ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಸಿಎಂ ಸಿಡಿ ಬಿಡುಗಡೆಯ ಬೆದರಿಕೆಯೊಡ್ಡಿದ್ದ ರಮೇಶ್ ಜಾರಕಿಹೊಳಿ ಸಹೋದರ"

|
Google Oneindia Kannada News

ಬೆಂಗಳೂರು, ಮಾರ್ಚ್.03: ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಸಲೀಲೆ ಪ್ರಕರಣದಲ್ಲಿ ನೀನು ನಮ್ಮ ಅಣ್ಣನಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆದರೆ ಹುಷಾರ್. ಆ ಮೇಲೆ ನಿನ್ ಸಿಡಿ ಬಿಡುಗಡೆ ಮಾಡುತ್ತೇವೆ ಎಂದು ಸ್ವತಃ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ರಮೇಶ್ ಜಾರಕಿಹೊಳಿ ಅವರ ಸಹೋದರ ಆವಾಜ್ ಹಾಕಿದ್ದನು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಗೋಕಾಕ್‌ನಲ್ಲಿ ಪವರ್ ಕಟ್ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ; ಗೋಕಾಕ್‌ನಲ್ಲಿ ಪವರ್ ಕಟ್

ಬೆಂಗಳೂರಿನಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಜೆಪಿ ಸರ್ಕಾರ ಮತ್ತು ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಇಂಥ ಮಾನಗೆಟ್ಟ ಸರ್ಕಾರ ಬೇಕೇನ್ರಿ ಅಂತಾ ಪ್ರಶ್ನಿಸಿದರು.

"ಅಯ್ಯೋ ಅದರ ಬಗ್ಗೆ ಮಾತನಾಡುವುದಕ್ಕೇ ನಾಚಿಕೆ ಆಗುತ್ತೆ"

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಬಗ್ಗೆ ಮಾತನಾಡುವುದಕ್ಕೇ ನಾಚಿಕೆ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೀಗಳಿದಿದ್ದಾರೆ. ಇನ್ನು, ಆ ವಿಡಿಯೋ ನೋಡುವುದಕ್ಕೂ ಸಾಧ್ಯವಾಗದಷ್ಟು ಅಸಹ್ಯವಾಗಿದೆ. ಮಾನಗೆಟ್ಟವರು ಕಣ್ರಿ ಇವರೆಲ್ಲ. ರಾಜ್ಯದಲ್ಲಿ ಎಂಥ ಸರ್ಕಾರವಿದೆ ನೋಡಿದಿರಾ. ಇಂಥ ಸರ್ಕಾರ ಬೇಕೇನಪ್ಪಾ ನಮಗೆ ಎಂದು ಕಟುವಾಗಿ ಪ್ರಶ್ನೆ ಮಾಡಿದರು.

ಬಿಎಸ್ ವೈ ಅವರಿಗೆ ಸೇರಿದ ಸಿಡಿ ಬಿಡುಗಡೆ ಬೆದರಿಕೆ

ಬಿಎಸ್ ವೈ ಅವರಿಗೆ ಸೇರಿದ ಸಿಡಿ ಬಿಡುಗಡೆ ಬೆದರಿಕೆ

ರಾಜ್ಯ ರಾಜಕಾರಣದಲ್ಲಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲಿ ಸಿಡಿ ಪ್ರಕರಣ ಸಖತ್ ಸದ್ದು ಮಾಡುತ್ತಿದೆ. ಸಚಿವರ ರಾಜೀನಾಮೆ ಕೂಗು ಹೆಚ್ಚಾಗುತ್ತಿರುವ ಬೆನ್ನಲ್ಲೇ ರಮೇಶ್ ಅವರ ಸಹೋದರ ಸ್ವತಃ ಸಿಎಂ ಬೆದರಿಕೆ ಹಾಕಿದ್ದರಂತೆ. ನಮ್ಮಣ್ಣನ ರಾಜೀನಾಮೆ ಪಡೆದುಕೊಳ್ಳಬೇಡ. ಒಂದು ವೇಳೆ ರಾಜೀನಾಮೆ ಪಡೆದರೆ ನಿನ್ನ ಸಿಡಿಯನ್ನು ನಾವು ಬಿಡುಗಡೆ ಮಾಡುತ್ತೇವೆ ಎಚ್ಚರಿಕೆ ಎಂದು ಬೆದರಿಕೆ ಹಾಕಲಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಘಟನೆಯ ಬಗ್ಗೆ ಸಿದ್ದರಾಮಯ್ಯ ಉಲ್ಲೇಖ

ಕಾಂಗ್ರೆಸ್ ಸರ್ಕಾರದಲ್ಲಿ ಘಟನೆಯ ಬಗ್ಗೆ ಸಿದ್ದರಾಮಯ್ಯ ಉಲ್ಲೇಖ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ಅಂದಿನ ಸಚಿವ ಹೆಚ್ ವೈ ಮೇಟಿ ವಿರುದ್ಧವೂ ಇಂಥದ್ದೇ ರಾಸಲೀಲೆಗೆ ಸಂಬಂಧಿಸಿದ ಆರೋಪ ಕೇಳಿ ಬಂದಿತ್ತು. ಅಂದು ಅವರೂ ಕೂಡಾ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ವಾದಿಸಿದ್ದರು. ಆದರೆ ನಾವು ಆ ತಕ್ಷಣಕ್ಕೆ ಮೇಟಿ ರಾಜೀನಾಮೆಯನ್ನು ಪಡೆದುಕೊಳ್ಳಲಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಅಲ್ಲದೇ ನೈತಿಕತೆ ಮತ್ತು ಮೌಲ್ಯಗಳು ಇದ್ದಲ್ಲಿ ತಕ್ಷಣಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.

ಏನಿದು ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ

ಏನಿದು ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ

ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಯುವತಿಯೊಬ್ಬರಿಗೆ ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ರಾಸಲೀಲೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ಆರೋಪಕ್ಕೆ ಸಂಬಂಧಿಸಿದ ರಾಸಲೀಲೆಯ ವಿಡಿಯೋವನ್ನು ಬಿಡುಗಡೆಗೊಳಿಸಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

English summary
Siddaramaiah Alleges That Ramesh Jarkiholi Brother Threaten To Launch BSY CD.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X