ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ಸ್ಪೋಟ: ಸಿಎಂ ಯಡಿಯೂರಪ್ಪ, ಈಶ್ವರಪ್ಪ ಮೇಲೆ ಸಿದ್ದರಾಮಯ್ಯ ಗಂಭೀರ ಆರೋಪ!

|
Google Oneindia Kannada News

ಬೆಂಗಳೂರು, ಜ. 23: ಶಿವಮೊಗ್ಗದಲ್ಲಿ ಸ್ಪೋಟ ಸಂಭವಿಸಿದ ಬಳಿಕ ಅಕ್ರಮ ಗಣಿಗಾರಿಕೆಯ ಕರಾಳ ಮುಖಗಳು ಒಂದೊಂದಾಗಿ ಬಹಿರಂಗವಾಗುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಇಷ್ಟೊಂದು ಬೆಳೆಯಲು ಸ್ಥಳೀಯ ರಾಜಕಾರಣಿಗಳ ಸಹಕಾರವೇ ಕಾರಣ ಎಂಬ ಆರೋಪಗಳು ಕೇಳಿ ಬಂದಿವೆ. ಅವು ಕೇವಲ ಆರೋಪಗಳಾಗಿರದೆ ಸಾಕ್ಷಿ ಸಹಿತ ಆರೋಪಗಳು ಜಿಲ್ಲೆಯ ಪ್ರಮುಖ ರಾಜಕಾರಣಿಗಳ ಮೇಲೆ ಬಂದಿವೆ. ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಾಂಡವ ! ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಾಂಡವ !

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರ ಕುಮ್ಮಕ್ಕು ಕಾರಣ ಎಂದು ದೂರಿದ್ದಾರೆ.

ಅಕ್ರಮ-ಸಕ್ರಮ ಮಾಡಿಕೊಳ್ಳಿ ಎಂದ ಸಿಎಂ

ಅಕ್ರಮ-ಸಕ್ರಮ ಮಾಡಿಕೊಳ್ಳಿ ಎಂದ ಸಿಎಂ

ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯೇ ಅಪರಾಧ. ಅದಕ್ಕೆ ಏನು ಶಿಕ್ಷೆ ? ಅರ್ಜಿ ಹಾಕಿಕೊಂಡು ಅಕ್ರಮವನ್ನು ಸಕ್ರಮ ಮಾಡಿಕೊಳ್ಳಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಬಹುದೇ? ಎಂದು ಪ್ರಶ್ನಿಸಿದರು.


ಇದು ಅಕ್ರಮ ಮನೆ, ಜಮೀನು ಸಕ್ರಮ ಮಾಡುವುದಲ್ಲ. ಹಾಗಾದರೆ ಗಣಿ ಇಲಾಖೆಯ ಕಾನೂನು ಇರುವುದೇಕೆ. ಮುಖ್ಯಮಂತ್ರಿಗಳ ಹೇಳಿಕೆ ಖಂಡನೀಯ. ಬೇಜವಾಬ್ದಾರಿತರನದ ಪರಮಾವಧಿ. ಮುಖ್ಯಮಂತ್ರಿಗಳೇ ಕಾನೂನು ಬಾಹಿರ ಕ್ರಮಗಳನ್ನು ಸಕ್ರಮ ಮಾಡುತ್ತೇವೆ ಎಂದು ಹೇಳುವುದು ಸರಿಯಲ್ಲ. ಅದು ಅಕ್ರಮಗಳಿಗೆ ಸಹಕರಿಸಿದಂತೆ ಆಗುತ್ತದೆ. ರಾಜ್ಯದ ಯಾವುದೇ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರಲಿ, ಅದರಲ್ಲಿ ಯಾವುದೇ ಪಕ್ಷದವರು ಭಾಗಿಯಾಗಿರಲಿ. ಸರ್ಕಾರ ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪ ಹೊಣೆ

ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪ ಹೊಣೆ

ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿರುವ ದುರಂತ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದೆ. ಆಂಧ್ರದಿಂದ ಪರವಾನಿಗೆ ಇಲ್ಲದೆ ಜಿಲಿಟಿನ್ ಮತ್ತು ಡೈನಮೇಟ್ ತರಲಾಗಿತ್ತು. ಇದು ಮೊದಲ ಅಪರಾಧ. ತಂದಿದ್ದನ್ನು ಸುರಕ್ಷಿತವಾದ ಜಾಗದಲ್ಲಿ ಇಡದೇ ಹೋಗಿದ್ದಿದು ಎರಡನೇ ಅಪರಾಧ. ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯ ಈ ದುರಂತದಲ್ಲಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

