ಡಿಸಿಎಂ ಬಿಗ್ ಆಪರೇಷನ್; ಹಲವು ಬಿಜೆಪಿ ನಾಯಕರನ್ನ ಭೇಟಿಯಾದ ಡಿ ಕೆ ಶಿವಕುಮಾರ್! ಕೈ ಹಿಡಿಯುತ್ತಾರಾ ಅತೃಪ್ತರು?
ಬೆಂಗಳೂರು, ಸೆಪ್ಟೆಂಬರ್ 7: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ನ ಆಪರೇಷನ್ ಹಸ್ತದ ಕುರಿತು ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. ಇತ್ತ ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್ ನಾಯಕರು ಹಲವು ಬಿಜೆಪಿ ಅಸಮಾಧಾನಿತರ ಸಂಪರ್ಕದಲ್ಲಿದ್ದಾರೆ.
ಹೌದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಕಳೆದ ಎರಡು ದಿನಗಳಿಂದ ಹಲವು ಬಿಜೆಪಿ ಅಸಮಾಧಾನಿತ ನಾಯಕರನ್ನ ಸಂಪರ್ಕಿಸಿರುವುದು ಭಾರೀ ಕುತೂಹಲ ಮೂಡಿಸಿದೆ. ಇನ್ನೂ ಸೋಮವಾರ (ಸೆಪ್ಟೆಂಬರ್ 4) ರಂದು ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ರವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಆದರೆ ಇದೀಗ ಡಿ ಕೆ ಶಿವಕುಮಾರ್ ಅವರು ಮಾಜಿ ಸಚಿವ ಕೃಷ್ಣಪ್ಪ ಅವರ ಪುತ್ರಿ ಹಾಗೂ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಅವರ ನಿವಾಸಕ್ಕೆ ಭೇಟಿ ಮಾಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇನ್ನೂ ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಯವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. ಅಲ್ಲದೇ ಬುಧವಾರ ಬೆಂಗಳೂರಿನ ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದು, ಆಪರೇಷನ್ ಹಸ್ತ ದ ವದಂತಿಯ ಬಗ್ಗೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಉಭಯ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ನಾಯಕರ ಮೇಲೆ ಅಸಮಾಧಾನಗೊಂಡಿದ್ದು, ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಶಿವರಾಮ್ ಹೆಬ್ಬಾರ್ ಹೋಗಲಿದ್ದಾರೆ ಎನ್ನುವ ಚರ್ಚೆ ಹೆಚ್ಚಾಗಿತ್ತು. ಅಲ್ಲದೇ ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಶಿವಿರಾಮ್ ಹೆಬ್ಬಾರ್ ಗೆ ಕಾಂಗ್ರೆಸ್ ಗಾಳ ಹಾಕಿದ್ಯಾ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ಹೆಚ್ಚಾಗಿದ್ದು, ಈ ಸಂದರ್ಭದಲ್ಲಿನ ಭೇಟಿ ಅನುಮಾನಗಳಿಗೆ ಕಾರಣವಾಗಿದೆ.

ಇನ್ನು ಡಿಕೆ ಶಿವಕುಮಾರ್ ಅವರನ್ನು ಶಿವರಾಮ್ ಹೆಬ್ಬಾರ್ ಭೇಟಿಯಾದ ವಿಚಾರದ ಕುರಿತು ಯಾವುದೇ ಪ್ರತಿಕ್ರಿಯಿ ನೀಡಿಲ್ಲ. ಬಿಜೆಪಿ ಶಾಸಕರಾದ ಶಿವರಾಮ್ ಹೆಬ್ಬಾರ್, ಎಸ್ಟಿ ಸೋಮಶೇಖರ್, ಭೈರತಿ ಬಸವರಾಜ್ ಅವರು ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈ ಹಿಂದೆಯೂ ಕೆಲವು ಬಾರಿ ಭೇಟಿಯಾಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಇತ್ತ ಮಂಡ್ಯ ಮಾಜಿ ಸಂಸದ ಶಿವರಾಮೇಗೌಡ ಅವರು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ರು, ಅಲ್ಲದೇ ಈ ಬಾರೀ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದ್ದು, ಶಿವರಾಮೇಗೌಡ ಅವರು ಡಿ ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿರುವುದು ಕುತೂಹಲ ಹುಟ್ಟಿಸಿದೆ.
ಇನ್ನೂ ಡಿ ಕೆ ಶಿವಕುಮಾರ್ ಭೇಟಿಯ ಕುರಿತು ಶಿವರಾಮೇಗೌಡ ಅವರು ಮಾತನಾಡಿ, ನಾನು ಹಾಗೂ ಡಿಕೆ ಶಿವಕುಮಾರ್ ಸಂಬಂಧಿಕರು. ಕಷ್ಟ ಸುಖ ಮಾತನಾಡಲು ಬಂದಿದ್ದೆ. ರಾಜಕೀಯ ವಿಚಾರ ಚರ್ಚಿಸಿಲ್ಲ. ಸಂಬಂಧಿಕನಾಗಿ ಕೆಲ ವಿಚಾರಗಳನ್ನು ಮಾತನಾಡಲು ಬಂದಿದ್ದೆ. ಹೀಗೆ ಆಗಾಗ ಬರುತ್ತಿರುತ್ತೇನೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.












Click it and Unblock the Notifications