ದೀಪಾವಳಿ ಹಬ್ಬಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಶಾಕ್: ಈ ನಿಯಮ ಪಾಲಿಸಲೇಬೇಕು!
Deepavali festival: ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಇರುವ ಜನರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದೆ. ದೀಪಾವಳಿ ಹಬ್ಬದ ಸಂಭ್ರಮದಂದು ಪಟಾಕಿ ಹೊಡೆಯುವ ಆಸೆಗೆ ತಣ್ಣೀರು ಎರಚಿದೆ. ಈ ದೀಪಾವಳಿಯಂದು ಕೇವಲ ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರ ಹೊಡೆಯಬೇಕು. ಅಲ್ಲದೇ ಈ ಪಟಾಕಿಗಳನ್ನು ಹೊಡೆಯುವುದಕ್ಕೂ ಕೇವಲ ಎರಡು ಗಂಟೆ ಮಾತ್ರ ಅವಕಾಶ ನೀಡಲಾಗಿದೆ.
ಕರ್ನಾಟಕದಲ್ಲಿ ಈ ಬಾರಿಯ ದೀಪಾವಳಿ ಸಂಭ್ರಮಾಚರಣೆಯಲ್ಲಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಬೇಕು ಹಾಗೂ ಜನರ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆಯನ್ನು ಮಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ, ಏತನ್ಮಧ್ಯೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ರಾಜ್ಯದ ಪಟಾಕಿ ಉಳಿಗೆಗಳಲ್ಲಿ, ಅಂಗಡಿಗಳಲ್ಲಿ ಹಾಗೂ ಗೋದಾಮುಗಳಲ್ಲಿ ಕೇವಲ ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಪಟಾಕಿಯನ್ನು ಹೊಡೆಯುವುದಕ್ಕೆ ಕೇವಲ 2 ತಾಸು ಮತ್ರ ಅವಕಾಶ ನೀಡಲಾಗಿದೆ. ಪ್ರತಿ ಬಾರಿಯೂ ದೀಪವಾಳಿ ಸಂಭ್ರಮಾಚರಣೆಯಲ್ಲಿ ಅವಘಡಗಳು ಸಂಭವಿಸುತ್ತವೆ.
ಈ ಬಾರಿಯ ದೀಪಾವಳಿ ಸಂಭ್ರಮಾಚರಣೆಯಲ್ಲಿ ಯಾವುದೇ ಕಾರಣಕ್ಕೂ ಪಟಾಕಿ ಹೊಡೆಯುವಾಗ ಸಂಭವಿಸುವ ಗಾಯಗಳು, ಹಾನಿಗಳು ಅಥವಾ ಸಾವು ನೋವು ಸಂಭವಿಸದಂತೆ ತಡೆಯುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಸರ್ಕಾರ ಹೇಳಿದೆ.ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಅಧಿಕಾರಿಗಳಿಗೆ ಸಿ.ಎಂ ಸೂಚನೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಸೂಚನೆ ಉಲ್ಲೇಖ: ಇನ್ನು ಈ ಸಂಬಂಧ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೇ, ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ. ಸುಪ್ರೀಂ ಕೋರ್ಟ್ ದೀಪಾವಳಿ ಹಬ್ಬದಂದು ಪಟಾಕಿ ಹೊಡೆಯುವುದಕ್ಕೆ ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಯ ಅನ್ವಯ ಈ ಬಾರಿ ದೀಪಾವಳಿಯಂದು ಕೇವಲ ಹಸಿರು ಪಟಾಕಿಯನ್ನು ಹೊಡೆಯುವುದಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ರಾತ್ರಿ 8 ಗಂಟೆಯಿಂದ 10 ಗಂಟೆಯ ವರೆಗೆ ಮಾತ್ರ ಪಟಾಕಿ ಹೊಡೆಯುವುದಕ್ಕೆ ಅವಕಾಶ ನೀಡಲಾಗಿದೆ.
ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿ ಅಂಗಡಿಗಳನ್ನು ಪರಿಶೀಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಅಲ್ಲದೇ ಈ ನಿಯಮಗಳನ್ನು ಪಾಲಿಸದೆ ಇರುವ ಪಟಾಕಿ ಮಳಿಗೆಗಳ ಮೇಲೆ ಕ್ರಮ ತಗೆದುಕೊಳ್ಳುವಂತೆಯೂ ಸೂಚನೆ ನೀಡಲಾಗಿದೆ.
ಜಿಲ್ಲಾಧಿಕಾರಿಗಳಿಗೆ ಸೂಚನೆ: ಪಟಾಕಿ ಮಾರಾಟ ಹಾಗೂ ಮಳಿಗೆಗಳನ್ನು ತೆಗೆಯುವುದಕ್ಕೆ ಈಗಾಗಲೇ ನಿಗದಿ ಮಾಡಿರುವ ಜಾಗವನ್ನೇ ಬಳಸಬೇಕು. ಮಾರಾಟ ಹಾಗೂ ಸಂಗ್ರಹ ಸಹ ಹಸಿರು ಪಟಾಕಿಯೇ ಆಗಿರಬೇಕು. ಗೋದಾಮುಗಳಲ್ಲಿ ಹಸಿರು ಪಟಾಕಿಯನ್ನು ಹೊರತುಪಡಿಸಿ, ಉಳಿದ ಪಟಾಕಿಗಳು ಇದ್ದರೆ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಸಂಬಂಧಪಟ್ಟವರ ಮೇಲೆ ಜಿಲ್ಲಾಧಿಕಾರಿಗಳು ಪ್ರಕರಣ ದಾಖಲಿಸಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಂದುವರಿದು ಎಲ್ಲಾ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳಲ್ಲಿ ಪಟಾಕಿಗಳಿಂದ ಯಾವುದೇ ಹಾನಿ, ಗಾಯಗಳು ಅಥವಾ ಸಾವುಗಳು ಸಂಭವಿದಂತೆ ಎಚ್ಚರಿಕೆ ವಹಿಸಬೇಕು. ಈ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದೇ ಆಗಿದೆ ಎಂದು ಸೂಚಿಸಿದ್ದಾರೆ.
ಬೆಂಗಳೂರಲ್ಲಿ ಕಟ್ಟುನಿಟ್ಟಿನ ಕ್ರಮ: ಬೆಂಗಳೂರು ಗಡಿಭಾಗದಲ್ಲಿ ಕಳೆದ ವರ್ಷ ಭಾರೀ ಪಟಾಕಿ ಅವಘಡ ಸಂಭವಿಸಿತ್ತು. ಕರ್ನಾಟಕ ಹಾಗೂ ತಮಿಳುನಾಡಿನ ಗಡಿಭಾಗವಾದ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿತ್ತು. ಈ ದುರಂತದಲ್ಲಿ ಬರೋಬ್ಬರಿ 17 ಜನ ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ, ಈ ಬಾರಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿಗೂ ಮುಂಚಿತವಾಗಿಯೇ ಬೆಂಗಳೂರಲ್ಲಿ ಪಟಾಕಿ ಮಾರಾಟದ ಮೇಲೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಪಟಾಕಿ ದುರಂತವನ್ನು ತಡೆಯುವ ಉದ್ದೇಶದಿಂದ ಬೆಂಗಳೂರಿನಲ್ಲಿ ಜಾಗೃತ ಸಮಿತಿಯನ್ನು ರಚಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್, ಯಾವುದೇ ಪಟಾಕಿ ಮಾರಾಟಕ್ಕೆ ಅನುಮತಿ ನೀಡುವ ಮುಂಚೆ ಅಧಿಕಾರಿಗಳು ಪಟಾಕಿ ಮಾರಾಟದ ಜಾಗವನ್ನು ಪರಿಶೀಲನೆ ಮಾಡಲೇಬೇಕು ಎಂದು ನಿರ್ದೇಶನ ನೀಡಿದ್ದಾರೆ. ಬೆಂಗೂರಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಇಲ್ಲವೇ ಎಂದು ಪರಿಶೀಲನೆ ನಡೆಸುವುದು ಇದರ ಮುಖ್ಯ ಉದ್ದೇಶವಾಗಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications