Get Updates
Get notified of breaking news, exclusive insights, and must-see stories!

ಒಂದು ಅಥವಾ ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಿ : ಸಿದ್ದರಾಮಯ್ಯ ಸಲಹೆ

ಧಾರವಾಡ, ಡಿಸೆಂಬರ್‌ 08: ನಿಮಗೆ ಜಾಸ್ತಿ ಮಕ್ಕಳು ಬೇಡ, ನೀವು ಎರಡೇ ಮಕ್ಕಳನ್ನು ಮಾಡಿಕೊಳ್ಳಿ. ಏಕೆಂದರೆ, ಭಾರತದಲ್ಲಿ ಜನಸಂಖ್ಯೆ ಅತಿಯಾಗಿ ಹೆಚ್ಚಾಗುತ್ತಿದೆ. ಜನಸಂಖ್ಯೆ ನಿಯಂತ್ರಣ ಇಂದಿನ ಅಗತ್ಯ ಎಂದು ನೂತನ ದಂಪತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲಹೆ ನೀಡಿದರು.

ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಶಾಸಕ ಎನ್. ಎಚ್.ಕೋನರಡ್ಡಿಯವರು ತಮ್ಮ ಪುತ್ರ ನವೀನಕುಮಾರ ಅವರ ಆರತಕ್ಷತೆ ಅಂಗವಾಗಿ ಆಯೋಜಿಸಿದ್ದ 75 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನೂತನ ವಧು-ವರರಿಗೆ ಶುಭಾಶಯ ಕೋರಿದ ಸಿಎಂ, ಸರಳ,ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹ ಗಳು ಸಮಾಜದಲ್ಲಿ ಸಮಾನತೆ ತರಲು ಸಹಕಾರಿ ಎಂದು ಹೇಳಿದರು.

Siddaramaiah advised to have only two children

ಇನ್ನೂ ಮದುವೆಯಾದ ನೂತನ ದಂಪತಿಗಳು ಎರಡೇ ಮಕ್ಕಳನ್ನು ಮಾಡಿಕೊಳ್ಳಬೇಕು. ಏಕೆಂದರೆ, ಭಾರತದಲ್ಲಿ ಜನಸಂಖ್ಯೆ ಅತಿಹೆಚ್ಚಾಗುತ್ತಾ ಹೋಗುತ್ತಿದೆ ಎಂದು ಸಲಹೆ ನೀಡಿದರು. ಇಲ್ಲಿ ನಡೆದ 75 ಜೋಡಿಗಳ ಸಾಮೂಹಿಕ ವಿವಾಹದಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಾಜದವರೂ ಮದುವೆ ಯಾಗುತ್ತಿರುವುದು ಸಂತೋಷದ ಕ್ಷಣ. ಸರ್ವ ಧರ್ಮಗಳ ವಧು-ವರರು ಸಾಮೂಹಿಕ ವಿವಾಹ ಆಗುವುದರೊಂದಿಗೆ ಸಮಾಜದಲ್ಲಿ ಅಂತರ್ಜಾತಿ ಮದುವೆಗಳು ಆಗಬೇಕು. ಇದರಿಂದ ಸಮಾಜದ ಸರ್ವರಲ್ಲಿ ಸಮಾನತೆ ತರಲು ಸಹಾಯವಾಗುತ್ತದೆ ಎಂದು ಹೇಳಿದರು.

ಸಮಸಮಾಜ ನಿರ್ಮಾಣ ಮಾಡಬೇಕು, ಜಾತಿ, ವರ್ಗ ತೊಲಗಿಸಬೇಕು, ಎಲ್ಲರಿಗೂ ಸಮಾನ ಅವಕಾಶಗಳು ಹಾಗೂ ಹಕ್ಕುಗಳನ್ನು ಕೊಡಬೇಕು ಎಂದು ಸಂವಿಧಾನ ಹೇಳುತ್ತದೆ. ಇದಾಗದೇ ಹೋದರೇ ದೇಶಕ್ಕೆ ಸ್ವಾತಂತ್ರ್ಯ ದೊರಕಿರುವುದು ಸಾರ್ಥಕವಾಗುವುದಿಲ್ಲ ಎಂದರು. ರಾಜಕೀಯ ಸ್ವಾತಂತ್ರ್ಯ ಬಂದರೆ ಮಾತ್ರ ಸಾಲದು. ಅದಕ್ಕಾಗಿಯೇ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ರೂಪಿಸಿದಾಗ ಎಲ್ಲಾ ಜಾತಿ, ಧರ್ಮಗಳ ಜನರಿಗೆ ತಲುಪುವಂತೆ ಮಾಡಿದ್ದೇವೆ.

ಎಲ್ಲರೂ ಮುಖ್ಯವಾಹಿನಿಗೆ ಬರದೇ ಹೋದರೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಸಾರ್ಥಕವಾಗುವುದಿಲ್ಲ. ಸಂವಿಧಾನ ಜಾರಿಯಾಗಿ 75 ವರ್ಷಗಳಾದರೂ ಸಮಾನತೆ ಬಂದಿಲ್ಲ. ಶ್ರೀಮಂತರು, ಶ್ರೀಮಂತರಾಗಿಯೇ ಇದ್ದಾರೆ, ಬಡವರು ಬಡವರಾಗಿಯೇ ಉಳಿದಿದ್ದಾರೆ. ಜಾತಿ ವ್ಯವಸ್ಥೆಯ ಕಾರಣದಿಂದ ಸಮಾನತೆ ಬಂದಿಲ್ಲ. ನಮ್ಮ ಸರ್ಕಾರ ಇದನ್ನು ಮನಗಂಡು ಭಾಗ್ಯ ಯೋಜನೆಗಳನ್ನು ಹಾಗೂ ಈಗ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಹಣ ಉಳಿತಾಯವಾಗುತ್ತಿದೆ. ಇದನ್ನು ವ್ಯರ್ಥ ಎಂದು ಕೆಲವರು ಟೀಕೆ ಮಾಡುತ್ತಿದ್ದು, ಇದಕ್ಕೆ ಜನರೇ ಉತ್ತರ ಕೊಡಬೇಕು ಎಂದರು. ಒಂದು ಲಕ್ಷ ಕೋಟಿಗೂ ಹೆಚ್ಚು ವೆಚ್ಚವನ್ನು ಗ್ಯಾರಂಟಿಗಳಿಗೆ ಕೊಡಬೇಕಾದರೆ ಸಮಾನತೆಯನ್ನು ತರಬೇಕೆಂಬ ಉದ್ದೇಶದಿಂದಲೇ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನೆನೆಸಿಕೊಂಡು ಸಮಾಜದಲ್ಲಿನ ಜಾತೀಯತೆ , ವರ್ಗ ವ್ಯವಸ್ಥೆಯನ್ನು ತೊಡೆದುಹಾಕೋಣ. ನಮ್ಮ ಸರ್ಕಾರ ದಲಿತರು, ರೈತರು, ಮಹಿಳೆಯರು, ಕಾರ್ಮಿಕರ ಪರವಾಗಿರುವ ಸರ್ಕಾರ ಎಂದರು. ಹಾಸನ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಾಗಿವೆ. ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದನ್ನು ನಾವು ಜಾರಿ ಮಾಡಿದ್ದೇವೆ ಎಂದರು. ಇಂದು ಉದ್ಘಾಟನೆ ಮತ್ತು ಶಂಕುಸ್ಥಾಪನೆಗೊಂಡ ಯೋಜನೆಗಳು ಜನೋಪಕಾರಿಯಾಗಿವೆ. ಇನ್ನು ಮುಂದೆಯೂ ಹಾಸನ ಜಿಲ್ಲೆಗೆ ವಿಶೇಷ ಗಮನವನ್ನು ನೀಡಲಾಗುತ್ತದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+