Congress Candidate: ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಿದ್ದರಾಮಯ್ಯ
ಮೈಸೂರು, ಅಕ್ಟೋಬರ್ 22: ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ. ಆಡಳಿತ ರೂಢ ಸರ್ಕಾರ ಇರುವಾಗ ಉಪ ಚುನಾವಣೆ ಸೋತಲ್ಲಿ ಅದು ತೀವ್ರ ಮುಖಭಂಗ ಆಗುವ ಹಿನ್ನೆಲೆಯಲ್ಲಿ ಕ್ಷೇತ್ರಗಳನ್ನು ಗೆಲ್ಲಲು ರಣತಂತ್ರವನ್ನು ರೂಪಿಸಲಾಗುತ್ತಿದೆ.
ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಅಳೆದು ತೂಗಿ ಅಭ್ಯರ್ಥಿ ಆಯ್ಕೆಯನ್ನ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇತ್ತ ಬಿಜೆಪಿ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡಿದ್ದು, ಚನ್ನಪಟ್ಟಣ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಇನ್ನೂ ಸಿದ್ದರಾಮಯ್ಯ ಅವರು ಮೂರು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಸಚಿವರುಗಳಿಗೆ ಟಾಸ್ಟ್ ನೀಡಿದ್ದು, ಸಂಡೂರು ಅಭ್ಯರ್ಥಿಯನ್ನ ಮೈಸೂರಿನಲ್ಲಿ ಘೋಷಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಹೇಳಿದರು.
ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ. ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ಪರಿಹಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಚಿವರುಗಳಾದ ಕೆ.ವೆಂಕಟೇಶ್, ರಹೀಂಖಾನ್, ಬೋಸ್ ರಾಜ್, ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ತಿಮ್ಮಯ್ಯ, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications