ಶ್ರೀಮಂತ್ ಪಾಟೀಲ್ ಕಾಂಗ್ರೆಸ್‌ಗೆ ಸೇರ್ಪಡೆ?

ಬೆಂಗಳೂರು, ಡಿಸೆಂಬರ್ 06 : ಜೆಡಿಎಸ್ ನಾಯಕ ಶ್ರೀಮಂತ್ ಬಾಳಾಸಾಹೇಬ್ ಪಾಟೀಲ್ ಕಾಂಗ್ರೆಸ್ ಸೇರಲಿದ್ದಾರೆಯೇ?. ಜೆಡಿಎಸ್ ಬಂಡಾಯ ಶಾಸಕರ ಜೊತೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್ ಬಂಡಾಯ ಶಾಸಕರಾದ ಜಮೀರ್ ಅಹಮದ್ ಖಾನ್, ಚೆಲುವರಾಯಸ್ವಾಮಿ ಅವರ ಜೊತೆ
ಶ್ರೀಮಂತ್ ಬಾಳಾಸಾಹೇಬ್ ಪಾಟೀಲ್ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

Shrimant Balasaheb Patil meets CM Siddaramaiah

2013ರ ಚುನಾವಣೆಯಲ್ಲಿ ಶ್ರೀಮಂತ್ ಬಾಳಾಸಾಹೇಬ್ ಪಾಟೀಲ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದರು. 38,897 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

ಬಿಜೆಪಿಯ ರಾಜು ಕಾಗೆ ಅವರ ವಿರುದ್ಧ ಕೆಲವೇ ಮತಗಳ ಅಂತರದಲ್ಲಿ ಸೋತಿದ್ದರು. ಈಗ ಚುನಾವಣೆ ಹತ್ತಿರವಾಗುತ್ತಿರುವಾಗ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಜಮೀರ್ ಅಹಮದ್ ಖಾನ್, ಚೆಲುವರಾಯಸ್ವಾಮಿ ಮುಂತಾದ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಈ ಶಾಸಕರ ಜೊತೆ ಶ್ರೀಮಂತ್ ಬಾಳಾಸಾಹೇಬ್ ಪಾಟೀಲ್ ಕಾಣಿಸಿಕೊಂಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+