ಒಕ್ಕೂಟ ವ್ಯವಸ್ಥೆ ಸಂವಿಧಾನದ ಮೂಲಭೂತ ರಚನೆಯ ಭಾಗ: ತಮಿಳುನಾಡು ಸಿಎಂ ಸ್ಟಾಲಿನ್ ಪತ್ರಕ್ಕೆ ಸಿದ್ದರಾಮಯ್ಯ ಉತ್ತರ
ಭಾರತದ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ 'ಒಕ್ಕೂಟ ವ್ಯವಸ್ಥೆ' ಇಂದು ಹೊಸ ಚರ್ಚೆಗೆ ನಾಂದಿ ಹಾಡಿದೆ. ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧಗಳ ಪುನರ್ ವಿಮರ್ಶೆಗಾಗಿ ತಮಿಳುನಾಡು ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿಯ ವರದಿಯ ಹಿನ್ನೆಲೆಯಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆಯುವ ಮೂಲಕ ತಮ್ಮ ಬೆಂಬಲ ಮತ್ತು ಸೈದ್ಧಾಂತಿಕ ಸಹಮತವನ್ನು ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ-ರಾಜ್ಯ ಸಂಬಂಧಗಳ ಕುರಿತು ಬರೆದ ಪತ್ರಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಭಾರತವನ್ನು "ರಾಜ್ಯಗಳ ಒಕ್ಕೂಟ" ಎಂದು ಕರೆದಿದ್ದರು. ಆಡಳಿತಾತ್ಮಕ ದೃಷ್ಟಿಯಿಂದ ಮಾತ್ರವಲ್ಲದೆ, ಅಧಿಕಾರವು ಒಂದೇ ಕಡೆ ಕೇಂದ್ರೀಕೃತವಾಗಬಾರದು ಎಂಬುದು ಸಂವಿಧಾನದ ಆಶಯವಾಗಿತ್ತು. ಆದರೆ, ಇತ್ತೀಚಿನ ದಶಕಗಳಲ್ಲಿ ವ್ಯವಸ್ಥೆಯು ಕೇಂದ್ರೀಕೃತ ಆಡಳಿತದತ್ತ ಸಾಗುತ್ತಿರುವುದು ಆತಂಕಕಾರಿ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸಮವರ್ತಿ ಪಟ್ಟಿ ಮತ್ತು ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ
ಸಂವಿಧಾನದ ಸಮವರ್ತಿ ಪಟ್ಟಿಯಲ್ಲಿರುವ ವಿಷಯಗಳನ್ನು ಕೇಂದ್ರ ಸರ್ಕಾರವು ತನಗೆ ಪೂರಕವಾಗಿ ವ್ಯಾಖ್ಯಾನಿಸುತ್ತಿರುವುದರಿಂದ ಕೇಂದ್ರ-ರಾಜ್ಯಗಳ ಸಮತೋಲನ ತಪ್ಪುತ್ತಿದೆ. ಮುಖ್ಯವಾಗಿ ಕೇಂದ್ರದ ಯೋಜನೆಗಳ ಹೇರಿಕೆ, ರಾಜ್ಯಗಳ ಸ್ಥಳೀಯ ಅಗತ್ಯಗಳನ್ನು ಪರಿಗಣಿಸದೆ ಏಕಪಕ್ಷೀಯವಾಗಿ ಯೋಜನೆಗಳನ್ನು ರೂಪಿಸುವುದು. ಮಸೂದೆಗಳಿಗೆ ಅನುಮೋದನೆ ನೀಡುವ ವಿಚಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪವು ರಾಜ್ಯದ ಆಡಳಿತಾತ್ಮಕ ಹಕ್ಕುಗಳನ್ನು ಕುಂಠಿತಗೊಳಿಸುತ್ತಿದೆ ಎಂದು ಖಂಡಿಸಿದ್ದಾರೆ.
