CM Siddaramaiah: ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡೋರು: ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ, ಮೇ 29: ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು. ಉಡುಪಿ ಪ್ರಕರಣದ ಬಗ್ಗೆ ಮಾತನಾಡಿ ಈಗಾಗಲೇ ಎಫ್.ಐ.ಆರ್.ದಾಖಲಾಗಿದ್ದು, ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಶನಿವಾರ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು, ಉಡುಪಿ ಪ್ರಕರಣದ ಬಗ್ಗೆ ನಾನು ಬಗ್ಗೆ ಹೆಚ್ಚು ಮಾತನಾಡಲ್ಲ.
ಪ್ರಕರಣವನ್ನ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

Siddaramaiah: BJP Does Dirty Politics Even at the Cost of Human Lives

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳ ಹೆಚ್ಚಳ ಹಿನ್ನಲೆ , ಪರಿಶೀಲನೆ ನಡೆಸಿದರು. ಈ ವೇಳೆ ವೆಹಿಕಲ್ ಸ್ಪೀಡ್ ಡಿಟೆಕ್ಟರ್ ಕ್ಯಾಮರಾ ಉದ್ಘಾಟಿಸಲಿರುವ ಸಿದ್ದರಾಮಯ್ಯ ಮಾತನಾಡಿ, ಸ್ಪೀಡ್ ಡಿಟೆಕ್ಟರ್ ಇರಲಿಲ್ಲ, ಈ ತಿಂಗಳಿನಿಂದ ಅಪಘಾತಗಳು ಕಡಿಮೆ ಆಗಿವೆ. ಜೂನ್‌ ತಿಂಗಳಿನಲ್ಲಿ ಅಪಘಾತಗಳು ಹೆಚ್ಚಾಗಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ನಮ್ಮ ಅಲೋಕ್‌ ಕುಮಾರ್‌ ಈಗಾಗಲೇ ಎರಡು ಕಡೆ ಮಾಡಿದ್ದಾರೆ. ಈ ಬಗ್ಗೆ ನಮ್ಮ ಅಧಿಕಾರಿಗಳು ಈ ಕುರಿತು ಸಭೆ ನಡೆಸಿದ್ದಾರೆ.

ಈ ಕುರಿತು ನಾನು ಹಾಗೂ ಚೆಲುವರಾಯಸ್ವಾಮಿ ಮಾಡುತ್ತೇವೆ. ಬಾಕಿ ಉಳಿರುವುದನ್ನ ನವೆಂಬರ್‌ ಒಳಗೆ ಕೆಲಸವನ್ನ ಮುಗಿಸುತ್ತೇವೆ. ಈ ರಸ್ತೆಯಲ್ಲಿ ಹಲವು ಕೆಲಸಗಳು ಆಗಬೇಕು ಎಂದು ಸೂಚನೆ ಕೊಟ್ಟಿದ್ದೇವೆ ಎಂದರು.

ಈ ವೇಳೆ ಕಂಟ್ರಾಕ್ಟರ್‌ ಬಿಲ್‌ ಬಂದಿಲ್ಲ ಎಂದು ಸಿದ್ದರಾಮಯ್ಯ ಬಳಿ ಕೇಳಿಕೊಂಡರು, ಇದು ನಾವು ಮಾಡಿದ್ವಾ? ಹಿಂದಿನವರು ಮಾಡಿ ಬಿಟ್ಟು ಹೋಗಿರುವುದು ಇದು,ಕೊಡೋಣ ಎಂದು ಹೇಳಿದರು. ಟೋಲ್‌ ಸಂಗ್ರಹ ನಾವು ಮಾಡುವುದಲ್ಲ, ನ್ಯಾಪನಲ್‌ ಅಥಾರಿಟಿಯವರು ಮಾಡುವುದು ಅವರ ಜೊತೆಗೆ ನಾನು ಮಾತನಾಡುತ್ತೇನೆ. ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+