ಮಕ್ಕಳಿಗೆ ಟಿಕೆಟ್ ಕೇಳಿದ ಸಿದ್ದರಾಮಯ್ಯ, ಡಾ.ಎಚ್.ಸಿ.ಮಹದೇವಪ್ಪ!
ಮೈಸೂರು, ಮಾರ್ಚ್ 25 : ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪುತ್ರರಿಗೆ ಟಿಕೆಟ್ ಕೊಡಿಸಲು ಕಸರತ್ತು ಆರಂಭಿಸಿದ್ದಾರೆ. ಟಿಕೆಟ್ ನೀಡುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮುಂದೆ ಬೇಡಿಕೆ ಇಟ್ಟಿದ್ದಾರೆ.
ಕರ್ನಾಟಕ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಭಾನುವಾರ ಬೆಳಗ್ಗೆ ರಾಹುಲ್ ಗಾಂಧಿ ಅವರಿಗೆ ಮಕ್ಕಳನ್ನು ಪರಿಚಯಿಸಿದ ಉಭಯ ನಾಯಕರು ಟಿಕೆಟ್ ವಿಚಾರ ಪ್ರಸ್ತಾಪಿಸಿದ್ದಾರೆ.
ವರುಣಾ ಕ್ಷೇತ್ರದಿಂದ ಡಾ.ಯತೀಂದ್ರ, ಟೀ.ನರಸಿಪುರದಿಂದ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಸ್ಪರ್ಧೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಎರಡು ಕ್ಷೇತ್ರದಲ್ಲಿ ಇಬ್ಬರನ್ನು ಗೆಲ್ಲಿಸಿ ತರುತ್ತೆವೆ ಎಂದು ಭರವಸೆ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ಉಪಹಾರ ಸೇವಿಸುವಾಗ ರಾಹುಲ್ ಗಾಂಧಿ ಮುಂದೆ ಉಭಯ ನಾಯಕರು ಈ ವಿಚಾರ ಪ್ತಸ್ತಾಪ ಮಾಡಿದ್ದಾರೆ. ಈ ವೇಳೆ ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಅವರು ಸಹ ಜೊತೆಗಿದ್ದರು.
ವರುಣಾ ಕ್ಷೇತ್ರದ ಶಾಸಕರು ಸಿದ್ದರಾಮಯ್ಯ, ಟಿ.ನರಸೀಪುರ ಕ್ಷೇತ್ರದ ಶಾಸಕರು ಮಹದೇವಪ್ಪ. ಮಕ್ಕಳು ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ? ಕಾದು ನೋಡಬೇಕು.












Click it and Unblock the Notifications