ಸಿದ್ಧಗಂಗಾ ಸ್ವಾಮೀಜಿ ಡಿಸ್ಚಾರ್ಜ್: ಆತಂಕ ದೂರ

Written By:
Subscribe to Oneindia Kannada

ತುಮಕೂರು, ಜೂನ್, 24: ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರು ಸಿದ್ಧಗಂಗಾ ಸ್ವಾಮೀಜಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಅಪಾರ ಭಕ್ತ ಸಮೂಹದಲ್ಲಿ ಮೂಡಿದ್ದ ಆತಂಕ ದೂರವಾಗಿದೆ.

ಎರಡು ದಿನಗಳಿಂದ ಸ್ವಾಮೀಜಿ ಅವರ ಆರೋಗ್ಯದಲ್ಲಿ ಕೊಂಚ ಏರು ಪೇರು ಕಂಡುಬಂದ ಪರಿಣಾಮ ಶುಕ್ರವಾರ ಶ್ರೀಗಳನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಂಪೂರ್ಣ ಸುಧಾರಿಸಿಕೊಂಡ ಶ್ರೀಗಳನ್ನು ಶನಿವಾರ ಮಧ್ಯಾಹ್ನ ಡಿಸ್ಚಾರ್ಜ್ ಮಾಡಲಾಗಿದೆ.[ಸಿದ್ಧಗಂಗಾ ಸ್ವಾಮೀಜಿ ಆರೋಗ್ಯ ಸ್ಥಿರ, ಚಿಂತೆ ಬೇಡ]

swamiji

ಸ್ವಾಮೀಜಿಯವರ ಪಿತ್ತನಾಳದಲ್ಲಿ ಬ್ಲಾಕೇಜ್ ಇದ್ದಿದ್ದು, ಅದನ್ನು ಇಆರ್ ಪಿಸಿ ಶಸ್ತ್ರಚಿಕಿತ್ಸೆ ಮೂಲಕ ನಿವಾರಿಸಲಾಗಿದೆ ಎಂದು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಡಾ.ರವೀಂದ್ರ ತಿಳಿಸಿದ್ದಾರೆ.[ಶಿವಕುಮಾರ ಶ್ರೀಗಳಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ]

swamiji

ನಿನ್ನೆ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದರು. ಶನಿವಾರ ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದ ಗೌಡ ಸೇರಿದಂತೆ ಅನೇಕ ಸ್ವಾಮೀಜಿಗಳು ಸ್ವಾಮೀಜಿಯವರನ್ನು ಭೇಟಿಯಾಗಿದ್ದರು.

swamiji

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Siddaganga Math seer Shivakumara Swami discharged from BGS hospital Bengaluru. . A team of doctors in BGS Global hospitals, who opened up the blockage on Saturday morning through an endoscopy, said a stent has been implanted in the duct. His condition is stable, doctors said.
Please Wait while comments are loading...