ಕರ್ನಾಟಕದ ಈ ಜಿಲ್ಲೆಗೆ ಬಂಪರ್: 87 ಕಾಮಗಾರಿಗಳ ಶಂಕುಸ್ಥಾಪನೆ, ಯೋಜನೆಗಳಿಗೆ ಚಾಲನೆ: ಸಿದ್ದರಾಮಯ್ಯ
ಕಲಬುರಗಿ: ಜಿಲ್ಲೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೊಸದಾಗಿ ಯಡ್ರಾಮಿ ಅನ್ನು ಸರ್ಕಾರ ಹೊಸ ತಾಲೂಕಾಗಿ ಘೋಷಿಸಿದೆ. ಇದರ ಬೆನ್ನಲ್ಲೆ ಜೇವರ್ಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನರಿಗೆ ಭರ್ಜರಿ ಉಡುಗೊರೆ ನೀಡಿರುವ ಸರ್ಕಾರವು, ಬಹುಕೋಟಿ ವೆಚ್ಚದ ಬರೋಬ್ಬರಿ 87 ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕೆಲವು ಕಾಮಗಾರಿಗಳನ್ನು ಉದ್ಘಾಟಿಸಿದೆ. ಈ ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೃಹತ್ ಅಭಿವೃದ್ಧಿಗೆ ಮುಂದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ಯಡ್ರಾಮಿ ತಾಲ್ಲೂಕಿನಲ್ಲಿ, ಜೇವರ್ಗಿ ಮತಕ್ಷೇತ್ರದಲ್ಲಿ 867.49 ಕೋಟಿ ರೂಪಾಯಿ ವೆಚ್ಚದ 87 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. 38.29 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮಾಡಿದರು. ಒಟ್ಟಾರೆ 906 ಕೋಟಿ ರೂ.ಗಳ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದೇ ವೇಳೆ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಅವರು, ವಿರೋಧಪಕ್ಷದವರು ರಾಜಕಾರಣಕ್ಕಾಗಿ ಸುಳ್ಳನ್ನೇ ಅವಲಂಬಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂದು ಎಲ್ಲೆಡೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ದಿವಾಳಿಯಾಗಿದ್ದರೆ ಜೇವರ್ಗಿ ಮತಕ್ಷೇತ್ರ ಒಂದರಲ್ಲಿ ₹906 ಕೋಟಿ ವೆಚ್ಚ ಮಾಡಲಾಗುತ್ತಿರಲಿಲ್ಲ.
ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷದ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ವೆಚ್ಚ ಮಾಡಲಾಗಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಯಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಾವು ಸರ್ಕಾರ ನುಡಿದಂತೆ ನಡೆಯುವವರು ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಈ ಚುನಾವಣೆಯಲ್ಲಿ ನಮ್ಮ ಪಕ್ಷದ ವತಿಯಿಂದ 592 ಭರವಸೆಗಳನ್ನು ನೀಡಲಾಗಿತ್ತು. 243 ಭರವಸೆಗಳನ್ನು ಈಡೇರಿಸಲಾಗಿದೆ. ಉಳಿದ ಅವಧಿಯಲ್ಲಿ ಮಿಕ್ಕ ಭರವಸೆಗಳನ್ನು ಈಡೇರಿಸಲಾಗುವುದು. ಬಿಜೆಪಿ 2018 ರಿಂದ ಅಧಿಕಾರದಲ್ಲಿದ್ದು, ಅವರು ನೀಡಿದ್ದ 600 ಭರವಸೆಗಳಲ್ಲಿ 10ರಷ್ಟು ಭರವಸೆಗಳನ್ನು ಕೂಡ ಈಡೇರಿಸಿರಲಿಲ್ಲ.
ಕರ್ನಾಟಕದಲ್ಲಿ 63 ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಗಿತ್ತು. ಬಿಜೆಪಿಯವರು 2018 ರಿಂದ 2023 ರವರೆಗೆ ನೂತನ ತಾಲ್ಲೂಕುಗಳಲ್ಲಿ ಕೇವಲ 14 ಕಡೆ ಮಾತ್ರ ತಾಲ್ಲೂಕು ಆಡಳಿತ ಕಚೇರಿ ನಿರ್ಮಾಣ ಮಾಡಿದ್ದರು. 2023ರಲ್ಲಿ ನಾವು ಅಧಿಕಾರಕ್ಕೆ ಬಂದ ನಂತರ 49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧಗಳನ್ನು ಮಂಜೂರು ಮಾಡಲಾಗಿದ್ದು, ನಿರ್ಮಾಣ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಬೆಳೆಹಾನಿ ಪರಿಹಾರ ವಿತರಣೆ ಲೆಕ್ಕ ಕೊಟ್ಟ ಸಿಎಂ
ನಮ್ಮ ಸರ್ಕಾರದಲ್ಲಿ 17 ತಾಲ್ಲೂಕುಗಳು ಮಂಜೂರಾಗಿವೆ. 97 ನಾಡ ಕಚೇರಿಗಳು ಮಂಜೂರಾಗಿವೆ. ಕಲ್ಯಾಣ ಕರ್ನಾಟಕದಲ್ಲಿ 39 ಕಚೇರಿಗಳನ್ನು ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ 53 ನಿರ್ಮಾಣವಾಗಿವೆ. ಕಲ್ಯಾಣ ಕರ್ನಾಟಕದ 25 ತಾಲ್ಲೂಕುಗಳಲ್ಲಿ ನಾಡ ಕಚೇರಿಗಳ ಸ್ಥಾಫನೆಗೆ ನಮ್ಮ ಸರ್ಕಾರ ಮುಂದಾಗಿದೆ. ಇನ್ನೂ ಈ ಬಾರಿ ಮಳೆ ಹೆಚ್ಚಾಗಿ ಬೆಳೆ ಹಾನಿಯಾಗಿರುವುದರಿಂದ ವೈಮಾನಿಕ ಸಮೀಕ್ಷೆ ಕೈಗೊಂಡು ಪರಿಶೀಲಿಸಿ ಪರಿಹಾರ ಕೊಡಲು ನಿರ್ಧರಿಸಿ ಎಸ್ ಡಿ.ಆರ್.ಎಫ್ ನಿಂದ 1,218 ಕೋಟಿ ಜೊತೆಗೆ ಸರ್ಕಾರದ ವತಿಯಿಂದ ಒಟ್ಟು 1,031ಕೋಟಿ ಹೆಚ್ಚುವರಿಯಾಗಿ ಒದಗಿಸಲಾಗಿದೆ. ರಾಜ್ಯದಲ್ಲಿ ಒಟ್ಟು 14.21 ಲಕ್ಷ ರೈತರ ಬೆಳೆ ಹಾನಿಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ 7,21,786 ರೈತರ ಬೆಳೆ ಹಾನಿಗೊಳಗಾಗಿದೆ. 1,072 ಕೋಟಿ ಬೆಳೆ ಹಾನಿಗೆ ಪರಿಹಾರ ನೀಡಿದ್ದೇವೆ ಎಂದು ತಿಳಿಸಿದರು.
