Beer Price Hike: ಮದ್ಯಪ್ರಿಯರಿಗೆ ಶಾಕ್; ಮತ್ತೆ ಬಿಯರ್ ಬೆಲೆ ಏರಿಕೆ, ಬಾಟಲ್​ಗೆ ಎಷ್ಟು ಹೆಚ್ಚಾಯ್ತು?

ಬೆಂಗಳೂರು, ಜುಲೈ 30: ಮದ್ಯಪಾನ ಆರೋಗ್ಯ ಹಾನಿಕಾರ ಅಂದ್ರೂ ಮದ್ಯ ಕುಡಿಯುವರ ಸಂಖ್ಯೆ ಕಡಿಮೆಯಾಗಿಲ್ಲ. ಒಂದು ತಿಂಗಳ ಹಿಂದೆಯಷ್ಟೆ ಬಿಯರ್​ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೆ ಬಿಯರ್ ಬೆಲೆ ಏರಿಕೆಯಾಗಿದೆ. ಬಿಯರ್​ ಕುಡಿಯುವವರಿಗೆ ಉತ್ಪಾದನಾ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕಳೆದ ಒಂದು ತಿಂಗಳ ಹಿಂದಷ್ಟೇ ಬಿಯರ್ ಕಂಪನಿಗಳು ಬಿಯರ್ ಬೆಲೆಯನ್ನು ಏರಿಕೆ ಮಾಡಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಫೆಬ್ರವರಿಯಲ್ಲಿ ಮೊದಲ ಶಾಕ್ ನೀಡಿತ್ತು. ಈಗ ಮತ್ತೊಮ್ಮೆ ಕಚ್ಚಾವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಬೆಲೆ ಏರಿಕೆ ಮಾಡಿದೆ. ಒಂದು ತಿಂಗಳ ಹಿಂದಷ್ಟೇ ಏರಿಕೆಯಾಗಿದ್ದ ಬಿಯರ್ ಬೆಲೆಯನ್ನು ಮತ್ತೆ ಹೆಚ್ಚಳ ಮಾಡಲಾಗಿದ್ದು, ಒಂದು ಬಿಯರ್ ಬಾಟೆಲ್ ಮೇಲೆ 10 ರಿಂದ 20 ರೂಪಾಯಿಗೆ ಏರಿಕೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

shock for alcohol lovers Beer Price Hike In Karnataka

ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆ ಆಗಿದ್ದು, ಈಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ದರ ಏರಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಯರ್ ದರ 50ರಿಂದ 60 ರೂ.ವರೆಗೆ ಏರಿಕೆಯಾಗಿದೆ.

ಕೆಲವು ಕಂಪನಿಗಳ ಬಿಯರ್​ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರದಿಂದ ಜಾರಿಯಾಗಲಿದೆ. ಎಲ್ಲ ಬ್ರ್ಯಾಂಡ್​ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ. ಕಳೆದ ಫೆಬ್ರವರಿ ತಿಂಗಳಲ್ಲಿ ಬಿಯರ್​ ಬೆಲೆ 10 ರೂ.ವರೆಗೆ ಏರಿಕೆ ಮಾಡಿತ್ತು. ಇದೀಗ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 50 ರಿಂದ 60 ರೂ. ವರೆಗೆ ಹೆಚ್ಚಳವಾದಂತಾಗಿದೆ. ರಾಜ್ಯ ಸರ್ಕಾರ ಮೊದಲಿಗೆ ಮದ್ಯದ ಮೇಲಿನ ಸುಂಕ ಏರಿಸಿತ್ತು. ನಂತರ ವಾಣಿಜ್ಯ ವಾಹನಗಳ ಮೇಲಿನ ಸಾರಿಗೆ ಸೆಸ್​ ಅನ್ನು ಏರಿಕೆ ಮಾಡಿತ್ತು. ಇದೀಗ ಮತ್ತೆ ಏರಿಕೆ ಮಾಡುವ ಮೂಲಕ ಶಾಕ್‌ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+