ಮತಗಟ್ಟೆ ಮಾಹಿತಿಗೆ ಪತ್ರ: ಶೋಭಾ ಕರಂದ್ಲಾಜೆ ನಡೆ ಏಕಪಕ್ಷಿಯವಾಗಿದೆ: ಎಎಪಿ ಆರೋಪ
ಬೆಂಗಳೂರು, ಏಪ್ರಿಲ್ 28: ಕಾರ್ಯಕರ್ತರಿಗೆ ಪತ್ರ ಬರೆದು ಮಾಹಿತಿ ಕಲೆ ಹಾಕಲು ಮುಂದಾಗುವ ಮೂಲಕ ರಾಜ್ಯ ಚುನಾವಣಾ ಆಯೋಗದ ಕಾರ್ಯಚಟುವಟಿಕೆಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಸ್ತಕ್ಷೇಪ ಸರಿಯಲ್ಲ ಎಂದು ಆಮ್ ಆದ್ಮಿ ಪಕ್ಷ ಖಂಡಿಸಿದೆ.
ಬೆಂಗಳೂರಿನ ಎಎಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಪ್ರಿಂಕೋರ್ಟ್ ಹಿರಿಯ ವಕೀಲ ವಕೀಲ ಮತ್ತು ಎಎಪಿ ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ಅವರು ಕೇಂದ್ರ ಸಚಿವೆಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು ತಮ್ಮ ಕಾರ್ಯಕರ್ತರಿಗೆ ಕಾಗದ ಬರೆದಿದ್ದಾರೆ. ಯಾವ - ಯಾವ ಮತಗಟ್ಟೆಗಳನ್ನು ಸೂಕ್ಷ್ಣ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಯಾವ ಭಾಗಗಳಲ್ಲಿ ಕೇಂದ್ರ ಸೇನಾಪಡೆಗಳು ಅಥವಾ ಅರೇ ಸೇನಾಪಡೆ ತುಕಡಿಗಳನ್ನು ನಿಯೋಜಿಸಬೇಕು ಎಂಬ ವಿವರಗಳನ್ನು ತಾವು ಕೇಳಿರುವ ಬಗ್ಗೆ ಕಾಗದದಲ್ಲಿ ಉಲ್ಲೇಖಿಸಿದ್ದಾರೆ.
ಕೇಂದ್ರ ಸಚಿವೆಯಾಗಿರುವ ಕರಂದ್ಲಾಜೆಯವರು ತಮಗೆ ಬೇಕಾದ ಮಾಹಿತಿಯನ್ನು ಅವರು ಡಿಸಿ ಮತ್ತು ಎಸ್‌ಪಿ ಗಳನ್ನ ಸಂಪರ್ಕ ಮಾಡಿ ಈ ವಿವರಗಳನ್ನು ಪಡೆಯಬಹುದಿತ್ತು. ಆದರೆ ಅದೆಲ್ಲ ಬಿಟ್ಟು ಬಿಜೆಪಿ ಕಾರ್ಯಕರ್ತರಿಂದ ಈ ರೀತಿ ಮಾಹಿತಿ ಕಲೆ ಹಾಕುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.
ಕೇಂದ್ರ ಗೃಹ ಸಚಿವರಿಂದ ಬೆದರಿಕೆ?
ಇನ್ನೂ ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಬಿಜೆಪಿ ಸರ್ಕಾರ ಬಿಟ್ಟು ಬೇರೆ ಯಾವುದಾದರೂ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕೋಮು ಗಲಭೆ, ಕೋಮು ಘರ್ಷಣೆ ಆಗುವ ಸಾಧ್ಯತೆ ಇದೆ ಎಂದಿದ್ದಾರೆ. ಈ ಮೂಲಕ ಅವರು ರಾಜ್ಯದ ಜನರಿಗೆ ಬೆದರಿಕೆ ಹಾಕಿದಂತಿದೆ ಎಂದು ಅವರು ಆರೋಪಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು ಬರೆದ ಕಾಗದ ಪ್ರಜಾಪ್ರಭುತ್ವಕ್ಕೆ ಮಾರಕ ಹಾಗೂ ರಾಜಕೀಯ ವ್ಯವಸ್ಥೆಯಲ್ಲಿ ಏಕ ಪಕ್ಷಕ್ಕೆ ಅನುಕೂಲಗಳನ್ನ ಮಾಡಿ, ಬೇರೆ ಪಕ್ಷಗಳಿಗೆ ತೊಂದರೆಗಳನ್ನ ಉಂಟು ಮಾಡುವ ರೀತಿ ಕಾಣಿಸುತ್ತಿದೆ. ಒಂದು ರಾಜಕೀಯ ಪಕ್ಷ ಹಾಗೂ ಕೇಂದ್ರ ಗೃಹ ಸಚಿವರು ಈ ರೀತಿಯ ಬೆದರಿಕೆಯನ್ನ ಹಾಕುವುದು ಎಷ್ಟರ ಮಟ್ಟಿಗೆ ಸರಿ ಎಂದು ಬ್ರಿಜೇಶ್ ಕಾಳಪ್ಪ ಕಿಡಿ ಕಾರಿದರು.
ರಾಜ್ಯದಲ್ಲಿ ಪಂಜಾಬ್ ಸಿಎಂ ರೋಡ್ ಶೋ
ಆಮ್ ಆದ್ಮಿ ಪಕ್ಷದ ಚುನಾವಣಾ ಸ್ಟಾರ್ ಪ್ರಚಾರಕರಾಗಿ ಆಪ್ ಪಕ್ಷದ ಪಂಜಾಜ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 30 ರಂದು ಚಂಡೀಗಢನಿಂದ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಚಿತ್ರದುರ್ಗದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಜಗದೀಶ್ ಪರವಾಗಿ ಬೃಹತ್ ಪ್ರಚಾರ ಮತ್ತು ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಬಳಿಕ ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿರುವ ಭಗವಂತ್ ಮಾನ್ ಅವರು ಬೆಂಗಳೂರಿನ ಪುಲಕೇಶಿನಗರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಸುರೇಶ್ ರಾಥೋಡ್ ಪರವಾಗಿ ಬೃಹತ್ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ.
ಮೇ 1 ರಂದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಕೀರ್ತನ್ ಕುಮಾರ್ ಅವರಿಗೆ ಬೆಂಬಲಿಸಿ ಭಗವಂತ್ ಮಾನ್ ಅವರು ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಬೆಂಗಳೂರಿನಿಂದ ಬೀದರ್‌ಗೆ ತೆರಳಲಿದ್ದಾರೆ. ಬೀದರ್ ಜಿಲ್ಲೆಯ ಮನ್ನೆಖೇಳ್ಳಿಯಲ್ಲಿ ಬೃಹತ್ ಮಟ್ಟದ ಜನಸಭೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದರು.
ಅಮ್ ಆದ್ಮಿ ಪಕ್ಷದ ಮಾಧ್ಯಮ ವಕ್ತಾರೆ ಉಶಾ ಮೋಹನ್ ಅವರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.












Click it and Unblock the Notifications