ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಬೋರ್ಡ್ ಬದಲಾವಣೆಗೆ ಡೆಡ್ಲೈನ್ ನೀಡಿದ ಸರ್ಕಾರ- ಇಲ್ಲಿದೆ ಮಾಹಿತಿ
ಬೆಂಗಳೂರು,ಡಿಸೆಂಬರ್ 28: ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ರಾಜ್ಯದಲ್ಲಿ ಪ್ರತಿಭಟನೆ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಸಿಡಿದೆದ್ದಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ದಿಢೀರ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಹತ್ವದ ತಿರ್ಮಾನಕ್ಕೆ ಸರ್ಕಾರ ಬಂದಿದೆ.
ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಸಿದ್ದರಾಮಯ್ಯ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್ ಇರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್ ಚೇಂಜ್ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುತ್ತೆ ಎಂದು ಸ್ಪಷ್ಟಪಡಿಸಿದರು

ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ ಎಂದು ಹೇಳಿದರು.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ
ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು
ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರತಕ್ಕದ್ದು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು

ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ ಎಂದರು.
3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು. ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.
ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಹೇಳಿದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?










Click it and Unblock the Notifications