Get Updates
Get notified of breaking news, exclusive insights, and must-see stories!

ಮೂರು ದಿನಗಳ ಅಕ್ಷರ ಜಾತ್ರೆಗೆ ಸಾಕ್ಷಿಯಾಗಲಿದೆ ಹಾಸನ

ಹಾಸನ, ಜ.30 : ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ 81ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವೇದಿಕೆ ಸಿದ್ಧವಾಗಿದೆ. ಶನಿವಾರ ಸಂಜೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

81ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 31, ಫೆ.1, 2 ಮತ್ತು 3ರಂದು ಶ್ರವಣಬೆಳಗೊಳದಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಒಂದು ದಿನ ಮುಂಚಿತವಾಗಿ ನಡೆಯುತ್ತಿದೆ.

Shravanabelagola

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಬೇಕಿತ್ತು. ಆದರೆ, ಹಾವೇರಿ ಮತ್ತು ರಾಣೆಬೆನ್ನೂರು ಇವುಗಳಲ್ಲಿ ಯಾವ ಸ್ಥಳಗಳಲ್ಲಿ ನಡೆಸಬೇಕೆಂಬ ಜಟಾಪಟಿಯಿಂದಾಗಿ ಸಮ್ಮೇಳನ ನಡೆಸುವ ಅವಕಾಶ ಶ್ರವಣಬೆಳಗೊಳದ ಪಾಲಾಯಿತು. [ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಎತ್ತಿನ ಗಾಡಿ]

ಶನಿವಾರ ಸಂಜೆ 4 ಗಂಟೆಗೆ ಸಮ್ಮೇಳನಾಧ್ಯಕ್ಷ ಡಾ. ಸಿದ್ದಲಿಂಗಯ್ಯ ಅವರ ಮೆರವಣಿಗೆ ನಡೆಯಲಿದೆ. ಕಮಾನು ಕಟ್ಟಿದ ಅಲಂಕೃತ ಎತ್ತಿನಗಾಡಿಯಲ್ಲಿ ಮೆರವಣಿಗೆ ನಡೆಸಲಾಗುತ್ತದೆ. ಯಾತ್ರಿ ನಿವಾಸ್ ಮುಂಭಾಗದಿಂದ ಆರಂಭವಾಗುವ ಮೆರವಣಿಗೆ ಬಸ್ ನಿಲ್ದಾಣದ ಮೂಲಕ ಹಾದು ಶ್ರೀಕಂಠನಗರದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಗೆ ತಲುಪಿ ಮುಕ್ತಾಯಗೊಳ್ಳಲಿದೆ. [ಸಾಹಿತ್ಯ ಸಮ್ಮೇಳನ ಲಾಂಛನ ನೋಡಿ]

ಫೆಬ್ರವರಿ 1ರಂದು ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಮ್ಮೇಳನಾಧ್ಯಕ್ಷ ಡಾ. ಸಿದ್ದಲಿಂಗಯ್ಯ ಅವರು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ನಂತರ ವಿವಿಧ ಗೋಷ್ಠಿಗಳು ನಡೆಯಲಿವೆ.

hassan

ಒಂದೇ ನಿರ್ಣಯ : ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಒಂದೇ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ. 'ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆ ಕಡ್ಡಾಯ' ಎಂಬ ಒಂದೇ ನಿರ್ಣಯವನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. [ಸಾಹಿತ್ಯ ಸಮ್ಮೇಳನದಲ್ಲಿ ಒಂದೇ ನಿರ್ಣಯ!]

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರಿಗಾಗಿ ಜನವರಿ 31 ರಿಂದ ಚನ್ನರಾಯಪಟ್ಟಣದಿಂದ ಶ್ರವಣಬೆಳಗೊಳಕ್ಕೆ ಪ್ರತೀ 2 ನಿಮಿಷಕ್ಕೆ ಒಂದರಂತೆ ಬಸ್ಸುಗಳನ್ನು ಓಡಿಸಲಾಗುತ್ತಿದೆ. [ಸಾರಿಗೆ ವ್ಯವಸ್ಥೆಯ ವಿವರ ಇಲ್ಲಿದೆ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+