ನ್ಯಾಯ ಬೇಕು ಮೋದಿ: 12 ಪ್ರಶ್ನೆಗಳನ್ನು ಪ್ರಧಾನಿ ಮುಂದಿಟ್ಟ ಸಿದ್ದರಾಮಯ್ಯ
ಬೆಂಗಳೂರು, ಜನವರಿ19: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ನಾಯಕರು ರಾಜ್ಯಕ್ಕೆ ಹಲವು ಕಾರ್ಯಕ್ರಮಗಳ ಸಲುವಾಗಿ ಆಗಮಿಸುತ್ತಿದ್ದಾರೆ. ಇಂದು ರಾಜ್ಯಕ್ಕೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಲವು ಪ್ರಶ್ನೆಗಳನ್ನ ಮುಂದಿಟ್ಟು ನ್ಯಾಯ ಬೇಕು ಮೋದಿ ಎಂದು ಪೋಸ್ಟರ್ ಗಳನ್ನ ಪ್ರಕಟಿಸುವ ಮೂಲಕ ಹಲವು ಪ್ರಶ್ನೆಗಳನ್ನ ಮುಂದಿಟ್ಟಿದ್ದಾರೆ.
ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ನವರ ಪ್ರಶ್ನೆಗಳು
1. 40% ಕಮಿಷನ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಕಾಮಗಾರಿಯ ಹಣ ನೀಡದೆ ಸತಾಯಿಸಿದ ನಿಮ್ಮ ಬಿಜೆಪಿ ಸರ್ಕಾರದ ಹಣದಾಸೆಗೆ ಗುತ್ತಿಗೆದಾರ ಪ್ರಸಾದ್ ಬಲಿಯಾದ. ಈ ಸಾವಿನ ಸರಣಿಯನ್ನು ಕೊನೆಗಾಣಿಸುವವರು
ಯಾರು ಮೋದಿ ಅವರೇ?
#ನ್ಯಾಯಬೇಕು_ಮೋದಿ @narendramodi @PMOIndia pic.twitter.com/aHht1XXXsT
— Siddaramaiah (@siddaramaiah) January 19, 2023
2. ರಸ್ತೆ ಗುಂಡಿಗಳಿಂದ ಸಂಭವಿಸಿದ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಹತ್ತಾರು ಕುಟುಂಬಗಳ ಮಕ್ಕಳಿಗೆ ಹಾಗೂ ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ನ್ಯಾಯ ಒದಗಿಸಿ.
ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ಪ್ರಧಾನಿಗಳೇ.

3.ಕಾಲುಬಾಯಿರೋಗ ಮತ್ತು ಚರ್ಮಗಂಟು ರೋಗದಿಂದ ಒಂದೂವರೆ ಲಕ್ಷದಷ್ಟು ಜಾನವಾರುಗಳು ಮರಣಹೊಂದಿವೆ. ರೋಗಕ್ಕೆ ಲಸಿಕೆ ಮತ್ತು ಜೀವನಾಧಾರದ ರಾಸುಗಳನ್ನು ಕಳೆದುಕೊಂಡ ರೈತ ಕುಟುಂಬಗಳಿಗೆ ಪರಿಹಾರ ಕೊಡಿಸಿ ಪ್ರಧಾನ ಮಂತ್ರಿಗಳೇ.
4. ಕನ್ನಡ ನಾಡಿನ ಹೆಮ್ಮೆಯ ನಂದಿನಿ ಸಂಸ್ಥೆ ಮೇಲೆ ಗುಜರಾತಿನ ಅಮುಲ್ ಕಣ್ಣು ಬಿದ್ದಿದೆ. ನಮ್ಮ ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ವ್ಯಾಪಾರಿ ಬುದ್ದಿ ಸಾಕು ಮಾಡಿ ಪ್ರಧಾನಿಗಳೇ.
ಕನ್ನಡ ನಾಡಿನ ಹೆಮ್ಮೆಯ ನಂದಿನಿ ಸಂಸ್ಥೆ ಮೇಲೆ ಗುಜರಾತಿನ ಅಮುಲ್ ಕಣ್ಣು ಬಿದ್ದಿದೆ. ನಮ್ಮ ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ವ್ಯಾಪಾರಿ ಬುದ್ದಿ ಸಾಕು ಮಾಡಿ ಪ್ರಧಾನಿಗಳೇ.
5.ಮೆಟ್ರೋ ಪಿಲ್ಲರ್ ಕುಸಿತದಿಂದ ಮೃತಪಟ್ಟ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಇವರ ಎರಡು ವರ್ಷದ ಕಂದಮ್ಮ ವಿಹಾನ್ ಸಾವಿಗೆ ಹೊಣೆ ಯಾರು? ಮುಖ್ಯ ಎಂಜಿನಿಯರ್ ವಿರುದ್ಧ ಕ್ರಮ ಯಾವಾಗ ಪ್ರಧಾನಿಗಳೇ?

6. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಹೊಣೆಗೇಡಿತನದಿಂದ ನಾಡಿಗೆ ಬೆಳಕು ಕೊಟ್ಟ ಲಕ್ಷಾಂತರ ಮಂದಿಯ ಬಾಳು ಕತ್ತಲಾಗಿದೆ.
ಶರಾವತಿ ಸಂತ್ರಸ್ಥ ಕುಟುಂಬಗಳ ಸಮಸ್ಯೆಗೆ ಸಂದಿಸಿ ಪ್ರಧಾನಿಗಳೇ?
7. ಪರೇಶ್ ಮೇಸ್ತಾನ ಸಾವನ್ನೂ ತನ್ನ ಭರ್ಜರಿ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದು ಬಿಜೆಪಿ. ಈಗ ಆತನ ವಯೋವೃದ್ಧ ತಂದೆ-ತಾಯಿ ಕುಟುಂಬಕ್ಕೆ ನ್ಯಾಯ ಬೇಕು.
8. ಸಚಿವರಾಗಿದ್ದ ಈಶ್ವರಪ್ಪ ಅವರಿಗೆ 40% ಕಮಿಷನ್ ನೀಡಲಾಗದೆ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಶರಣಾದರು. ಬದುಕಿದ್ದಾಗಲಂತೂ ನೀವು ಆತನಿಗೆ ನ್ಯಾಯ ಕೊಡಿಸಿಲ್ಲ, ಸತ್ತಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿ ಅವರೇ?
9. ಕೋವಿಡ್ ಸಂದರ್ಭದಲ್ಲಿ ಅಗತ್ಯ ಸಲಕರಣೆ ಪೂರೈಕೆ ಮಾಡಿದ್ದ ಗುತ್ತಿಗೆದಾರ ಬಸವರಾಜ ಅಮರಗೋಳ ಅವರಿಗೆ ರಾಜ್ಯ ಸರ್ಕಾರ ಬಿಲ್ ಹಣ ನೀಡದೆ ಇರುವುದರಿಂದ ಬೇಸತ್ತು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈತನಿಗೆ ನ್ಯಾಯ ಕೊಡಿಸಿ, ಪ್ರಾಣ ಉಳಿಸಬೇಕಾದವರು ನೀವಲ್ಲವೇ ಮೋದಿ ಅವರೇ?

10. ಕೆ.ಆರ್ ಪುರಂನ ಇನ್ಸ್ಪೆಕ್ಟರ್ ನಂದೀಶ್ 80 ಲಕ್ಷ ಲಂಚ ಕೊಟ್ಟು ವರ್ಗಾವಣೆ ಪಡೆದು ಬಂದ ಕಾರಣಕ್ಕೆ ಒತ್ತಡದಿಂದ ಸತ್ತಿದ್ದಾರೆ ಎಂದು ಸ್ವತಃ ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇತರರಿಗೆ ರಕ್ಷಣೆ ನೀಡುವ ಪೊಲೀಸರಿಗೇ ಹೀಗಾದರೆ
ಸಾಮಾನ್ಯರ ಗತಿ ಏನು ಮೋದಿ ಅವರೇ?
11. PSI ನೇಮಕಾತಿ ಹಗರಣದಿಂದ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣವೂ ಸೇರಿ ಮೊನ್ನೆ ನಡೆದ PWD ಸಹಾಯಕ ಎಂಜಿನಿಯರ್ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾದ ಎಲ್ಲಾ ಅರ್ಹರಿಗೆ ನ್ಯಾಯ ಕೊಡಿಸಿ ಮೋದಿಯವರೇ?
12. ಕೊರೊನಾ ಕಾಲದಲ್ಲಿ ಸ್ಯಾನಿಟೈಜರ್, ಮಾಸ್ಕ್ ನಿಂದ ಹಿಡಿದು ವೆಂಟಿಲೇಟರ್ ವರೆಗೆ ಎಲ್ಲದರಲ್ಲೂ ರಾಜ್ಯ ಸರ್ಕಾರ ಲೂಟಿ ಮಾಡಿದ್ದರಿಂದ ಕನಿಷ್ಠ 3,000 ಕೋಟಿ ಅವ್ಯವಹಾರ ನಡೆದಿದೆ. ಕೊರೊನಾದಿಂದ ಹಾದಿಯಲ್ಲಿ ಬೀದಿಯಲ್ಲಿ ಸತ್ತವರ ಆತ್ಮಗಳು ನ್ಯಾಯಕ್ಕಾಗಿ ನಿಮ್ಮ ಹಾದಿಯನ್ನೇ ಕಾಯುತ್ತಿವೆ ಮೋದಿ ಅವರೇ.












Click it and Unblock the Notifications