ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ಸಿದ್ದರಾಮಯ್ಯ

ಬೆಂಗಳೂರು, ಮೇ 08: ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು? ಎಂದು ಪ್ರಶ್ನಿಸಿದ್ದಾರೆ.

Siddaramaiah BJP Leaders Why Do You Give Us A Hammer And Serve Again And Again

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು ಎಂದು ಹೇಳಿದರು.

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ ಬಿಜೆಪಿ ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಸುಳ್ಳು ಆರೋಪದ ಹೇಳಿಕೆಯನ್ನು ಅಳಿಸಿಹಾಕಿದೆ.ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಕಾಂಗ್ರೆಸ್ ಸರ್ಕಾರ ಮುಸ್ಲಿಮ್ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿ ಹಿಂದೂಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿದೆ ಎಂಬ ಸುಳ್ಳು ಆರೋಪವನ್ನು ರಾಜ್ಯ ಬಿಜೆಪಿ ಮಾಡಿತ್ತು.

ಈ ಬ್ರಹ್ಮರಥೋತ್ಸವ ಸಮಿತಿಗೆ ಬಿಜೆಪಿ ಸರ್ಕಾರದ ಕಾಲದಲ್ಲಿಯೂ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಲಾಗಿತ್ತು ಎಂಬ ಸತ್ಯ ಸಂಗತಿಯನ್ನು ನಾನು ದಾಖಲೆ ಸಮೇತ ಮುಂದಿಟ್ಟದ್ದು ಮಾತ್ರವಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿನ ತನ್ನ ಹೇಳಿಕೆಯನ್ನು ಬಿಜೆಪಿ ಅಳಿಸಿಹಾಕಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದೆ. ಬಣ್ಣ ಬಯಲಾದ ಕೂಡಲೇ ಎಚ್ಚೆತ್ತುಗೊಂಡ ಲಜ್ಜೆಗೆಟ್ಟ ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಹೇಳಿಕೆಯನ್ನು ಅಳಿಸಿಹಾಕಿದೆ. ಈ ಬಗ್ಗೆ ಇನ್ನೂ ರಾಜ್ಯದ ಜನರ ಕ್ಷಮೆ ಕೇಳಿಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+