• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

"ಕೊರೊನಾ: ಸಂಘ ಪರಿವಾರದ ಪಾಲಾಗಲಿದೆಯಾ 8 ಸಾವಿರ ಕೋಟಿ ರೂ?"

|

ಬೆಂಗಳೂರು, ಏ. 12: ಬೆಂಗಳೂರು ನಗರದಲ್ಲಿ ಕಾರ್ಮಿಕರಿಗೆ ಸಿದ್ದ ಆಹಾರ ಮತ್ತು ಆಹಾರ ಸಾಮಾಗ್ರಿಗಳನ್ನು ವಿತರಿಸುವ ಕಾರ್ಮಿಕ ಇಲಾಖೆಯ ಯೋಜನೆಯನ್ನು ಬಿಜೆಪಿ ರಾಜಕೀಯವಾಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಪಾರದರ್ಶಕತೆ ಇಲ್ಲದೆ ನಡೆಯುತ್ತಿರುವ ಈ ಯೋಜನೆಯ ಬಗೆಗಿನ ದೂರುಗಳ ಬಗ್ಗೆ ತನಿಖೆ ನಡೆಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಟ್ಟಡ ನಿರ್ಮಾಣ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ನಿಧಿಯಿಂದ ನೀಡಲಾಗುತ್ತಿರುವ ಆಹಾರದ ಪೊಟ್ಟಣಗಳನ್ನು ಬಿಜೆಪಿ ಶಾಸಕರು ಮತ್ತು ಮಹಾನಗರಪಾಲಿಕೆ ಸದಸ್ಯರು ಬೇಕಾಬಿಟ್ಟಿಯಾಗಿ ಕೇಂದ್ರ ಕಿಚನ್ ನಿಂದ ತರಿಸಿಕೊಂಡು ವಿತರಿಸುತ್ತಿದ್ದಾರೆ.

'ಜನರು ದೂರವಾಣಿ ಕರೆ ಮಾಡಿ ಅಳುತ್ತಿದ್ದಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ'

ಅದೇ ರೀತಿ ಆಹಾರ ಸಾಮಾಗ್ರಿಗಳ ಹ್ಯಾಂಪರ್ಸ್ ಮೇಲೆ ತಮ್ಮ ಭಾವಚಿತ್ರ-ಹೆಸರಿನ ಲೇಬಲ್ ಗಳನ್ನು ಹಚ್ಚಿ, ತಮ್ಮ ಕ್ಷೇತ್ರಗಳಲ್ಲಿ ತಮ್ಮ ಮತದಾರರಿರುವ ಪ್ರದೇಶದಲ್ಲಿ ವಿತರಣೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಭದ್ರತಾ ಮಂಡಳಿಯ ನಿಧಿಯ ಸುಮಾರು 8 ಸಾವಿರ ಕೋಟಿ ರೂ.ಗಳು ಸಂಘ ಪರಿವಾರದ ಸಂಸ್ಥೆಗಳ ಪಾಲಾಗಲಿದೆ ಎಂದು ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.

ಆಹಾರ ವಂಚಿತ ಅರ್ಹ ಫಲಾನುಭವಿಗಳು

ಆಹಾರ ವಂಚಿತ ಅರ್ಹ ಫಲಾನುಭವಿಗಳು

ಇದರಿಂದಾಗಿ ಅರ್ಹ ಫಲಾನುಭವಿಗಳಾದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಹಾಗೂ ಅಸಂಘಟಿತ ಕ್ಷೇತ್ರದ ಕಾರ್ಮಿಕರು ತಮ್ಮದೇ ಕಲ್ಯಾಣ ಮಂಡಳಿಯ ನಿಧಿಯಿಂದ ನೀಡಲಾಗುತ್ತಿರುವ ಸಿದ್ದ ಆಹಾರ ಪೊಟ್ಟಣ ಮತ್ತು ಆಹಾರ ಸಾಮಗ್ರಿಗಳಿಂದ ವಂಚಿತರಾಗಿದ್ದಾರೆ.

ರಾಜ್ಯದಲ್ಲಿ ಸುಮಾರು 30 ಲಕ್ಷ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿದ್ದು ಬೆಂಗಳೂರು ಮಹಾನಗರದಲ್ಲಿಯೇ ಸುಮಾರು 15 ಲಕ್ಷ ಕಾರ್ಮಿಕರು ನೊಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸುಮಾರು ಒಂದು ಕೋಟಿಯಷ್ಟು ಅಸಂಘಟಿತ ಕ್ಷೇತ್ರದ ಕಾರ್ಮಿಕರಿದ್ದಾರೆ. ಇವರಲ್ಲಿ ಬಹುಸಂಖ್ಯೆಯ ಕಾರ್ಮಿಕರು ಸರ್ಕಾರದ ಯಾವುದೇ ನೆರವಿಲ್ಲದೆ ಉಪವಾಸ ಕೂರುವ ಪರಿಸ್ಥಿತಿ ಎದುರಾಗಿದೆ.

