ಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಗರಂ, ಒಗ್ಗೂಡಲು ಕರೆ
ಬೆಂಗಳೂರು, ಜೂನ್ 03: ಹಿಂದಿಯೇತರ ರಾಜ್ಯಗಳ ಮೇಲೆ ವಿಶೇಷವಾಗಿ ದಕ್ಷಿಣ ಭಾರತದ ದ್ರಾವಿಡ ರಾಜ್ಯಗಳ ಮೇಲೆ ಕೇಂದ್ರದ ಹಿಂದಿ ಹೇರಿಕೆ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಿಂದಿ ಹೇರಿಕೆಯನ್ನು ಕಟುವಾಗಿ ಖಂಡಿಸಿದ್ದಾರೆ.
ಹಿಂದಿ ಹೇರಿಕೆ ವಿರೋಧಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಾತೃಭಾಷೆಯ ಹೊರತಾದ ಇನ್ನಾವುದೇ ಭಾಷೆಯು ಇಚ್ಛಿಕವಾಗಿರಬೇಕೆ ಹೊರತು ಖಡ್ಡಾಯವಾಗಿರಬಾರದು, ಇದು ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.
ಹಿಂದಿ ಭಾಷಿಕರಲ್ಲದವರ ಮೇಲೆ ಹಿಂದಿ ಹೇರಲು ಹೊರಟಿರುವುದು ಭಾರತದ ಒಕ್ಕೂಟದ ವ್ಯವಸ್ಥೆಗೆ ಮಾರಕವಾಗಿದೆ ಎಂದು ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ವಿಷಯದ ಕುರಿತಾಗಿ ಮತ್ತೊಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದೆ ಹೇರಿಕೆಯನ್ನು ಸಹಿಸಲಾಗದು ಎಂದು ರಾಷ್ಟ್ರೀಯ ಶಿಕ್ಷಣ ನೀತಿ 2019 ರ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.
|
ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಇಲ್ಲ: ಸಿದ್ದರಾಮಯ್ಯ
ಕನ್ನಡ ನಮ್ಮ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.
|
ತಮಿಳುನಾಡು, ಕರ್ನಾಟದಲ್ಲಿ ಭಾರಿ ವಿರೋಧ
ರಾಷ್ಟ್ರೀಯ ಶಿಕ್ಷಣ ನೀತಿಯ ಕರಡುವಿನಲ್ಲಿ ತ್ರಿಭಾಷಾ ಸೂತ್ರದನ್ವಯ ಹಿಂದಿಯನ್ನು ಕಡ್ಡಾಯವಾಗಿ ಕಲಿಯುವಂತೆ ಪ್ರತಿಪಾದಿಸಲಾಗುತ್ತಿದೆ. ಇದು ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿ ಆಕ್ರೋಶ ಹುಟ್ಟಿಸಿದೆ.

ಡಿಎಂಕೆ ನಾಯಕ ಸ್ಟಾಲಿನ್ ಎಚ್ಚರಿಕೆ
ಹಿಂದಿ ಹೇರಿಕೆ ವಿರುದ್ಧವಾಗಿ ವಿಶೇಷವಾಗಿ ತಮಿಳುನಾಡಿನಲ್ಲಿ ಹೆಚ್ಚಿನ ಪ್ರತಿಭಟನೆ ವ್ಯಕ್ತವಾಗುತ್ತಿದ್ದು, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಮುಂದಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸ್ಟಾಲಿನ್ ಈಗಾಗಲೇ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.
| Array |
ಕುಮಾರಸ್ವಾಮಿ ಪ್ರತಿಕ್ರಿಯೆ
ಕರ್ನಾಟಕದಲ್ಲಿಯೂ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ಮುನ್ನೆಲೆಗೆ ಬಂದಿದ್ದು, ಸ್ವತಃ ಸಿಎಂ ಕುಮಾರಸ್ವಾಮಿ ಅವರು ಇದಕ್ಕೆ ದನಿಗೂಡಿಸಿ 'ಯಾವುದೇ ಭಾಷೆಯ ಹೇರಿಕೆಯು ಭಾಷಾ ಅಂದಾಭಿಮಾನಕ್ಕೆ ಕಾರಣವಾಗುತ್ತದೆ, ಇದು ಭಾರತದ ಒಕ್ಕೂಟದ ವ್ಯವಸ್ಥೆಗೆ ಮಾರಕ' ಎಂದು ಹೇಳಿದ್ದಾರೆ.

ಮೆಟ್ರೋದಲ್ಲಿ ಹಿಂದಿ ಹೇರಿಕೆ ಕುರಿತು ಪ್ರತಿಭಟನೆ
ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಮೆಟ್ರೋಗಳಲ್ಲಿ ಹಿಂದಿ ಹೇರಿಕೆ ವಿರುದ್ಧ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಆಕ್ರೋಶ ಹುಟ್ಟಿತ್ತು, ಮೆಟ್ರೋಗಳಲ್ಲಿ ಹಿಂದಿ ಫಲಕಗಳನ್ನು ಕೆಲವು ಕನ್ನಡಪರ ಸಂಘಟನೆಗಳು ಕಿತ್ತು ಹಾಕಿದ್ದವು.












Click it and Unblock the Notifications