Government employee; ಸಿದ್ದರಾಮಯ್ಯ ಬಜೆಟ್‌, ನೌಕರರ ಬೇಡಿಕೆಗಳು

ಬೆಂಗಳೂರು, ಜೂನ್ 30: ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದು ಅವರು ಮಂಡನೆ ಮಾಡಲಿರುವ 14ನೇ ಬಜೆಟ್ ಆಗಿದೆ. ಈ ಮೂಲಕ ಅತಿ ಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆಯನ್ನು ಸಹ ಅವರು ಪಡೆಯಲಿದ್ದಾರೆ. ಕಾಂಗ್ರೆಸ್‌ ಘೋಷಣೆ ಮಾಡಿರುವ 5 ಗ್ಯಾರಂಟಿಗಳ ಹಿನ್ನಲೆಯಲ್ಲಿ ಬಜೆಟ್ ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿಗಳನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಅಭಿನಂದನೆ ಸಲ್ಲಿಕೆ ಮಾಡಿದರು. ಬಜೆಟ್ ಮಂಡನೆ ಮಾಡಲಿರುವ ಹಿನ್ನಲೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಮನವಿಯನ್ನು ಸಲ್ಲಿಕೆ ಮಾಡಿದರು.

Siddaramaiah Budget 2023-24 Government Employees Expectations

ರಾಜ್ಯ ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲು ಬಜೆಟ್‌ನಲ್ಲಿ ಅನುದಾನ ಕಾಯ್ದಿರಿಸುವುದು. OPS ಯೋಜನೆಯನ್ನು ಜಾರಿಗೊಳಿಸುವುದು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಮನವಿಯನ್ನು ಸಲ್ಲಿಸಿದರು.

ಅಲ್ಲದೇ ಸರ್ಕಾರಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ 16ಎ ನಿಯಮಗಳಿಗೆ ತಿದ್ದುಪಡಿ ಮಾಡಿ ವರ್ಗಾವಣೆಗೆ ಅವಕಾಶ ಕಲ್ಪಿಸುವ ಕುರಿತು ಮನವಿ ಮಾಡಿದರು. ಸಂಘದ ಬೇಡಿಕೆಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

7ನೇ ವೇತನ ಆಯೋಗ; ಈ ಹಿಂದೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿದೆ.

ರಾಜ್ಯದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ದಿನಾಂಕ 19/5/2023ರಿಂದ ಜಾರಿಗೆ ಬರುವಂತೆ 6 ತಿಂಗಳ ಕಾಲ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ 7ನೇ ರಾಜ್ಯ ವೇತನ ಆಯೋಗಕ್ಕೆ ವಹಿಸಲಾಗಿರುವ ಪರಿಶೀಲನಾರ್ಹ ಅಂಶಗಳ ಕುರಿತು ಸಾರ್ವಜನಿಕರು, ಸೇವಾ ಸಂಘಗಳು ಹಾಗೂ ಸರ್ಕಾರಿ ನೌಕರರು, ಸಂಘ ಸಂಸ್ಥೆಗಳಿಂದ ಮುಕ್ತ ಸಲಹೆ, ಅನಿಸಿಕೆ ಅಲ್ಲದೇ ಇಲಾಖೆಗಳಿಂದ ಮಾಹಿತಿ ಹಾಗೂ ಮುಕ್ತ ಸಲಹೆ ಪಡೆಯುವ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವಿವಿಧ ಪ್ರಶ್ನಾವಳಿಗಳನ್ನು ರಚಿಸಿ ಕರ್ನಾಟಕ ರಾಜ್ಯಪತ್ರದ ಮೂಲಕ ದಿನಾಂಕ 17/01/2023ರಂದು ಪ್ರಕಟಿಸಿರುತ್ತದೆ. ಇದಕ್ಕೆ ಈಗಾಗಲೇ ರಾಜ್ಯ ಸರ್ಕಾರಿ ನೌಕರರ ