ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿದಂಬರಂ ಆಯ್ಕೆ ಮಾಡಲು ಒಪ್ಪದ ಸಿಎಂ ಸಿದ್ದು

|
Google Oneindia Kannada News

ಬೆಂಗಳೂರು, ಮೇ 30 : ಕರ್ನಾಟಕದಿಂದ ರಾಜ್ಯಸಭೆಗೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಅವರನ್ನು ಅಭ್ಯರ್ಥಿಯಾಗಿಲು ಸಿದ್ದರಾಮಯ್ಯ ಆಸಕ್ತಿ ತೋರಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಜಯ್ ಸಿಂಗ್ ನೇತೃತ್ವದಲ್ಲಿ ಪಕ್ಷದ ನಾಯಕರ ಸಭೆ ನಡೆಯಿತು. ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಈ ಸಭೆಯನ್ನು ಕರೆಯಲಾಗಿತ್ತು.

Chidambaram

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮುಂತಾದ ನಾಯಕರು ಭಾಗವಹಿಸಿದ್ದರು. ಹೈಕಮಾಂಡ್ ಕರ್ನಾಟಕದಿಂದ ರಾಜ್ಯಸಭೆಗೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಆಯ್ಕೆ ಮಾಡಲು ಚಿಂತನೆ ನಡೆಸಿದೆ ಎಂದು ದಿಗ್ವಿಜಯ್ ಸಿಂಗ್ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. [ರಾಜ್ಯಸಭೆ ರೇಸ್ ನಲ್ಲಿ ಸಿಎಂ ಇಬ್ರಾಹಿಂ]

ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದಿಂದ ರಾಜ್ಯಸಭೆಗೆ ಹೊರ ರಾಜ್ಯದವರನ್ನು ಆಯ್ಕೆ ಮಾಡುವ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಸಿ.ಎಂ.ಇಬ್ರಾಹಿಂ ಅವರನ್ನು ಆಯ್ಕೆ ಮಾಡಬಹುದು ಎಂಬ ವಾದವನ್ನು ಮಂಡಿಸಿದರು. ಆದರೆ, ದಿಗ್ವಿಜಯ್ ಸಿಂಗ್ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಹೈಕಮಾಂಡ್ ಅಭಿಪ್ರಾಯಕ್ಕೆ ಬೆಲೆ ಕೊಡಬೇಕು ಎಂದು ಹೇಳಿದರು. [ಹೈಕಮಾಂಡ್ ಗೆ ಸೆಡ್ಡು ಹೊಡೆದ ಶಾಸಕರು]

ಪಿ.ಚಿದಂಬರಂ ಅವರು ತಮಿಳುನಾಡು ಮೂಲದವರು. ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಜಟಾಪಟಿ ನಡೆಯುತ್ತಿರುತ್ತದೆ. ಆದ್ದರಿಂದ ತಮಿಳುನಾಡಿನವರಾದ ಚಿದಂಬರಂ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ಸಭೆಯಲ್ಲಿ ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು ಸಹ ಪಿ.ಚಿದಂಬರಂ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ಮುಖ್ಯಮಂತ್ರಿಯೇ ಈ ಪ್ರಸ್ತಾಪವನ್ನು ವಿರೋಧಿಸುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕು.

English summary
Karnataka Chief minister Siddaramaiah is unlikely to accept Former Union minister P Chidambaram's candidature to the Rajya Sabha from Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X