ಹಣಕಾಸು ಹಂಚಿಕೆಯ ವಿಚಾರದಲ್ಲಿ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಲೇಖನದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಪರಿಚ್ಛೇದ 280ರಲ್ಲಿ ಹಣಕಾಸು ಆಯೋಗದ ಶಿಫಾರಸುಗಳು ರಾಜ್ಯಗಳ ಹಿತಾಸಕ್ತಿಯನ್ನು ರಕ್ಷಿಸಬೇಕು. ಜಿಎಸ್‌ಟಿ ಜಾರಿಯ ನಂತರ ರಾಜ್ಯಗಳ ತೆರಿಗೆ ಸಂಗ್ರಹದ ಅಧಿಕಾರ ಕಡಿಮೆಯಾಗಿದ್ದು, ಇದು ದೇಶದ ಸಾರ್ವಭೌಮತೆಗೆ ಮತ್ತು ರಾಜ್ಯಗಳ ಆರ್ಥಿಕ ಶಕ್ತಿಗೆ ಧಕ್ಕೆ ತರುವಂತೆ ಇರಬಾರದು ಎಂದಿದ್ದಾರೆ. ಇದರಿಂದಾಗಿ ಉದ್ದೇಶಿತ ಸಹಕಾರಿ ಒಕ್ಕೂಟ ವ್ಯವಸ್ಥೆಯು ಈಗ ಒತ್ತಾಯಪೂರ್ವಕ ಒಕ್ಕೂಟ ವ್ಯವಸ್ಥೆಯಾಗಿ ಬದಲಾಗುತ್ತಿದೆ. ರಾಜ್ಯಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುವ ನಿರ್ಣಯಗಳನ್ನು ಬಲವಂತವಾಗಿ ಜಾರಿಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ ಪರಿಚ್ಛೇದ 246 ಮತ್ತು 7ನೇ ಶೆಡ್ಯೂಲ್ ಹಾಗೂ 245 ರಿಂದ 254ರ ಪರಿಚ್ಛೇದಗಳ ಮರುಪರಿಶೀಲನೆ ನಡೆಯಬೇಕಾದ ಅಗತ್ಯವಿದೆ ಎಂದಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಬರೆದಿರುವ ಪತ್ರಕ್ಕೆ ನನ್ನ ಪ್ರತಿಕ್ರಿಯೆಯ ಕನ್ನಡ ಸಾರಾಂಶ
— Siddaramaiah (@siddaramaiah) March 3, 2026
ಭಾಗ -2
ಕರ್ನಾಟಕವು ತಮಿಳುನಾಡಿನಂತೆಯೇ ಭಾಷಾ ನೀತಿ, ಶಿಕ್ಷಣ, ಸಾರ್ವಜನಿಕ ಆರೋಗ್ಯ, ಹಣಕಾಸು ಹಂಚಿಕೆ, ಶಾಸಕಾಂಗದ ಸ್ವಾಯತ್ತತೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯಗಳ ಸಾಂವಿಧಾನಿಕ ಪಾತ್ರವನ್ನು ದೃಢವಾಗಿ ಪ್ರತಿಪಾದಿಸುತ್ತಾ ಬಂದಿವೆ. ಇವು… pic.twitter.com/UliABtYGNt
ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿರುವ ಹಲವಾರು ಅಂಶಗಳಿಗೆ ಕರ್ನಾಟಕ ರಾಜ್ಯದ ಸಹಮತ ಕೂಡಾ ಇದೆ. ವಿತ್ತೀಯ ಒಕ್ಕೂಟ ವ್ಯವಸ್ಥೆಯ ಅಧಿಕಾರವನ್ನು ಜವಾಬ್ದಾರಿಯುತವಾಗಿ ಚಲಾಯಿಸಬೇಕೆಂಬುದು ನಮ್ಮ ಅಭಿಪ್ರಾಯವೂ ಆಗಿದೆ. ಸಂವಿದಾನದ ಪರಿಚ್ಚೇದ 280ರ ಅಡಿಯಲ್ಲಿ ಬರುವ ಹಣಕಾಸು ಆಯೋಗದ ಪಾತ್ರ ಮತ್ತು ಪರಿಚ್ಛೇದ 