Gruhalakshmi Scheme: ರಾಜ್ಯದಲ್ಲಿ ಗೃಹಲಕ್ಷ್ಮಿ ₹2,000 ಹಣ ಜಮಾ ಬಗ್ಗೆ ಮಹತ್ವದ ಮಾಹಿತಿ
Gruhalakshmi Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಇದರಲ್ಲಿ ಗೃಹಲಕ್ಷಿ ಯೋಜನೆಯೂ ಒಂದಾಗಿದೆ. ಇದರಡಿಯಲ್ಲಿ ಪ್ರತಿ ಮನೆಯ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣವನ್ನು ಜಮೆ ಮಾಡಲಾಗುತ್ತದೆ. ಇದೀಗ ಹಣ ಬಾಕಿ ಉಳಿಸಿಕೊಳ್ಳಲಾಗಿದೆ ಎನ್ನುವ ಆರೋಪಗಳ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ಸಿಎಂ ಆರ್ಥಿಕ ಸಲಹೆಗಾರ ನೀಡಿದ್ದಾರೆ. ಹಾಗಾದ್ರೆ ಏನೆಲ್ಲಾ ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಹಣ ತಿಂಗಳಿಗೊಮ್ಮೆ ಬಿಡುಗಡೆ ಆಗಬೇಕಿದೆ. ಆದರೂ ಕೆಲವೊಮ್ಮೆ ತಾಂತ್ರಿಕ ಕಾರಣಗಳ ಜಕಾರಣ ಒಂದೇ ಬಾರಿ ಎರಡು ಅಥವಾ ಮೂರು ತಿಂಗಳ ಹಣವೂ ಜಮಾ ಆಗುತ್ತಿದೆ. ಈ ಕುರಿತು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 3 ತಿಂಗಳಿಗೊಮ್ಮೆ ಕಾಂಗ್ರಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊ ಒಂದಾದ 'ಗೃಹಲಕ್ಷ್ಮಿ' ಹಣವನ್ನ ನೀಡುತ್ತೇವೆ. ನಾವು ಆರ್ಥಿಕವಾಗಿ ಗಟ್ಟಿಯಾಗಿದ್ದೇವೆ. ಜಿಎಸ್ಟಿ ಸಂಗ್ರಹದಲ್ಲಿ ಕೇಂದ್ರದವರು ಅರ್ಧ ಹಣ ಕೊಡಬೇಕು, ಅವರು ಕೊಡುವುದು ವಿಳಂಬ ಆಗುತ್ತದೆ. ಆದ್ದರಿಂದ ಹಣ ಹೊಂದಿಸುವುದು ತಡವಾಗುತ್ತದೆ ಅಷ್ಟೇ. 3 ತಿಂಗಳಿಗೊಮ್ಮೆ ಆದರೂ ಗೃಹಲಕ್ಷ್ಮಿ ಹಣವನ್ನೂ ನೀಡುತ್ತೇವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿಯರಿಗೆ ಇದರಿಂದ ಶಾಕ್ ಕೊಟ್ಟಂತಾಗಿದೆ. ಇನ್ನೂ ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, ಯೋಜನೆ ಆರಂಭ ಆದಗಿನಿಂದ ಈ ಯೋಜನೆ ಅಡಿಯಲ್ಲಿ 1.24 ಕೋಟಿ ಮಹಿಳೆಯರಿಗೆ 54,000 ಕೋಟಿ ರೂಪಾಯಿ ಹಣ ಜಮೆ ಮಾಡಲಾಗಿದೆ. ಒಟ್ಟು 23 ಕಂತುಗಳಲ್ಲಿ ನೊಂದಣಿ ಆದ ಪ್ರತಿ ಕುಟುಂಬದ ಯಜಮಾನಿಗೆ ತಲಾ 46,000 ರೂಪಾಯಿ ನೀಡಲಾಗಿದೆ ಎಂದು ಹೇಳಿದರು.
ಈ ಹಿಂದೆ ಇಲಾಖೆಯಿಂದಲೇ ಫಲಾನುಭವಿಗಳ ಖಾತೆಗೆ 2,000 ರೂಪಾಯೊ ಹಣ ಜಮೆ ಮಾಡಲಾಗುತ್ತಿತ್ತು. ಸದ್ಯ ತಾಲ್ಲೂಕು ಪಂಚಾಯಿತಿಗಳಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ಬದಲಾವಣೆ ಮಾಡಲಾಗಿದೆ. ಆದ್ದರಿಂದ ಕೆಲ ತಿಂಗಳ ಕಂತುಗಳ ಹಣ ವಿಳಂಬ ಆಗಿದೆ ಎಂದು ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ತುಂಬಾ ಬಡ ಕುಟುಂಬಗಳಿಗೆ ಆಧಾರವಾಗಿದೆ. ಅದೆಷ್ಟೋ ಜನ ಇದರಿಂದ ಮನೆಗೆ ಬೇಕಾದ ಅಗತ್ಯ ವಸ್ತುಗಳಿಂದ ಹಿಡಿದು, ವಾಹನ ಖರೀದಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಈ ಹಣದಿಂದ ತಮ್ಮ ಮಕ್ಕಳ ವಿದ್ಯಾಭ್ಯಾಸ, ಕೃಷಿ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಉದಾಹರಣೆಗಳಿವೆ. ಈ ಬಗ್ಗೆ ತುಂಬಾ ಜನ ಫಲಾನುಭವಿಗಳು ಹೇಳಿಕೊಂಡಿದ್ದಾರೆ. ಮತ್ತೊಂದೆಡೆ ಇದೀಗ ಇನ್ನೂ ಕಂತುಗಳು ಬಾಕಿಯಿದ್ದು, ಅವುಗಳನ್ನು ಯಾವಾಗ ಬಿಡುಗಡೆ ಮಾಡುತ್ತಾರೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಹೀಗೆ ಕೊಟ್ಟು ಒಂದೇ ಬಾರಿ ನಿಲ್ಲಿಸುವುದರಿಂದ ತುಂಬಾ ತೊಂದರೆ ಆಗುತ್ತಿದೆ ಅಂತಲೂ ಅಸಮಾಧಾನ ಹೊರಹಾಕುತ್ತಿದ್ದಾರೆ. ಅದರಲ್ಲೂ ವಿಪಕ್ಷಗಳು ಕೂಡ ಈ ಬಗ್ಗೆ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಲಿದ್ದಾರೆ. ಇದಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಸ್ಪಷ್ಟನೆ ನೀಡಿ ಜನರ ಗೊಂದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಸಹ ಮಾಡುತ್ತಿದ್ದಾರೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು











Click it and Unblock the Notifications