ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆಶಿ ಕುರಿತು ಅವಹೇಳನಕಾರಿ ಮಾತು; ಉಗ್ರಪ್ಪಗೆ ಕಾಂಗ್ರೆಸ್‌ನಿಂದ ಶೋಕಾಸ್ ನೋಟೀಸ್!

|
Google Oneindia Kannada News

ಬೆಂಗಳೂರು, ಅ. 13: ತಮ್ಮದೇ ಪಕ್ಷದ ಅಧ್ಯಕ್ಷರ ಬಗ್ಗೆ ಲಘುವಾಗಿ ಮಾತನಾಡಿದ್ದ ಮಾಜಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪಗೆ ಸಂಕಷ್ಟ ಶುರುವಾಗಿದೆ. ಮಂಗಳವಾರ ಸಂಜೆ ಮಾಧ್ಯಮಗೋಷ್ಠಿ ಕರೆದಿದ್ದ ವಿ.ಎಸ್. ಉಗ್ರಪ್ಪ, ಮಾತು ಆರಂಭಿಸುವ ಮೊದಲು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ಅವರೊಂದಿಗೆ ಗುಟ್ಟಾಗಿ ಮಾತನಾಡಿಕೊಂಡಿದ್ದರು. ಆದರೆ ಅದು ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿ, ಪ್ರಸಾರವಾಗಿತ್ತು.

Recommended Video

ಮೈಕ್ ಆಫ್ ಇದೆ ಅಂದ್ಕೊಂಡು ಪ್ರೆಸ್ ಮೀಟ್ ನಲ್ಲೇ ಡಿಕೆಶಿ ಮಾನ ಹರಾಜು ಹಾಕಿದ ಉಗ್ರಪ್ಪ | Oneindia Kannada

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಡುಕರಂತೆ ಮಾತನಾಡುತ್ತಾರೆ. ಡಿಕೆಶಿ ಕಲೆಕ್ಷನ್ ಗಿರಾಕಿ, ಅವನ ಹುಡುಗರ ಹತ್ತಿರವೇ ಐವತ್ತರಿಂದ ನೂರು ಕೋಟಿ ರೂ. ಇದೆ ಅಂದ್ರೆ ಡಿಕೆಶಿ ಹತ್ರ ಎಷ್ಟು ದುಡ್ಡಿರಬಹುದು ಎಂದು ಇಬ್ಬರೂ ನಾಯಕರು ಮಾತನಾಡಿಕೊಂಡಿದ್ದರು. ಅದು ಬುಧವಾರ ಬೆಳಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಜೊತೆಗೆ ಡಿ.ಕೆ. ಶಿವಕುಮಾರ್ ಕುರಿತು ವಿ.ಎಸ್. ಉಗ್ರಪ್ಪ ಹಾಗೂ ಎಂ.ಎ. ಸಲೀಂ ಮಾತನಾಡಿದ್ದ ವಿಚಾರಗಳು ವಿರೋಧ ಪಕ್ಷಗಳ ಲೇವಡಿಗೆ ಗುರಿಯಾಗಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಕಾಂಗ್ರೆಸ್ ನಾಯಕರ ಇದೆಂಥಾ ಮಾತುಗಳು?ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಕಾಂಗ್ರೆಸ್ ನಾಯಕರ ಇದೆಂಥಾ ಮಾತುಗಳು?

ಹೀಗಾಗಿ ವಿ.ಎಸ್. ಉಗ್ರಪ್ಪಗೆ ಸಂಕಷ್ಟ ಶುರುವಾಗಿದ್ದು, ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆರು ವರ್ಷಗಳವರೆಗೆ ಉಚ್ಚಾಟಿಸಲಾಗಿದೆ. ಉಗ್ರಪ್ಪ ವಿರುದ್ಧ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ಮುಂದಿದೆ.

ಉಗ್ರಪ್ಪಗೆ ಶೋಕಾಸ್ ನೋಟೀಸ್ ಕೊಟ್ಟ ಕಾಂಗ್ರೆಸ್!

ಉಗ್ರಪ್ಪಗೆ ಶೋಕಾಸ್ ನೋಟೀಸ್ ಕೊಟ್ಟ ಕಾಂಗ್ರೆಸ್!

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆ ಮಾಡುವಂತೆಯೂ ವಿಪಕ್ಷಗಳ ನಾಯಕರು ಆಗ್ರಹಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲಿಯೇ ಮಾಜಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಅವರಿಗೆ ಸಂಕಷ್ಟ ಶುರುವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘನತೆಗೆ ಕುಂದುಂಟಾಗುವ ರೀತಿಯಲ್ಲಿ ಮಾತನಾಡಿದ್ದಕ್ಕೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟೀಸ್ ಜಾರಿಯಾಗಿದೆ. ಅಶಿಸ್ತಿನ ನಡುವಳಿಕೆಗಾಗಿ ಕಾರಣ ಕೇಳಿ ನೋಟೀಸನ್ನು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ. ಕೆ. ರೆಹಮಾನ್ ಖಾನ್ ಜಾರಿ ಮಾಡಿದ್ದಾರೆ.

