ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್‌ನಲ್ಲಿ ಐಎಂಎ ಹಗರಣ ಪ್ರಸ್ತಾಪಿಸಿದ ಶೋಭಾ ಕರಂದ್ಲಾಜೆ

|
Google Oneindia Kannada News

ಬೆಂಗಳೂರು, ಜೂನ್ 27 : 'ಐಎಂಎ ಹಗರಣದ ರೂವಾರಿ ಮನ್ಸೂರ್ ಖಾನ್ ಜೊತೆ ಕರ್ನಾಟಕ ಸರ್ಕಾರ ಶಾಮೀಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಜೊತೆ ಆತ ಬಾಂಧವ್ಯ ಹೊಂದಿದ್ದ' ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಗುರುವಾರ ಸಂಸತ್‌ನಲ್ಲಿ ಶೋಭಾ ಕರಂದ್ಲಾಜೆ ಅವರು ಐಎಂಎ ಹಗರಣದ ಕುರಿತು ವಿಷಯ ಪ್ರಸ್ತಾಪಿಸಿದರು, 'ಕರ್ನಾಟಕ ಸರ್ಕಾರ ರಚನೆ ಮಾಡಿರುವ ಎಸ್ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ಎಸ್‌ಐಟಿ ತನಿಖೆಯಲ್ಲಿ ನಂಬಿಕೆ ಇಲ್ಲ. ಹಗರಣದ ಕುರಿತು ಸಿಬಿಐ ತನಿಖೆಯಾಗಬೇಕು' ಎಂದು ಒತ್ತಾಯಿಸಿದರು.

ಐಎಂಎ ಹಗರಣದ ತನಿಖೆ : ಬಿಜೆಪಿ ಸಂಸದರಿಂದ ಅಮಿತ್‌ ಶಾಗೆ ಮನವಿಐಎಂಎ ಹಗರಣದ ತನಿಖೆ : ಬಿಜೆಪಿ ಸಂಸದರಿಂದ ಅಮಿತ್‌ ಶಾಗೆ ಮನವಿ

'ಐಎಂಎ ಮುಖ್ಯಸ್ಥ ಹೆಚ್ಚಿನ ಲಾಭ ನೀಡುವ ಆಮಿಷವೊಡ್ಡಿ ಜನರಿಂದ ಹಣವನ್ನು ಪಡೆದಿದ್ದ. ಜನರು ಹೂಡಿಕೆ ಮಾಡಿರುವ ಹಣದೊಂದಿಗೆ ಆತ ಪರಾರಿಯಾಗಿದ್ದಾನೆ. ಎರಡು ತಿಂಗಳಿನಿಂದ ಆತ ನಾಪತ್ತೆಯಾಗಿದ್ದಾನೆ' ಎಂದು ಹೇಳಿದರು.

ಐಎಂಎ ವಂಚನೆ ಪ್ರಕರಣ ಸಿಬಿಐಗೆ ವಹಿಸಲು ಬಿಜೆಪಿ ಆಗ್ರಹಐಎಂಎ ವಂಚನೆ ಪ್ರಕರಣ ಸಿಬಿಐಗೆ ವಹಿಸಲು ಬಿಜೆಪಿ ಆಗ್ರಹ

Shobha Karandlaje seeks CBI probe on IMA scam

'ಐಎಂಎ ಹಗರಣದಲ್ಲಿ 15 ಸಾವಿರ ಕೋಟಿಗೂ ಅಧಿಕ ವಂಚನೆ ನಡೆದಿದೆ. ಇದುವರೆಗೂ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 40 ಸಾವಿರ ದೂರುಗಳು ದಾಖಲಾಗಿವೆ' ಎಂದು ಶೋಭಾ ಕರಂದ್ಲಾಜೆ ಅವರು ಸಂಸತ್‌ನಲ್ಲಿ ವಿಷಯ ಪ್ರಸ್ತಾಪಿಸಿದರು.

ಮನ್ಸೂರ್ ವಿಡಿಯೋ ಬಗ್ಗೆ ತನಿಖಾಧಿಕಾರಿಯ ಮೊದಲ ಪ್ರತಿಕ್ರಿಯೆಮನ್ಸೂರ್ ವಿಡಿಯೋ ಬಗ್ಗೆ ತನಿಖಾಧಿಕಾರಿಯ ಮೊದಲ ಪ್ರತಿಕ್ರಿಯೆ

'ಸಣ್ಣ ವ್ಯಾಪಾರಿಗಳು, ಆಟೋ ಚಾಲಕರು ಸೇರಿದಂತೆ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಐಎಂಎನಲ್ಲಿ ಹಣ ಹೂಡಿಕೆ ಮಾಡಿದ್ದರು. ಮಗಳ ಮದುವೆ, ಮಕ್ಕಳ ವಿದ್ಯಾಭ್ಯಾಸ ಮುಂತಾದ ಕಾರಣಗಳಿಗೆ ಹಣ ಇಟ್ಟವರು ಈಗ ಆತಂಕಗೊಂಡಿದ್ದಾರೆ' ಎಂದರು.

'ಕರ್ನಾಟಕ ಸರ್ಕಾರ ಐಎಂಎ ಹಗರಣದಲ್ಲಿ ಶಾಮೀಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ನಾಯಕರು ಮನ್ಸೂರ್ ಅಲಿ ಖಾನ್ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಮನ್ಸೂರ್ ಅಲಿ ಖಾನ್ ದುಬೈನಲ್ಲಿ ಕುಳಿತುಕೊಂಡು ವಿಡಿಯೋ ಬಿಡುಗಡೆ ಮಾಡಿದ್ದು ಹಲವು ನಾಯಕರ ಹೆಸರು ಹೇಳಿದ್ದಾನೆ' ಎಂದು ಶೋಭಾ ಕರಂದ್ಲಾಜೆ ಹೇಳಿದರು.

'ಮನ್ಸೂರ್ ಅಲಿಖಾನ್ ಅವರ ಸಂಬಂಧ ಭಯೋತ್ಪಾದಕರ ಜೊತೆಗೂ ಇದೆ. ಕರ್ನಾಟಕ ಸರ್ಕಾರ ಈ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿದೆ. ಸರ್ಕಾರವೇ ಇದರಲ್ಲಿ ಶಾಮೀಲಾಗಿದೆ. ಆದ್ದರಿಂದ, ಜನರಿಗೆ ಎಸ್‌ಐಟಿ ಮೇಲೆ ನಂಬಿಕೆ ಇಲ್ಲ. ಹಗರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು' ಎಂದು ಆಗ್ರಹಿಸಿದರು.

English summary
In a parliament monsoon session Udupi-Chikkamagaluru BJP MP Shobha Karandlaje demand for CBI probe on IMA scam. Karnataka government formed SIT for the probe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X