆ ಯಾಕೆ ಜೈಲಿಗೆ ಹೋಗಿದ್ದರು? ಅಕ್ರಮಗಳ ಹಿನ್ನೆಲೆ ಜೈಲು ಪಾಲಾಗಿದ್ದ ಜನಾರ್ದನರೆಡ್ಡಿ ಯಾಕೆ ಪಾದಯಾತ್ರೆ ಮಾಡುತ್ತಿದ್ದಾರೆ? ಎಂಬುದನ್ನು ಉತ್ತರಿಸಲಿ' ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್‌. ತಂಗಡಗಿ ಅವರು ಸವಾಲು ಹಾಕಿದ್ದಾರೆ.

ಬಿಜೆಪಿಯವರು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಪಾದಯಾತ್ರೆ ಮಾಡಲಿ. ರಾಜ್ಯಾದ್ಯಂತ ಬರ ಆವರಿಸಿದೆ. ಕೇಂದ್ರದ ವಿರುದ್ಧ ಬರ ಪರಿಹಾರ ನೀಡುವಂತೆ ಒತ್ತಾಯಿಸಿ ಪಾದಯಾತ್ರೆ ಮಾಡಲಿ. ಅದನ್ನು ಬಿಟ್ಟು ರಾಜಕೀಯ ಮಾಡಲು ಮಾಡಬಾರದು ಎಂದು ಮಂಗಳವಾರ ರಾತ್ರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಇವರಿಗೆ ಸದನದಲ್ಲಿ ಜನರ ಸಮಸ್ಯೆಗಳ ಚರ್ಚೆ ಮಾಡಲು ಸಮಯವಿಲ್ಲ. ರೈತರು ಹಾಗೂ ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಇವರಿಗೆ ಬೇಕಾಗಿರುವುದು ಕೇವಲ ರಾಜಕಾರಣ. ನೂರಕ್ಕೆ ನೂರು ಇದು ಬಿಜೆಪಿಯವರ ಪಾದಯಾತ್ರೆಯಲ್ಲ. ಇದು ಪಶ್ಚಾತ್ತಾಪದ ಯಾತ್ರೆ. ಎಲ್ಲಾ ಭ್ರಷ್ಟಾಚಾರಿಗಳು, ರಾಜ್ಯದ ವಿರುದ್ಧ ಕೆಲಸ ಮಾಡಿದವರು ಸೇರಿಕೊಂಡು ಈ ಪಶ್ಚಾತ್ತಾಪದ ಪಾದಯಾತ್ರೆ ಕೈಗೊಂಡಿದ್ದಾರೆ ಎಂದು ಕಿಡಿ ಕಾರಿದರು.

ಕೆಪಿಎಸ್‌ಸಿ‌ ಅಧ್ಯಕ್ಷರನ್ನು ನೇಮಿಸಿದ್ದು ಯಾರು?

ಕೇಂದ್ರ ಸಚಿವ ಸೋಮಣ್ಣ ಅವರು ಪಾದಯಾತ್ರೆಯ ಬಗ್ಗೆ ವಿರೋಧವಾಗಿ ಮಾತನಾಡುತ್ತಾರೆ. ಕುಮಾರಸ್ವಾಮಿ ಅವರೂ ಈಗ ಪಾದಯಾತ್ರೆ ಯಾಕೆ? ಎಂದು ಪ್ರಶ್ನಿಸುತ್ತಿದ್ದಾರೆ. ಹೀಗಿದ್ದರೂ ಪಾದಯಾತ್ರೆ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.

ಭೋವಿ ಅಭಿವೃದ್ಧಿ ನಿಗಮದ ಹಣವನ್ನು ಲೂಟಿ ಮಾಡಿದ್ದು ಯಾರು? ಅಕ್ರಮ ನೇಮಕಾತಿ ಆರೋಪ ಎದುರಿಸುತ್ತಿರುವವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ಮಾಡಿದ್ದು ಯಾರು? ಈ ಪ್ರಕರಣದ ಆರೋಪಿಗಳು ಯಾರು? ಬಿಜೆಪಿಯನ್ನು ಜನರು ಮರೆತುಬಿಟ್ಟಿದ್ದರು. ಅದಕ್ಕಾಗಿ ಮತ್ತೆ ಜನರ ಮುಂದೆ ಕಾಣಿಸಿಕೊಳ್ಳಲು ಪಾದಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಯವರಿಗೆ ಮಾನ-ಮರ್ಯಾದೆ ಇದ್ದರೆ ಪಿಎಸ್‌ಐ ಹಗರಣ ಯಾರ ಕಾಲದಲ್ಲಿ ನಡೆಯಿತು ಎಂಬುದನ್ನು ಮೊದಲು ಹೇಳಲಿ ಎಂದರು.

ಎಸ್‌ಟಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಹೆಚ್ಚಿಸಿದವರು ನಾವು. ಆ ಹಣವನ್ನು ಎಸ್‌ಸಿ-ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ನೀಡಿದರೆ ತಪ್ಪೇನು? ಈ ಯೋಜನೆಯನ್ನು ರೂಪಿಸಿ ಜಾರಿಗೆ ತಂದವರು ನಾವು. ಇದರಲ್ಲಿ ನಿಮ್ಮ ಪಾಲು ಏನು? ತಾಕತ್ತು ಇದ್ದರೆ ಕೇಂದ್ರ ಸರ್ಕಾರಕ್ಕೆ ಹೇಳಿ, ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿಸಲಿ ಎಂದು ಆಗ್ರಹಿಸಿದರು.

ಕೊಪ್ಪಳ ಪ್ರಾಧಿಕಾರ ಹಗರಣದ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದೇನೆ. ಆರೋಪಿಗಳನ್ನು ಬಂಧಿಸಿರುವ ಮಾಹಿತಿ ಇದೆ. ಈ ಕುರಿತು ಸಭೆ ಕರೆದು ಚರ್ಚೆ ಮಾಡುತ್ತೇನೆ. ಸೈಟ್ ಹಂಚಿಕೆ ವಿಚಾರದಲ್ಲಿ ಎಲ್ಲೆಲ್ಲಿ ಅಕ್ರಮ ನಡೆದಿದೆ ಎಂಬುದರ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ನಡೆಸುತ್ತೇನೆ. ಅಗತ್ಯವಿದ್ದರೆ ತನಿಖೆಗೆ ಅಧಿಕೃತವಾಗಿ ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಬರ ಘೋಷಣೆಯಲ್ಲಿ ತಾರತಮ್ಯವಿಲ್ಲ

ಬರ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಬರ ಘೋಷಣೆಗೆ ಕೇಂದ್ರ ಸರಕಾರದ ಮಾರ್ಗಸೂಚಿಗಳಿವೆ. ಆ ಮಾರ್ಗಸೂಚಿಗಳ ಪ್ರಕಾರ ಅರ್ಹವಾಗಿರುವ ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್ ಅಥವಾ ಕಾಂಗ್ರೆಸ್ ಕ್ಷೇತ್ರ ಎಂಬ ಯಾವುದೇ ತಾರತಮ್ಯ ಮಾಡಿಲ್ಲ. ಎರಡನೇ ಸುತ್ತಿನಲ್ಲಿ ಮತ್ತಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+