ಅಕ್ರಮದ ಬಗ್ಗೆ ಆಯನೂರು ಹೇಳಿಕೆ

ಅಕ್ರಮದ ಬಗ್ಗೆ ಆಯನೂರು ಹೇಳಿಕೆ

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರೇ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಕಡೆ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ ಎಂದು ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲಿಯೇ ಪರವಾನಿಗೆ ಇಲ್ಲದೆ ಯದ್ವಾತದ್ವಾ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದರೆ ಇದು ಜಿಲ್ಲಾಡಳಿತರ ವೈಫಲ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರು ಇದರ ಹೊಣೆ ಹೊರಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಕಣ್ಣು ಮುಚ್ಚಿಕೊಂಡಿರಿ ಎಂದಿದ್ದ ಈಶ್ವರಪ್ಪ

ಕಣ್ಣು ಮುಚ್ಚಿಕೊಂಡಿರಿ ಎಂದಿದ್ದ ಈಶ್ವರಪ್ಪ

ಈ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಈಶ್ವರಪ್ಪ ಅವರು ಮಾತನಾಡುತ್ತಾ, ಊರಿನ ಒಳ್ಳೆಯದಕ್ಕೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಕಣ್ಣು ಮುಚ್ಚಿಕೊಂಡಿರಿ ಎಂದು ಸಲಹೆ ನೀಡಿದ್ದಾರೆ. ಜನಪ್ರತಿನಿಧಿಯೇ ಹೀಗೇ ಹೇಳಿದ ಬಳಿಕ ಅಧಿಕಾರಿಗಳು ಬೇವಾಬ್ದಾರಿಯಿಂದ ಕೆಲಸ ಮಾಡದೆ ಇನ್ನೇನು ಮಾಡಿಯಾರು ? ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳು ಮತ್ತು ಕ್ರಷರ್‍ಗಳು ಸಕ್ರಮವಾಗಿ ನಡೆಯುತ್ತಿವೆ ಎಂದೂ ಈಶ್ವರಪ್ಪ ಅವರೇ ಹೇಳಿದ್ದಾರೆ.


ಆದರೆ, ಆಯನೂರು ಮಂಜುನಾಥ್ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದಿದ್ದಾರೆ. ಮಂಜುನಾಥ್ ಅವರು ಬಿಜೆಪಿಯ ಹಿರಿಯ ನಾಯಕರು. ವಿಧಾನ ಪರಿಷತ್ತಿನ ಹಾಲಿ ಸದಸ್ಯರು. ಕ್ರಷರ್ ನಡೆಸುತ್ತಿದ್ದವರ ಬೇಜವಾಬ್ದಾರಿತನವೂ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸ್ಪೋಟದಲ್ಲಿ 6 ಜನರು ಮೃತಪಟ್ಟಿದ್ದಾರೆ

ಸ್ಪೋಟದಲ್ಲಿ 6 ಜನರು ಮೃತಪಟ್ಟಿದ್ದಾರೆ

ನನ್ನ ಪ್ರಕಾರ ಇದು ಗಂಭೀರವಾದ ವಿಷಯ. ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಹಾಗೂ ಆಯನೂರು ಮಂಜುನಾಥ್ ಮತ್ತು ಈಶ್ವರಪ್ಪ ಅವರ ಹೇಳಿಕೆ ಹಿನ್ನೆಲೆಯಲ್ಲಿ ಸತ್ಯ ಏನೆಂದು ಗೊತ್ತಾಗಬೇಕು. ಮೃತರ ಕುಟುಂಬದವರಿಗೆ ನ್ಯಾಯಯುತ ಪರಿಹಾರ ಘೋಷಣೆ ಮಾಡಬೇಕು. ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕು. ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಆಗಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Recommended Video

ರಾಜ್ಯದಲ್ಲಿ ಗಣಿಗಾರಿಕೆ ಅವಶ್ಯಕತೆ ಇದೆ, ಆದ್ರೆ illegal mining ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- CM BSY | Oneindia Kannada

English summary
Siddaramaiah, the leader of the opposition in the assembly, alleged that Chief Minister Yediyurappa was giving the go-ahead for illegal mining in the state. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X