ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀವು ಆರ್‌ಎಸ್‌ಎಸ್‌ ನಾಯಕರ ಪಾದಪೂಜೆ ಮಾಡಲೇಬೇಕು: ಬೊಮ್ಮಾಯಿಗೆ ಸಿದ್ದು ತಿರುಗೇಟು

|
Google Oneindia Kannada News

ಬೆಂಗಳೂರು, ಅಕ್ಟೋಬರ್‌ 19: ನೀವು ಸಿಎಂ ಸ್ಥಾನದಲ್ಲಿ ಮುಂದುವರಿಯಬೇಕೆಂದರೆ ಆರ್‌ಎಸ್‌ಎಸ್‌ ನಾಯಕರ ಪಾದಪೂಜೆ ಮಾಡಲೇಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ಬೊಮ್ಮಾಯಿ ವಿರುದ್ಧ ಬುಧವಾರ ಸರಣಿ ಟ್ವೀಟ್‌ ಮಾಡಿರುವ ಅವರು, 'ಕಾಂಗ್ರೆಸ್ ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ, ಸದ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು, ರಾಹುಲ್ ಗಾಂಧಿ ಅವರಲ್ಲ ಎನ್ನುವುದು ನಿಮ್ಮ ನೆನಪಲ್ಲಿ ಇರಲಿ' ಎಂದು ಹೇಳಿದ್ದಾರೆ.

'ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿಯವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ನೀವು ಪ್ರಧಾನಿ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ' ಎಂದು ತಿಳಿಸಿದ್ದಾರೆ.

Siddaramaiah Basavaraj Bommai You should worship the feet of RSS leaders

'ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ ಮುಖ್ಯಮಂತ್ರಿಯವರೇ, ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ' ಎಂದು ಎಚ್ಚರಿಕೆ ನೀಡಿದ್ದಾರೆ.

'ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ ಒತ್ತಾಯವನ್ನು ಪುನರುಚ್ಚರಿಸುತ್ತೇನೆ' ಎಂದು ಟ್ವೀಟ್‌ ಮಾಡಿದ್ದಾರೆ.

'ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ನೀವು ಕಾಣಬಯಸಿದರೆ ನಮ್ಮದೇನೂ ಅಭ್ಯಂತರ ಇಲ್ಲ. ಆದರೆ ನಮ್ಮ ನಾಯಕರು ಜನಮತದ ಬೆಂಬಲದಿಂದಲೇ ಪ್ರಧಾನಿಯಾಗುವವರು. ನಿಮ್ಮ ಹಾಗೆ ಆಪರೇಷನ್ ಕಮಲದ ಮೂಲಕ ಆ ಸ್ಥಾನಕ್ಕೆ ಏರುವವರಲ್ಲ' ಎಂದು ಟೀಕಿಸಿದ್ದಾರೆ.

Siddaramaiah Basavaraj Bommai You should worship the feet of RSS leaders

'ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ. ನಿಮ್ಮ ಧಮ್ -ತಾಖತ್ ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಮತ್ತೆ ನೀವು ಆರ್‌ಎಸ್ಎಸ್ ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು' ಎಂದು ವಾಗ್ದಾಳಿ ನಡೆಸಿದ್ದಾರೆ.

'ಸಾರ್ವಜನಿಕ ಸಭೆಗಳಲ್ಲಿ ವಿರೋಧ ಪಕ್ಷದ ವಿರುದ್ಧ ಅಬ್ಬರಿಸುತ್ತಿರುವ ನಿಮಗೆ, ನೀವು ಎರಡುವರೆ ಸಾವಿರ ಕೋಟಿ ದುಡ್ಡು ಕೊಟ್ಟು ಮುಖ್ಯಮಂತ್ರಿಯಾಗಿದ್ದೀರಿ ಎಂದು ಆರೋಪ ಮಾಡುತ್ತಿರುವ ನಿಮ್ಮದೇ ಪಕ್ಷದ ಒಬ್ಬ ಶಾಸಕನ ವಿರುದ್ಧ ಸೊಲ್ಲೆತ್ತುವ ಧೈರ್ಯ ಇಲ್ಲ. ಇದೆಂತಹ ನಿಮ್ಮ ಹೇಡಿತನ?' ಎಂದು ಪ್ರಶ್ನಿಸಿದ್ದಾರೆ.

'ಕಾಂಗ್ರೆಸ್ ನಾಯಕರ ಬಗ್ಗೆ ರಾಹುಲ್ ಗಾಂಧಿಯವರಿಂದಲೇ ನೀವು ತನಿಖೆ ಮಾಡಿಸುವುದಾದರೆ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ, ಐಟಿಗಳನ್ನು ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿ' ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿರುವುದು ಕಡುಭ್ರಷ್ಟ ಸರ್ಕಾರ: ರಾಹುಲ್‌

ಭಾರತ್‌ ಜೋಡೊ ಯಾತ್ರೆಯಲ್ಲಿ ನಿರತರಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಕರ್ನಾಟಕದಲ್ಲಿರುವುದು ಕಡುಭ್ರಷ್ಟ ಸರ್ಕಾರ. ಇಲ್ಲಿ ಯಾವುದೇ ಕೆಲಸವಾಗಬೇಕು ಎಂದರೆ, 40 ಪರ್ಸೆಂಟ್‌ ಕಮಿಷನ್‌ ಕೊಡಬೇಕು. ಸರ್ಕಾರಿ ಕೆಲಸ ಸಿಗಬೇಕೆಂದರೆ, ಲಂಚವನ್ನು ನೀಡಬೇಕೆಂದು ಹರಿಹಾಯ್ದಿದ್ದರು.

ಭಾರತ್‌ ಜೋಡೊ ಪಾದಯಾತ್ರೆಯು ಪ್ರಸ್ತುತ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯಲ್ಲಿ ಸಾಗುತ್ತಿದೆ. ಕರ್ನಾಟಕ, ತಮಿಳು ನಾಡು ಹಾಗೂ ಕೇರಳದಲ್ಲಿ ಭಾರತ್‌ ಜೋಡೊ ಯಾತ್ರೆ ಅಪಾರ ಜನ ಬೆಂಬಲ ದೊರೆತಿದೆ.

English summary
Siddaramaiah has stung Chief Minister Basavaraj Bommai that if you want to continue as CM, you have to worship the feet of RSS leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X