'ಶೋಭಾ ಕರಂದ್ಲಾಜೆ ರಾಜ್ಯದ ರೈತರ ಪರವಾಗಿ ಯಾವ ಕೆಲಸಗಳನ್ನ ಮಾಡಿಲ್ಲ, ಅವರಿಗೆ ಮತಹಾಕಲು ಕಾರಣಗಳೇ ಇಲ್ಲ'
ಬೆಂಗಳೂರು, ಏಪ್ರಿಲ್ 07:ಕೇಂದ್ರ ಕೃಷಿ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ರಾಜ್ಯದ ರೈತರ ಪರವಾಗಿ ಯಾವ ಕೆಲಸಗಳನ್ನೂ ಮಾಡಲಿಲ್ಲ. ಸಂಸದೆಯಾಗಿಯೂ ನಾಡಿನ ಪರವಾಗಿ ಕೆಲಸ ಮಾಡಲಿಲ್ಲ. ಇಂಥವರಿಗೆ ಬೆಂಬಲಿಸಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಉತ್ತರ ಲೋಕಸಭಾ ಕ್ಷೇತ್ರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್ ಗೌಡರ ಪರವಾಗಿ ನಡೆದ ಬೂತ್ ಮುಖಂಡರು ಮತ್ತು ಬ್ಲಾಕ್ ಮುಖಂಡರುಗಳ ಬೃಹತ್ ಸಭೆಯನ್ನು ಹಾಗೂ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಮಾತನಾಡಿದ ಅವರು, ಉತ್ತರ ಲೋಕಸಭಾ ಕ್ಷೇತ್ರದ ಪ್ರೊ.ರಾಜೀವ್ ಗೌಡ ಅವರು ಪಾರ್ಲಿಮೆಂಟಿನಲ್ಲಿ ಸಮರ್ಥವಾಗಿ ನಾಡಿನ ಪರವಾಗಿ, ಕ್ಷೇತ್ರದ ಜನರ ಪರವಾಗಿ ಧ್ವನಿ ಎತ್ತುತ್ತಾರೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರಿಗೆ ನೀವು ಮತ ಹಾಕಲು ಕಾರಣಗಳೇ ಇಲ್ಲ. ಅವರು ಸಂಸದರಾಗಿ ನಾಡಿನ ಜನತೆಗೆ ಆದ ಅನ್ಯಾಯಗಳು ಬಗ್ಗೆ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಲಿಲ್ಲ. ಶೋಭಾ ಕರಂದ್ಲಾಜೆ ಅವರನ್ನು ಉಡುಪಿ-ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೇ ಗೋ-ಬ್ಯಾಕ್ ಎಂದು ಓಡಿಸಿದ್ದಾರೆ. ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಕಾರ್ಯಕರ್ತರೇ ಅವರನ್ನು ಗೋ ಬ್ಯಾಕ್ ಎಂದು ಕಳುಹಿಸಿದ್ದಾರೆ. ಆದ್ದರಿಂದ ಇವರಿಗೆ ಇಲ್ಲಿ ಅವರಿಗೆ ಮತಹಾಕಲು ಕಾರಣಗಳೇ ಇಲ್ಲ ಎಂದರು.
ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರೊ.ರಾಜೀವ್ ಗೌಡ ಗೆಲ್ಲೋದು ಅಷ್ಟೇ ಸತ್ಯ. ಶೋಭಾ ಕರಂದ್ಲಾಜೆ ಅವರು ಸಂಸದರಾಗಿ ಜನರ ಕೆಲಸ ಮಾಡಲಿಲ್ಲ. ಈ ಕಾರಣಕ್ಕೇ ಮೋದಿಯವರ ಮುಖನೋಡಿ ಮತ ಕೊಡಿ ಎಂದು ಕೇಳುತ್ತಿದ್ದಾರೆ. ಬಿಜೆಪಿಯವರೂ ಸರ್ಕಾರ ನಡೆಸಿ ಜನರ ಕೆಲಸ ಮಾಡದೆ ತಿರಸ್ಕೃತಗೊಂಡರು. ಹೀಗಾಗಿ ಇವರೂ ಮೋದಿ ಮುಖ ನೋಡಿ ಮತ ಹಾಕಲು ಕೇಳುತ್ತಿದ್ದಾರೆಯೇ ಹೊರತು ತಮ್ಮ ಸಾಧನೆಗಳ ಮೇಲೆ ಕೇಳುತ್ತಿಲ್ಲ.
ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರೂಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮಮತಕ್ಕೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು.
ನುಡಿದಂತೆ ನಡೆದು ನಿಮ್ಮ ಮತಗಳಿಗೆ ಘನತೆ ತರುವ ಕೆಲಸವನ್ನು ನಾವು ಮಾಡಿದ್ದೇವೆ. ನಮಗೆ ಶಕ್ತಿ ತುಂಬಿ ಎಂದು ಕರೆ ನೀಡಿದರು. ರಾಜೀವ್ ಗೌಡರನ್ನು ಗೆಲ್ಲಿಸಿ ಕೃಷ್ಣಬೈರೇಗೌಡರನ್ನು ಮತ್ತಷ್ಡು ಗಟ್ಟಿಗೊಳಿಸಿ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕರೆ ನೀಡಿ, ಕನಿಷ್ಠ 50 ಸಾವಿರ ಮತಗಳ ಲೀಡ್ ಅನ್ನು ಈ ವಿಧಾನಸಭಾ ಕ್ಷೇತ್ರದಲ್ಲಿ ನೀಡಬೇಕು ಎಂದು ವಿನಂತಿಸಿದರು
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗೋಪಿಕೃಷ್ಣ ಅವರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು, ರಾಜೀವ್ ಗೌಡರನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿಗಳ ಕೈ ಬಲಪಡಿಸುವುವಂತೆ ಕೋರಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications