Siddaramaiah Health : ಮಣಿಪಾಲ್ ಆಸ್ಪತ್ರೆಗೆ ತೆರಳಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 02; ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ವೈದ್ಯರು ಅವರ ಆರೋಗ್ಯ ಪರಿಶೀಲನೆ ನಡೆಸಿ ದಾಖಲಿಸಿಕೊಳ್ಳುವ ಕುರಿತು ನಿರ್ಧರಿಸಲಿದ್ದಾರೆ.

ಶುಕ್ರವಾರ ಬೆಳಗ್ಗೆ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿದರು. ಹೊರರೋಗಿಯಾಗಿ ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ ಎಂದು ಆಸ್ಪತ್ರೆ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

ದಯವಿಟ್ಟು ಗಮನಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರರೋಗಿಯಾಗಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಮುಂದಿನ ಪರಿಶೀಲನೆ ಬಳಿಕ ವೈದ್ಯರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ಆಸ್ಪತ್ರೆ ಮಾಧ್ಯಮಗಳಿಗೆ ತಿಳಿಸಿದೆ.

siddaramaiah

ಸಣ್ಣ ಶಸ್ತ್ರ ಚಿಕಿತ್ಸೆಗಾಗಿ ಸಿದ್ದರಾಮಯ್ಯ ಹೆಚ್‌ಎಎಲ್ ಏರ್‌ಪೋರ್ಟ್ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ್ದಾರೆ. ವೈದ್ಯರು ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅವರನ್ನು ದಾಖಲು ಮಾಡಿಕೊಳ್ಳುವ ನಿರೀಕ್ಷೆ ಇದೆ.

ಹಿಂದೆ ಸಿದ್ದರಾಮಯ್ಯ ಮೂಲವ್ಯಾಧಿ ಸಮಸ್ಯೆಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಶಸ್ತ್ರ ಚಿಕಿತ್ಸೆ ನಡೆದ ಜಾಗದಲ್ಲಿ ಸಣ್ಣ ಗುಳ್ಳೆ ಕಾಣಿಸಿಕೊಂಡಿದ್ದು, ಅದಕ್ಕಾಗಿ ಅವರು ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ.

ಶಸ್ತ್ರ ಚಿಕಿತ್ಸೆ ಬಳಿಕ ಸಿದ್ದರಾಮಯ್ಯ ನಾಲ್ಕು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಈ ಸಮಯದಲ್ಲಿ ಸಾರ್ವಜನಿಕರ ಭೇಟಿಗೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+