ಕಲಬುರಗಿ ಜಿಲ್ಲೆಯಲ್ಲಿ 3,23,318 ರೈತರ ಬೆಳೆ ಹಾನಿಯಾಗಿದ್ದು, ₹498 ಕೋಟಿ ಪರಿಹಾರ ನೀಡಲಾಗಿದೆ. ರೈತರ ಖಾತೆಗಳಿಗೆ ಈ ಹಣವನ್ನು ತಲುಪಿಸುವ ಕೆಲಸ ಮಾಡಿದ್ದೇವೆ. ರೈತರ ಸಹಾಯಕ್ಕೆ ಸರ್ಕಾರ ಸದಾ ಮುಂದಾಗಿದೆ. ನೆಟೆ ರೋಗಕ್ಕೆ ತುತ್ತಾದ ತೊಗರಿ ಬೆಳೆಗೆ 233 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ಕಬ್ಬಿನ ಬೆಲೆ ಕಡಿಮೆ ಎಂದು ರೈತರು ಪ್ರತಿಭಟಿಸಿದಾಗ ಅವರ ನೆರವಿಗೆ ಸರ್ಕಾರ ಧಾವಿಸಿ ಸರ್ಕಾರದಿಂದ ₹50 ಹಾಗೂ ಕಾರ್ಖಾನೆಯಿಂದ 50 ರೂ. ನಿಗದಿ ಮಾಡಿ 300 ಕೋಟಿಗಳನ್ನು ಸರ್ಕಾರದಿಂದ ಕಬ್ಬಿನ ಬೆಳೆಗಾರರಿಗೆ ನೀಡಲಾಗಿದೆ ಎಂದು ಬೆಳೆ ಪರಿಹಾರ ವಿತರಣೆ ಲೆಕ್ಕ ಕೊಟ್ಟರು.
ಬಿಜೆಪಿಯ ಗೃಹ ಸಚಿವ ಹಾಗೂ ಉಪ ಪ್ರಧಾನಿಯಾಗಿದ್ದ ಎಲ್ ಕೆ.ಅಡ್ವಾಣಿ ಯವರು 371ಜೆ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇದನ್ನು ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಹೋರಾಟದಿಂದ ಇದು ಸಾಧ್ಯವಾಯಿತು. ಇದರಿಂದಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಯಾಯಿತು. ₹13,000 ಕೋಟಿ ಗಳನ್ನು ಮೂರು ವರ್ಷಗಳಲ್ಲಿ ಒದಗಿಸಲಾಗಿದ್ದು, ಈ ವರ್ಷದಲ್ಲಿ 3,000 ಕೋಟಿ ಒದಗಿಸಲಾಗಿದೆ.
ರಾಜ್ಯದಲ್ಲಿ 900 ಕೆಪಿಎಸ್ ಮಂಜೂರು
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅನುದಾನವನ್ನು ಪೂರ್ಣವಾಗಿ ವೆಚ್ಚ ಮಾಡಬೇಕು. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಅಜಯ್ ಸಿಂಗ್ ಅವರಿಗೆ ತಿಳಿಸಲಾಗಿತ್ತು. ಅದರಂತೆ 300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ. ರಾಜ್ಯದಲ್ಲಿ ಒಟ್ಟು 900 ರಾಜ್ಯಕ್ಕೆ ಕೆಪಿಎಸ್ ಮಂಜೂರಾಗಿದೆ. ಅಸಮಾನತೆ ಹೋಗಲಾಡಿಸಲು ನಂಜುಂಡಪ್ಪ ಅವರ ವರದಿಯನ್ನು ಆಧರಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಗಳ ಬಗ್ಗೆ ವರದಿ ಸಲ್ಲಿಸಲು ಗೋವಿಂದ ರಾವ್ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲಿ ವರದಿಯ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದು ತಿಳಿಸಿದರು.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ











Click it and Unblock the Notifications