• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೂವರು ಶಾಸಕರು ಅನರ್ಹ: ಸಿದ್ದರಾಮಯ್ಯ, ಪರಮೇಶ್ವರ್ ಹೇಳಿದ್ದೇನು?

|

ಬೆಂಗಳೂರು, ಜುಲೈ 25: ಸ್ಪೀಕರ್ ರಮೇಶ್ ಕುಮಾರ್ ಅವರ ಐತಿಹಾಸಿಕ ನಿರ್ಣಯದಿಂದ ಪಕ್ಷಾಂತರ ಚಟುವಟಿಕೆಯಲ್ಲಿ ನಿರತರಾಗಿದ್ದ ಮೂವರು ಶಾಸಕರನ್ನು ವಿಧಾನಸಭೆ ಸದಸ್ಯ ಸ್ಥಾನದಿಂದ ಅನರ್ಹ ಮಾಡಲಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ನೀಡಿದ್ದ ದೂರಿನ ಆಧಾರದಲ್ಲಿಯೇ ನಿರ್ಣಯವನ್ನು ಸ್ಪೀಕರ್ ಕೈಗೊಂಡಿದ್ದು, ಅನರ್ಹತೆಯ ಬಗ್ಗೆ ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಆರ್.ಶಂಕರ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅನರ್ಹತೆಗೆ ಕಾರಣಆರ್.ಶಂಕರ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅನರ್ಹತೆಗೆ ಕಾರಣ

'ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ನಮ್ಮ‌ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರ ನಿರ್ಣಯವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂಥ ಕಠಿಣ ನಿರ್ಣಯಗಳು ಅತ್ಯಗತ್ಯ. ಸ್ವಾರ್ಥ ಸಾಧನೆಗಾಗಿ ಜನಾದೇಶವನ್ನು ಉಲ್ಲಂಘಿಸುವವರಿಗೆ ಈ ಐತಿಹಾಸಿಕ ನಿರ್ಣಯ ಎಚ್ಚರಿಕೆಯ ಗಂಟೆಯಾಗಲಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಿ.ಪರಮೇಶ್ವರ್ ಅವರೂ ಸಹ ಅನರ್ಹತೆಯ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, 'ಅಧಿಕಾರದಾಸೆಗೆ ಪಕ್ಷ ತೊರೆದು ಹೋಗಿ ತಮ್ಮನ್ನಾರಿಸಿದ ಜನರನ್ನು ಇಡೀ ದೇಶದ ಜನರ ಎದುರಿಗೆ ನಗೆಪಾಟಲಿಗೀಡಾಗುವಂತೆ ಮಾಡಿದ ರಮೇಶ್ ಜಾರಕಿಹೊಳಿ,‌ ಶಂಕರ್ ಹಾಗೂ ಮಹೇಶ್ ಕುಮಟಳ್ಳಿ ಅವರನ್ನು ಅಮಾನತು ಮಾಡಿರುವ ಸಭಾಧ್ಯಕ್ಷರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಬಂಡಾಯ ಶಾಸಕರ ನಡವಳಿಕೆಯಿಂದಾಗಿ ರಾಜಕಾರಣದ ಬಗ್ಗೆ ಜನರಲ್ಲಿ ಹೇಸಿಗೆ ಹುಟ್ಟಿದೆ' ಎಂದು ಹೇಳಿದ್ದಾರೆ.

English summary
Siddaramaiah and G Parameshwar welcomes speaker Ramesh Kumar decision of disqualification the three MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X