ಮಡಿಕೇರಿ ಗಲಭೆ : ಕುಟ್ಟಪ್ಪ ಕುಟುಂಬಕ್ಕೆ 5 ಲಕ್ಷ ಪರಿಹಾರ
ಬೆಂಗಳೂರು, ನವೆಂಬರ್ 12 : ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟ ವಿಶ್ವ ಹಿಂದೂ ಪರಿಷತ್ ಸಂಘಟನಾ ಕಾರ್ಯದರ್ಶಿ ಕುಟ್ಟಪ್ಪ ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಈ ಪ್ರಕರಣದ ಕುರಿತು ಮೈಸೂರು ಪ್ರಾದೇಶಿಕ ಆಯುಕ್ತರಿಂದ ತನಿಖೆ ನಡೆಸಲಾಗುವುದು. ಕುಟ್ಟಪ್ಪ ಅವರು ಓಡುವಾಗ ಬಿದ್ದು ಮೃತಪಟ್ಟರು ಎಂಬ ಮಾಹಿತಿ ಬಂದಿದೆ. ಆದರೆ, ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ' ಎಂದು ದೂರಿದರು. [ಕೊಡಗು ಜಿಲ್ಲೆಯಾದ್ಯಂತ ಅಘೋಷಿತ ಬಂದ್]

ನ್ಯಾಯಾಂಗ ತನಿಖೆ? : ಮಡಿಕೇರಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸುವ ಸಾಧ್ಯತೆ ಇದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಈ ಕುರಿತು ಚರ್ಚೆ ನಡೆಸಿದ್ದಾರೆ. ಗುರುವಾರ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.[ಕುಟ್ಟಪ್ಪ ಸಾವು: ಆಕಸ್ಮಿಕವೋ, ಪೂರ್ವ ನಿಯೋಜಿತವೋ?]
ಬಂದ್ ಕೈಬಿಡಲು ಮನವಿ : ಬಿಜೆಪಿ ನವೆಂಬರ್ 13ರ ಶುಕ್ರವಾರ ಕರೆ ನೀಡಿರುವ ಮಡಿಕೇರಿ ಬಂದ್ ಕೈಬಿಡುವಂತೆ ಗೃಹ ಸಚಿವ ಜಿ.ಪರಮೇಶ್ವರ ಅವರು ಕರೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಂದ್ ಮಾಡುವುದು ಸರಿಯಲ್ಲ. ಆದ್ದರಿಂದ ಬಂದ್ ಮಾಡದಂತೆ ಮನವಿ ಮಾಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. [ಕೊಡಗಿನಲ್ಲಿ ಬೂದಿಮುಚ್ಚಿದ ಕೆಂಡದಂಥ ವಾತಾವರಣ]












Click it and Unblock the Notifications