ಸಂಘ ಪರಿವಾರದ ಹಿಡಿತದಲ್ಲಿ ಯೋಜನೆ

ಸಂಘ ಪರಿವಾರದ ಹಿಡಿತದಲ್ಲಿ ಯೋಜನೆ

ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ನಿಧಿಯಿಂದ ಆಹಾರ ಒದಗಿಸಬೇಕೆಂಬ ಬೇಡಿಕೆಯನ್ನು ಪುರಸ್ಕರಿಸಿ ಕೊನೆಗೂ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ಅಧಿಕೃತ ಕಾರ್ಮಿಕ ಸಂಘಗಳ ಸಹಯೋಗದೊಡನೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು.

ಕೊರೊನಾ ಪರಿಹಾರ ನಿಧಿಗೆ ತಲಾ 1 ಲಕ್ಷ ದೇಣಿಗೆಗೆ ಸಿದ್ದರಾಮಯ್ಯ ಮನವಿ

ಆದರೆ ಕಾರ್ಮಿಕ ಸಚಿವರೇ ಉದ್ಘಾಟಿಸಿದ ಈ ಯೋಜನೆಯನ್ನು ನಗರದ ಬಿಜೆಪಿ ಶಾಸಕರು ಮತ್ತು ಮಹಾನಗರಪಾಲಿಕೆ ಸದಸ್ಯರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ, ಕಾರ್ಮಿಕ ಇಲಾಖೆಯಿಂದ ಮಹಾನಗರಪಾಲಿಕೆಗೆ ವರ್ಗಾಯಿಸಿವಂತೆ ಮಾಡಿದ್ದಾರೆ. ಮತ್ತು ಈ ಯೋಜನೆ ಅನುಷ್ಠಾನದಲ್ಲಿ ಕಾರ್ಮಿಕ ಸಂಘಗಳನ್ನು ಹೊರಗಿಟ್ಟು ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರನ್ನು ಸೇರಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನು ಸಿದ್ದರಾಮಯ್ಯ ಮಾಡಿದ್ದಾರೆ.

ಯಾರಿಗೆ ಆಹಾರ ವಿತರಿಸಿದ್ದಾರೆ ಎಂಬ ವಿವರ ಇಲ್ಲ!

ಯಾರಿಗೆ ಆಹಾರ ವಿತರಿಸಿದ್ದಾರೆ ಎಂಬ ವಿವರ ಇಲ್ಲ!

ಕೋವಿಡ್-19 ಇಡೀ ಮನುಕುಲ ಎದುರಿಸುತ್ತಿರುವ ಹಾವಳಿ. ಇದನ್ನು ನಾವೆಲ್ಲರೂ ಜಾತಿ-ಧರ್ಮ-ಪಕ್ಷ-ಪ್ರದೇಶಗಳನ್ನು ಮೀರಿ ಒಂದಾಗಿ ಎದುರಿಸಬೇಕಾಗಿದೆ. ಇದರಲ್ಲಿ ರಾಜಕೀಯ ಲಾಭ-ನಷ್ಟದ ಲೆಕ್ಕ ಹಾಕುತ್ತಾ ಕೂರುವುದು ಅಮಾನವೀಯವಾದುದು. ಕಳೆದೆರಡು ದಿನಗಳಿಂದ ಪ್ರತಿದಿನ ಸುಮಾರು ಎರಡು ಲಕ್ಷ ಆಹಾರದ ಪೊಟ್ಟಣಗಳನ್ನು ಕೇಂದ್ರ ಕಿಚನ್ ನಿಂದ ಪೂರೈಸಲಾಗಿದೆ. ಅದೇ ರೀತಿ ಒಂದು ಲಕ್ಷ ಆಹಾರ ಸಾಮಾಗ್ರಿಗಳ ಹ್ಯಾಂಪರ್ಸ್ ಗಳನ್ನು ವಿತರಿಸಲಾಗಿದೆ. ಇವುಗಳು ಯಾರಿಗೆ ನೀಡಲಾಗಿದೆ ಎನ್ನುವ ವಿವರ ಯಾರ ಬಳಿಯೂ ಇಲ್ಲ. ಕೆಲವು ಬಿಜೆಪಿ ಶಾಸಕರು ಆಹಾರ ಪೊಟ್ಟಣಗಳನ್ನು ವಿತರಿಸುವಅವರ ಜಾತಿ-ಧರ್ಮವನ್ನು ವಿಚಾರಿಸುತ್ತಿರುವ ದೂರುಗಳು ಕೇಳಿಬಂದಿವೆ. ಬೇರೆ ರಾಜ್ಯಗಳಿಂದ ಬಂದವರೆಲ್ಲರನ್ನೂ ಬಾಂಗ್ಲಾದೇಶೀಯರೆಂದು ದೂರ ಇಟ್ಟಿರುವ ಆರೋಪಗಳಿವೆ.

ಸಂಘ ಪರಿವಾರದ ಪಾಲಾಗಲಿದೆಯಾ 8 ಸಾವಿರ ಕೋಟಿ ರೂ?

ಸಂಘ ಪರಿವಾರದ ಪಾಲಾಗಲಿದೆಯಾ 8 ಸಾವಿರ ಕೋಟಿ ರೂ?

ಈ ಯೋಜನೆಯನ್ನು ಪಾರದರ್ಶಕ ರೀತಿಯಲ್ಲಿ ಅನುಷ್ಠಾನಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಮತ್ತು ಮಹಾನಗರಪಾಲಿಕೆಯ ಮೂಲಕ ಆಹಾರ ಪೊಟ್ಟಣ ಮತ್ತು ಆಹಾರ ಸಾಮಗ್ರಿಗಳ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂದು ನಾನು ಒತ್ತಾಯಿಸುತ್ತಿದ್ದೇನೆ.

ಇದರ ಜೊತೆಗೆ ಆಹಾರ ಸಾಮಗ್ರಿಗಳನ್ನು ವಿತರಣೆಯ ಹೊಣೆಯನ್ನು ಬಿಜೆಪಿ ನಾಯಕರ ನೇತೃತ್ವದ ಸೇವಾ ಸಂಸ್ಥೆಗಳಿಗೆ ವಹಿಸಲಾಗಿದೆ. ಹಲವಾರು ಕಡೆಗಳಲ್ಲಿ ಆರ್‌ಎಸ್‌ಎಸ್‌ಗೆ ಸೇರಿದ ಸಂಸ್ಥೆಗಳು ಕೂಡಾ ಇದರಲ್ಲಿ ಭಾಗವಹಿಸಿವೆ. ಈ ಮೂಲಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಭದ್ರತಾ ಮಂಡಳಿಯ ನಿಧಿಯಲ್ಲಿರುವ ಸುಮಾರು 8000 ಕೋಟಿ ರೂಪಾಯಿಗಳನ್ನು ಈ ಸಂಸ್ಥೆಗಳಿಗೆ ಧಾರೆಯೆರೆಯಲು ಸರ್ಕಾರ ನಿರ್ಧರಿಸಿದಂತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ ಬಳಸಿಕೊಳ್ಳಿ

ಇಂದಿರಾ ಕ್ಯಾಂಟೀನ್‌ ಬಳಸಿಕೊಳ್ಳಿ

ಲಾಕ್ ಡೌನ್ ಘೋಷಣೆಯ ದಿನದಿಂದಲೇ ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಉಚಿತ ಊಟ-ತಿಂಡಿ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರ ಹಪಡಿಸಿದ್ದೆ. ಕೆಲವು ದಿನ ಪ್ರಾರಂಭವಾದ ಈ ಉಚಿತ ಊಟವನ್ನು ನಂತರ ನಿಲ್ಲಿಸಿ ಅದಕ್ಕೆ ದರ ನಿಗದಿಪಡಿಸಲಾಯಿತು. ಇದರಿಂದಾಗಿ ಆ ಕ್ಯಾಂಟೀನ್ ಗಳಿಗೆ ಬರುವವರ ಸಂಖ್ಯೆ ಅರ್ಧದಷ್ಟು ಇಳಿದಿದೆ. ಕೇಂದ್ರ ಕಿಚನ್ ಮತ್ತು ಊಟದ ಮನೆಯನ್ನೊಳಗೊಂಡ ಇಂದಿರಾ ಕ್ಯಾಂಟೀನ್ ಗಳನ್ನು ಕಾರ್ಮಿಕ ಇಲಾಖೆ ಈಗಲೂ ಆಹಾರ ವಿತರಣೆಗೆ ಬಳಸಿಕೊಳ್ಳಲು ಸಾಧ್ಯ ಇದೆ.

ಕಾರ್ಮಿಕ ಇಲಾಖೆಯ ಆಹಾರ ವಿತರಣೆಯ ಯೋಜನೆಯಲ್ಲಿ ಕಾರ್ಮಿಕರ ಜೊತೆ ಸಂಬಂಧವೇ ಇಲ್ಲದ ಸಂಸ್ಥೆಗಳಿಗೆ ಕೊಟ್ಟಿರುವ ಜವಾಬ್ದಾರಿಯನ್ನು ಹಿಂದಕ್ಕೆ ಪಡೆದು ಅದನ್ನು ಇಂದಿರಾ ಕ್ಯಾಂಟೀನ್ ಮೂಲಕ ಅಧಿಕೃತ ಕಾರ್ಮಿಕ ಸಂಘಗಳ ಸಹಯೋಗದೊಡನೆ ಮುಂದುವರೆಸಬೇಕೆಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

English summary
Siddaramaiah alleges that a sum of Rs 8,000 crore will be left for the Sangh Parivar. Siddaramaiah appeals to CM Yeddyurappa to stop this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more