ಕೆಪಿಎಸ್‌ಸಿ ಅಧ್ಯಕ್ಷರಾಗಿ ಶಿವಶಂಕರಪ್ಪ ಎಸ್. ಸಾಹುಕಾರ್ ನೇಮಕ
ಬೆಂಗಳೂರು, ಏಪ್ರಿಲ್ 4; ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕೆಪಿಎಸ್‌ಸಿ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿ ಕೆಪಿಎಸ್‌ಸಿ ಅಧ್ಯಕ್ಷರ ಹುದ್ದೆಯಿಂದ ಶನಿವಾರ ನಿವೃತ್ತರಾದರು.
ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡುವಂತೆ ಕರ್ನಾಟಕ ಸರ್ಕಾರ ಶಿಫಾರಸು ಮಾಡಿತ್ತು. ರಾಜ್ಯಪಾಲರು ಈ ಶಿಫಾರಸಿಗೆ ಅಂಕಿತ ಹಾಕಿದ್ದಾರೆ. ಶಿವಶಂಕರಪ್ಪ ಅವರ ಅವಧಿ ಇನ್ನೂ ಮೂರುವರೆ ವರ್ಷಗಳು ಇವೆ.

ಶಿವಶಂಕರಪ್ಪ ಎಸ್. ಸಾಹುಕಾರ್ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದವರು. 2019ರ ಸೆಪ್ಟೆಂಬರ್ 3ರಂದು ಅವರು ಕರ್ನಾಟಕ ಲೋಕಸೇವಾ ಆಯೋಗ್ಯ ಸದಸ್ಯರಾಗಿ ನೇಮಕಗೊಂಡಿದ್ದರು.
ಕರ್ನಾಟಕ ಸರ್ಕಾರ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕ ಮಾಡಿದೆ. ಇದರಿಂದಾಗಿ ಒಂದು ಸದಸ್ಯ ಸ್ಥಾನ ಖಾಲಿ ಆಗಿದೆ.












Click it and Unblock the Notifications