ಮೂರು ದಿನಗಳಲ್ಲಿ ಉತ್ತರ ಕೊಡಿ ಎಂದ ರೆಹಮಾನ್ ಖಾನ್!

ಮೂರು ದಿನಗಳಲ್ಲಿ ಉತ್ತರ ಕೊಡಿ ಎಂದ ರೆಹಮಾನ್ ಖಾನ್!

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ತಾವು ದಿ. 13.10.2021ರಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ಅವರೊಂದಿಗೆ ಖಾಸಗಿಯಾಗಿ ಮಾತನಾಡುವಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಘನತೆ ಗೌರವಗಳಿಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹಾನಿ ಉಂಟಾಗುವಂತಹ ಅನೇಕ ವಿವಾರಗಳನ್ನು ಮಾತನಾಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ತಾವು ಮಾತನಾಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಅದನ್ನು ಸಂಪೂರ್ಣವಾಗಿ ನಿರಾಕರಿಸಿ ಖಂಡಿಸುತ್ತದೆ.

ಈ ಎಲ್ಲ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡುವಳಿಕೆಯ ಬಗ್ಗೆ ತಕ್ಷಣ ಸಮಜಾಯಿಸಿಯನ್ನು ಮೂರು ದಿನಗಳೊಳಗೆ ಕೊಡಬೇಕು ಎಂದು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ. ಕೆ. ರೆಹಮಾನ್ ಖಾನ್ ಸೂಚಿಸಿದ್ದಾರೆ.

ಕೆಪಿಸಿಸಿ ಪ್ರಾಥಮಿಕ ಸದಸ್ಯತ್ವದಿಂದ ವಜಾ!

ಕೆಪಿಸಿಸಿ ಪ್ರಾಥಮಿಕ ಸದಸ್ಯತ್ವದಿಂದ ವಜಾ!

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಮಾಧ್ಯಮ ಸಂಯೋಜನ ಎಂ.ಎ. ಸಲೀಂ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳವರೆಗೆ ವಜಾಗೊಳಿಸಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ. ಕೆ. ರೆಹಮಾನ್ ಖಾನ್ ಆದೇಶ ಮಾಡಿದ್ದಾರೆ.

ಮಂಗಳವಾರ ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರೊಂದಿಗೆ ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ನಡೆಸಿದ್ದ ಖಾಸಗಿ ಮಾತುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಅವರ ಬೇಜಬ್ದಾರಿ ನಡುವಳಿಕೆಯಿಂದಾಗಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ತುರ್ತು ಸಭೆಯಲ್ಲಿ ಸಲೀಂರನ್ನು ಸದಸ್ಯರ ಅಭಿಪ್ರಾಯದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆರು ವರ್ಷಗಳವರೆಗೆ ಉಚ್ಚಾಟಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ತಿಳಿಸಿದ್ದಾರೆ.

ತಮ್ಮ ಮೇಲೆ ಮಾಡಿದ್ದ ಆರೋಪಗಳಿಗೆ ಡಿಕೆಶಿ ಪ್ರತಿಕ್ರಿಯೆ!

ಕಾಂಗ್ರೆಸ್ ನಾಯಕರಾದ ವಿಎಸ್ ಉಗ್ರಪ್ಪ ಹಾಗೂ ಎಂ.ಎ. ಸಲೀಂ ಅವರು ತಮ್ಮ ಮೇಲೆ ಮಾಡಿದ್ದ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ.

"ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಸಂಭಾಷಣೆಗೂ (ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ನಡುವೆ), ನನಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ನಾನು ಯಾವುದೇ ಪರ್ಸೆಂಟೇಜ್ ವಿಚಾರದಲ್ಲೂ ಭಾಗಿಯಾಗಿಲ್ಲ. ಅದರ ಅಗತ್ಯವೂ ನನಗಿಲ್ಲ. ಗೃಹ ಸಚಿವರು ಯಾರಾದರೂ ದೂರು ಕೊಟ್ಟರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅವರು ಸುಮೋಟೋ ಕೇಸ್ ದಾಖಲಿಸಿದರೂ ಒಳ್ಳೆಯದೇ. ನಾನು ಹಳ್ಳಿಯಿಂದ ಬಂದವನಾಗಿದ್ದು, ನನಗೆ ನನ್ನದೇ ಆದ ನಡೆ, ನುಡಿ, ದೇಹಭಾಷೆ, ವ್ಯಕ್ತಿತ್ವ ಹಾಗೂ ಯಶಸ್ಸು ಇದೆ. ಕೆಲವೊಂದು ಗುಣಗಳು ಬದಲಾಗುವುದಿಲ್ಲ." ಎಂದು ಮಾಜಿ ಸಂಸದ ವಿಎಸ್ ಉಗ್ರಪ್ಪಗೆ ಡಿಕೆಶಿ ತಿರುಗೇಟು ಕೊಟ್ಟಿದ್ದಾರೆ.

English summary
Show Cause notice to VS Ugrappa and am Saleem expelled from congress party controversy speech about KPCC president DK Shivakumar. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X