ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆಗೆ ಟಿಕೆಟ್ ಇಲ್ಲ!

|
Google Oneindia Kannada News

Recommended Video

Lok Sabha Elections 2019 : ಶೋಭಾ ಕರಂದ್ಲಾಜೆಗೆ ಟಿಕೆಟ್ ಇಲ್ಲ! | Oneindia Kannada

ಬೆಂಗಳೂರು, ಡಿಸೆಂಬರ್ 10 : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಈ ಬಾರಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಾಯ ಕೇಳಿಬಂದಿದೆ. ಹಾಗಾಗರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಸದ್ಯದ ಪ್ರಶ್ನೆ.

ಶೋಭಾ ಕರಂದ್ಲಾಜೆ ಅವರು ರಾಷ್ಟ್ರ ರಾಜಕೀಯದಲ್ಲಿ ಮುಂದುವರೆಯಲಿದ್ದಾರಾ? ಅಥವ ರಾಜ್ಯ ರಾಜಕೀಯಕ್ಕೆ ವಾಪಸ್ ಬರಲಿದ್ದಾರಾ? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಂದರ್ಭದಲ್ಲಿಯೇ ಸ್ಥಳೀಯ ನಾಯಕರು ಶೋಭಾ ಅವರಿಗೆ ಟಿಕೆಟ್ ಬೇಡ ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.

ರಾಜ್ಯ ರಾಜಕಾರಣದಿಂದ ಶೋಭಾಗೆ ಮುಕ್ತಿ?ಲೋಕಸಭೆಗೆ ಬೆಂಗಳೂರಿಂದ ಸ್ಪರ್ಧೆ?ರಾಜ್ಯ ರಾಜಕಾರಣದಿಂದ ಶೋಭಾಗೆ ಮುಕ್ತಿ?ಲೋಕಸಭೆಗೆ ಬೆಂಗಳೂರಿಂದ ಸ್ಪರ್ಧೆ?

ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಬಿಜೆಪಿಯ ಭದ್ರಕೋಟೆ. 2019ರ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿಗಳು ಸ್ಪರ್ಧೆ ಮಾಡಬೇಕು ಎಂಬುದು ಕಾರ್ಯಕರ್ತರ ಆಗ್ರಹವಾಗಿದೆ. ಆದ್ದರಿಂದ, ಚುನಾವಣೆಯ ಸಮಯದಲ್ಲಿ ಕ್ಷೇತ್ರದ ಅಭ್ಯರ್ಥಿ ಬದಲಾಗುವ ಸಾಧ್ಯತೆ ಇದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು?ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು?

ಬಿಜೆಪಿ ಸೇರರುವ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಜೀವರಾಜ್ ಅವರ ಹೆಸರುಗಳು ಅಭ್ಯರ್ಥಿ ಸ್ಥಾನಕ್ಕೆ ಕೇಳಿಬರುತ್ತಿವೆ. ಯಾರು ಅಭ್ಯರ್ಥಿಯಾಗಲಿದ್ದಾರೆ? ಎಂದು ಕಾದು ನೋಡಬೇಕಿದೆ....

ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಶೋಭಾ ಕರಂದ್ಲಾಜೆಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಶೋಭಾ ಕರಂದ್ಲಾಜೆ

2014ರಲ್ಲಿ ದಾಖಲೆಯ ಗೆಲುವು

2014ರಲ್ಲಿ ದಾಖಲೆಯ ಗೆಲುವು

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರು 2014ರ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿದ್ದಾರೆ. 581168 ಮತಗಳನ್ನು ಪಡೆದಿದ್ದ ಅವರು ಕಾಂಗ್ರೆಸ್‌ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಸೋಲಿಸಿದ್ದರು. ಆದರೆ, ಈಗ ಜಯಪ್ರಕಾಶ್ ಹೆಗ್ಡೆ ಬಿಜೆಪಿಯಲ್ಲಿದ್ದಾರೆ.

ಸ್ಥಳೀಯ ಅಭ್ಯರ್ಥಿ ಬೇಕು

ಸ್ಥಳೀಯ ಅಭ್ಯರ್ಥಿ ಬೇಕು

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾರ್ಯಕರ್ತರು ಸ್ಥಳೀಯ ಅಭ್ಯರ್ಥಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಶೋಭಾ ಕರಂದ್ಲಾಜೆ ಅವರು ಕ್ಷೇತ್ರಕ್ಕೆ ಸರಿಯಾಗಿ ಬರುವುದಿಲ್ಲ ಜನರ ಸಮಸ್ಯೆಗಳನ್ನು ಕೇಳಿಲ್ಲ. ಹೇಳಿಕೊಳ್ಳುವ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂಬುದು ಕಾರ್ಯಕರ್ತರ ಆರೋಪವಾಗಿದೆ.

ರಾಜ್ಯ ರಾಜಕಾರಣಕ್ಕೆ?

ರಾಜ್ಯ ರಾಜಕಾರಣಕ್ಕೆ?

ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ? ಎಂಬ ಸುದ್ದಿಗಳು ಬಲವಾಗಿ ಹಬ್ಬಿವೆ. ಆದ್ದರಿಂದ, ಅವರು ಈ ಬಾರಿಯ ಲೋಕಸಭಾ ಚುನಾವಣೆಗೂ ಸ್ಪರ್ಧೆ ಮಾಡುವುದಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ. ಅದಕ್ಕೆ ಸರಿಯಾಗಿ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ಕೊಡಿ ಎಂಬ ಕೂಗು ಎದ್ದಿದೆ. ಉಡುಪಿ ಚಿಕ್ಕಮಗಳೂರು ಬಿಜೆಪಿ ಭದ್ರಕೋಟೆ. ಈ ಬಾರಿ ಯಾರಿಗೆ ಟಿಕೆಟ್ ಸಿಗಲಿದೆ? ಎಂದು ಕಾದು ನೋಡಬೇಕು.

ಯಾರಿಗೆ ಟಿಕೆಟ್?

ಯಾರಿಗೆ ಟಿಕೆಟ್?

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಜೀವರಾಜ್ ಅವರ ಹೆಸರು ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೇಳಿಬರುತ್ತಿದೆ. ಅದರಲ್ಲೂ ಜಯಪ್ರಕಾಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಬೇಕು ಎಂಬ ಕಾರಣಕ್ಕಾಗಿಯೇ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಿಲ್ಲ ಎಂಬ ವಿಶ್ಲೇಷಣೆ ಇದೆ.

2014ರ ಫಲಿತಾಂಶ

2014ರ ಫಲಿತಾಂಶ

2014ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದರು
* ಶೋಭಾ ಕರಂದ್ಲಾಜೆ - 581168 ಮತ
* ಜಯಪ್ರಕಾಶ್ ಹೆಗ್ಡೆ (ಕಾಂಗ್ರೆಸ್) - 399525 ಮತ
* ವಿ.ಧನಂಜಯ್ ಕುಮಾರ್ (ಜೆಡಿಎಸ್) - 14895 ಮತಗಳು.

English summary
Former minister and sitting MP Shobha Karandlaje may miss BJP ticket from Udupi-Chikmagalur Lok Sabha constituency in 2019 Lok Sabha Elections 2019. Local party leaders demand for ticket to local leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X