ಸಿದ್ದರಾಮಯ್ಯ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ದಯವಿಟ್ಟು ಹೇಳುವಿರಾ ? ಎಂದ ಎಚ್.ಡಿ ಕುಮಾರಸ್ವಾಮಿ!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ 11 ಜನ ಮೃತಪಟ್ಟಿರುವುದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದೊಡ್ಡಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ದೇಶದಾದ್ಯಂತ ಕರ್ನಾಟಕದ ಪ್ರಕರಣವು ತೀವ್ರ ಮುಜುಗರವನ್ನು ತಂದೊಡ್ಡಿದೆ. ರಾಜ್ಯ ಸರ್ಕಾರವು ಆರ್‌ಸಿಬಿ ವಿಜಯೋತ್ಸವವನ್ನು ಪ್ರತಿಷ್ಠೆ ಹಾಗೂ ಕ್ರೆಡಿಟ್‌ಗಾಗಿ ಮಾಡಿರುವುದೇ ಇದಕ್ಕೆಲ್ಲ ಕಾರಣ ಎನ್ನುವ ಆರೋಪ ಸರ್ಕಾರದ ಹಂತದಿಂದಲೇ ಕೇಳಿ ಬರುತ್ತಿದೆ. ಅಲ್ಲದೇ ಈ ಸಂಬಂಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗಂಭೀರವಾದ ಪ್ರಶ್ನೆಯನ್ನು ಕೇಳಿದ್ದಾರೆ.

ಹೌದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪ್ರಕರಣವನ್ನು ವಿರೋಧ ಪಕ್ಷಗಳು ಗಂಭೀರವಾಗಿ ಪರಿಗಣಿಸಿವೆ. ಇದರಲ್ಲಿ ವಿರೋಧ ಪಕ್ಷಗಳ ತಪ್ಪೂ ಇದೆ ಎನ್ನುವ ಆರೋಪಗಳ ನಡುವೆಯೂ ರಾಜ್ಯದ ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿವೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

Siddaramaiah Are you Chief Minister of Karnataka or please tell me HD Kumaraswamy said

➡️ ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ!

➡️ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ!!
- ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ 'ಕೈ' ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ ಎಂದು ಸರಣಿ ಪ್ರಶ್ನೆಗಳನ್ನು ಮಾಡಿದ್ದಾರೆ.

ಇನ್ನು ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್, ಕಾರ್ಯಕ್ರಮಕ್ಕೆ ಬನ್ನಿ ಎಂದು ಆಹ್ವಾನ ನೀಡಿದವರು ನರಿಗಳು, ಬಂದವರು ಕುರಿಗಳು ಎಂಬಂತಿದೆ ನಿಮ್ಮ ಲಜ್ಜೆಗೆಟ್ಟ ಸಮರ್ಥನೆ ಎಂದು ಹೇಳಿದೆ.

➡️ ಸಿಎಂ ಸಿದ್ದರಾಮಯ್ಯ ಅವರು - "ಈ ಐತಿಹಾಸಿಕ ಸಂಭ್ರಮದಲ್ಲಿ ನೀವು ಭಾಗಿಯಾಗಿ" ಎಂದು ಆಹ್ವಾನಿಸಿದರು.

➡️ ಡಿಸಿಎಂ ಡಿ.ಕೆ ಶಿವಕುಮಾರ್ ಅವರು - "ಸಂಜೆ 4 ಗಂಟೆಗೆ ಸ್ಡೇಡಿಯಂ ಸ್ಟೇಡಿಯಂಗೆ ಬನ್ನಿ" ಎಂದು ಮಾಧ್ಯಮಗಳ ಮೂಲಕ ಆಹ್ವಾನ ನೀಡಿದರು.

ರಾಜ್ಯ ಸರ್ಕಾರ ಯಾವುದೇ ಒಂದು ಕಾರ್ಯಕ್ರಮ ಆಯೋಜಿಸಬೇಕಾದರೆ ಗುಪ್ತಚರ ಇಲಾಖೆ ಮಾಹಿತಿ ಅನುಸರಿಸಿ ಅಗತ್ಯ ಪೂರ್ವಸಿದ್ಧತೆ, ಪೊಲೀಸ್‌ ಭದ್ರತೆ, ಜನಸಂದಣಿ ನಿರ್ವಹಣೆ ಮಾಡಬೇಕು ಎಂಬ ಕನಿಷ್ಠ ಜ್ಞಾನ ಇಲ್ಲವಾಯ್ತೇ ಎಂದು ಪ್ರಶ್ನೆ ಮಾಡಿದೆ. ಅಲ್ಲದೇ 11 ಮುಗ್ಧ ಆರ್‌ಸಿಬಿ ಅಭಿಮಾನಿಗಳನ್ನು ಬಲಿ ಪಡೆದ ಮೇಲೂ ನಿಮ್ಮ ಸಮರ್ಥನೆ ಅಸಹ್ಯ ಹುಟ್ಟಿಸುತ್ತಿದೆ. ಕರುನಾಡಿನ ಜನರು ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಮಹಾದುರಂತವನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಜೆಡಿಎಸ್ ಪಕ್ಷದ ಅಧಿಕೃತ ಎಕ್ಸ್‌ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+