279ಎ ಅಡಿಯಲ್ಲಿ ಬರುವ ಜಿಎಸ್‌ಟಿ ಕಾಯ್ದೆ ದೇಶದ ಸಾರ್ವಭೌಮತೆಗೆ ಭಂಗ ಉಂಟು ಮಾಡುವ ರೀತಿಯಲ್ಲಿ ಕಾರ್ಯನಿರ್ವಹಿಸಬಾರದು. ಸ್ಥಳೀಯಾಡಳಿತ ಎನ್ನುವುದು ನಮ್ಮ ಸಂವಿಧಾನದ ಆಶಯ ಕೂಡಾ ಆಗಿದೆ, ಈ ಆಶಯಕ್ಕೆ ವಿರುದ್ದವಾದ ಅಧಿಕಾರದ ಕೇಂದ್ರಿಕರಣವನ್ನು ಒಪ್ಪಲಾಗದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜ್ಯಗಳ ಒಕ್ಕೂಟ ವ್ಯವಸ್ಥೆಯು ನಮ್ಮ ಸಂವಿಧಾನದ ಮೂಲಭೂತ ರಚನೆಯ ಭಾಗವಾಗಿದೆ ಎನ್ನುವುದನ್ನು ಎಸ್. ಆರ್. ಬೊಮ್ಮಾಯಿ ಮತ್ತು ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ಕೂಡ ಒಪ್ಪಿಕೊಂಡಿದೆ. ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಸ್ಥಿರತೆಯು ಈ ಸಮತೋಲನವನ್ನು ಕಾಪಾಡಿಕೊಳ್ಳುವುದರ ಮೇಲೆ ಅವಲಂಬಿತವಾಗಿದೆ. ಕೇಂದ್ರವು ತನ್ನ ಅಧಿಕಾರವನ್ನು ಮೀರಿದ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಅತಿಯಾದ ಹಸ್ತಕ್ಷೇಪ ಮತ್ತು ಆಡಳಿತ ವ್ಯವಸ್ಥೆ ದುರ್ಬಲಗೊಳ‍್ಳಲು ಕಾರಣವಾಗಿದೆ. ಇದರಿಂದಾಗಿ ರಾಜ್ಯಗಳು ಕೇಂದ್ರ ಸರ್ಕಾರದ ಹೊಸ ನೀತಿ ಮತ್ತು ಕಾರ್ಯಕ್ರಮಗಳ ಪ್ರಯೋಗಶಾಲೆಯಾಗಿದೆ.
ಐತಿಹಾಸಿಕ ಎಸ್.ಆರ್.ಬೊಮ್ಮಾಯಿ ಮತ್ತು ಯೂನಿಯನ್ ಆಫ್ ಇಂಡಿಯಾ ಪ್ರಕರಣವನ್ನು ಉಲ್ಲೇಖಿಸಿರುವ ಸಿದ್ದರಾಮಯ್ಯ ಅವರು, "ಒಕ್ಕೂಟ ವ್ಯವಸ್ಥೆಯು ಸಂವಿಧಾನದ ಮೂಲಭೂತ ರಚನೆ" ಎಂಬುದನ್ನು ಒತ್ತಿಹೇಳಿದ್ದಾರೆ. ರಾಜ್ಯಗಳನ್ನು ಕೇವಲ ಕೇಂದ್ರದ ಪ್ರಯೋಗಶಾಲೆಗಳಂತೆ ಬಳಸಿಕೊಳ್ಳುವುದು ಪ್ರಜಾಪ್ರಭುತ್ವದ ಸ್ಥಿರತೆಗೆ ಅಪಾಯಕಾರಿ ಎಂದು ಅವರು ಎಚ್ಚರಿಸಿದ್ದಾರೆ. ದಕ್ಷಿಣದ ಎರಡು ಪ್ರಮುಖ ರಾಜ್ಯಗಳ ಮುಖ್ಯಮಂತ್ರಿಗಳು ಒಕ್ಕೂಟ ವ್ಯವಸ್ಥೆಯ ಪರವಾಗಿ ದನಿ ಎತ್ತಿರುವುದು ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ರಾಜ್ಯಗಳ ಸ್ವಾಯತ್ತತೆಯನ್ನು ಉಳಿಸಿಕೊಂಡಾಗ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ ಎಂಬ ಸಂದೇಶ ನೀಡಿದ್ದಾರೆ ಸಿದ್ದರಾಮಯ್ಯ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications