BPL Card: ಅರ್ಹರ ಬಿಪಿಎಲ್‌ ಕಾರ್ಡುದಾರರಿಗೆ ಗುಡ್‌ ನ್ಯೂಸ್; ಅನರ್ಹರನ್ನು ಸೋಸಿದ ಸರ್ಕಾರ

Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಪಡೆದಂತಹ ಬಿಪಿಎಲ್ ಕಾರ್ಡ್ ಗಳನ್ನುನ ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ವರ್ಗಾಯಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹಾಗಾದರೆ ಇಡುವರೆಗೂ ಸೋಸಿ ತೆಗೆದಿರುವುದಲ್ಲಿ ಎಷ್ಟು ಜನ ಬಿಪಿಎಲ್‌ ಅನರ್ಹ ಫಲಾನುಭವಿಗಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯದಲ್ಲಿ ಶೇಕಡ 20ರಷ್ಟು ಬಿಪಿಎಲ್ ಕಾರ್ಡ್‌ಗಳನ್ನು ಫಲಾನುಭವಿಗಳಲ್ಲದವರು ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಇದನ್ನು ಒಪ್ಪಿಕೊಂಡಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಸರ್ಕಾರ ಅರ್ಹ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

Shock for Ineligible BPL Card holders Good News for Eligible Beneficiaries

ಬೆಳಗಾವಿ ಪರಿಷತ್ತಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸರಳೀಕರಿಸುವ ಗುರಿ ಹೊಂದಿದೆ. ಉಯ್ತ ಆರ್ಥಿಕತೆ ಹೊಂದಿರುವಂತಹವರ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆಹಚ್ಚಿ, ಅವುಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲಾಗುವುದು. ಈ ಮೂಲಕ ಅರ್ಹರಿಗೆ ತೊಂದರೆ ಆಗದಂತೆ 3 ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಸರ್ಕಾರಿ ನೌಕರರು ಅಥವಾ ತೆರಿಗೆದಾರರಾಗಿರುವ ವ್ಯಕ್ತಿಗಳು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ಅವರು ನಿಯಮಾವಳಿಗಳ ಪ್ರಕಾರ ಬಿಪಿಎಲ್‌ ಕಾರ್ಡ್‌ಗಳಿಗೆ ಅನರ್ಹರಾಗಿರುತ್ತಾರೆ. ಅದಕ್ಕಾಗಿ ಈ ಕ್ರಮವನ್ನು ನಾವು ತೆಗೆದುಕೊಂಡಿದ್ದೇವೆ. ಇದನ್ನು ಸಂಪೂರ್ಣವಾಗಿ ಸುವ್ಯವಸ್ಥಿತಗೊಳಿಸಲು ಸರ್ಕಾರಕ್ಕೆ ಸರಿಸುಮಾರು ಮೂರು ತಿಂಗಳ ಅಗತ್ಯವಿದೆ. ಈ ಪ್ರಕ್ರಿಯೆಯಲ್ಲಿ ಪ್ರತಿಪಕ್ಷಗಳ ಸಹಕಾರವನ್ನು ಈ ಸಂದರ್ಭದಲ್ಲಿ ಅವರು ಕೋರಿದರು.

ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳು ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಕಾರ್ಡ್‌ಗಳನ್ನು ಹೊಂದಿದ್ದಾರೆ. ಮೇ 23ರ ವರೆಗೆ 3.35 ಲಕ್ಷ ಅನರ್ಹ ಪಡಿತರ ಕಾರ್ಡ್‌ಗಳನ್ನು ಪತ್ತೆ ಹಚ್ಚಿ 13.51 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಇನ್ನೂ ಶೇಕಡ 20ರಷ್ಟು ಅನರ್ಹ ಬಿಪಿಎಲ್ ಕಾರ್ಡ್ ಇರುವ ಮಾಹಿತಿಯಿದೆ. ಇಂತಹ ಎಲ್ಲಾ ಕಾರ್ಡ್‌ಗಳನ್ನೂ ಎಪಿಎಲ್‌ಗೆ ವರ್ಗಾಹಿಸುತ್ತೇವೆ ಎಂದು ಹೇಳಿದರು.

ಬಿಪಿಎಲ್ ಕಾರ್ಡ್ ನೀಡಲು ಹೊಸದಾಗಿ 2.95 ಲಕ್ಷ ಅರ್ಜಿ ಸಲ್ಲಿಕೆ ಆಗಿದ್ದವು. 1.69 ಲಕ್ಷ ಅರ್ಜಿಗಳಿಗೆ ಅನುಮೋದನೆ ನೀಡಲಾಗಿದೆ. 59,528 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 1.20 ಲಕ್ಷ ರೂಪಾಯಿ ಹೆಚ್ಚು ಆದಾಯ ಹಾಗೂ ನಿಯಮದಂತೆ ಇತರೆ ಸೌಲಭ್ಯ ಹೊಂದಿರುವ ಎಲ್ಲರ ಬಿಪಿಎಲ್ ಕಾರ್ಡ್‌ ರದ್ದು ಮಾಡಿ, ಎಪಿಎಲ್ ಕಾರ್ಡ್ ನೀಡಲಾಗುವುದು ಎಂದು ಹೇಳಿದರು.

ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಬಿಪಿಎಲ್ ಕುಟುಂಬಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಯ ಶೇಕಡ 50ರಷ್ಟು ಮೀರಿಲ್ಲ. ರಾಜ್ಯದಲ್ಲಿ ಮಾತ್ರ ಈ ಪ್ರಮಾಣ ಶೇಕಡ 65-70ರಷ್ಟು ಇದೆ. ಇನ್ನು ಗ್ರಾಮವಾರು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಎಪಿಎಲ್ ಕಾರ್ಡುದಾರರಿಗೆ ಸಬ್ಸಿಡಿ ಪಡಿತರ ವಿತರಣೆ ಸ್ಥಗಿತಗೊಳಿಸಿರುವ ಕುರಿತು ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ, 25 ಲಕ್ಷಕ್ಕೂ ಅಧಿಕ ಎಪಿಎಲ್ ಕಾರ್ಡುದಾರರ ಪೈಕಿ ಕೇವಲ 1 ಲಕ್ಷ ಮಂದಿ ಮಾತ್ರ ಸಬ್ಸಿಡಿ ದರದಲ್ಲಿ ಪಡಿತರ ಪಡೆಯುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಸರ್ಕಾರ ಇದುವರೆಗೆ 3.5 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರನ್ನು ತೆಗೆದು ಎಪಿಎಲ್ ವರ್ಗಕ್ಕೆ ಮರು ವರ್ಗೀಕರಿಸಿದೆ ಎಂದು ಮುನಿಯಪ್ಪ ಬಹಿರಂಗಪಡಿಸಿದರು.

ಪರಿಶೀಲನೆ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನುಬದ್ಧ ಬಿಪಿಎಲ್ ಕುಟುಂಬಗಳಿಗೆ ತೊಂದರೆ ಆಗುವುದಿಲ್ಲ. ಪ್ರಸ್ತುತ 25 ಲಕ್ಷ ಎಪಿಎಲ್ ಕಾರ್ಡುದಾರರಲ್ಲಿ ಕೇವಲ 1 ಲಕ್ಷ ಮಂದಿ ಮಾತ್ರ ಸಬ್ಸಿಡಿ ಆಹಾರ ಧಾನ್ಯಗಳನ್ನು ಪಡೆಯುತ್ತಿದ್ದಾರೆ. ಆದರೂ ಸರ್ಕಾರ ಎಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+