ಚುನಾವಣಾ ಆಯೋಗವನ್ನು ಮೋದಿ ಕೇಂದ್ರದ ಅಡಿಯಾಳು ಮಾಡಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು, ನವೆಂಬರ್ 08: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
KPCC ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು, ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರದ ದಾಖಲೆಗಳನ್ನು ವಿವರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದರು.

ಬಿಜೆಪಿ ಮತಗಳ್ಳತನದ ಮೂಲಕ ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ತಪಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಮತಗಳ್ಳತನ ಮಾಡುವಲ್ಲೂ ನಿಸ್ಮರು ಅಂತ ಬಿಜೆಪಿಯವರು ಸಾಬೀತು ಮಾಡಿದ್ದಾರೆ ಮತಗಳ್ಳತನ ಮಾಡಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ ಲೋಕಸಭೆ ವಿಧಾನಸಭೆ ಚುನಾವಣೆಯಲ್ಲೂ ಮತಗಳತನ ಮಾಡಿದ್ದಾರೆ ದೇಶದ ಹಲವು ರಾಜ್ಯಗಳಲ್ಲಿ ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದರು.
ಸಂವಿಧಾನಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನ ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು.
ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು. ಇನ್ನೂ ಈ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೂ ಸಚಿವರೂ ಆದ ಸತೀಶ್ ಜಾರಕಿಹೊಳಿ, ಪಕ್ಷದ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಸಲೀಂ ಅಹಮದ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಸೇರಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications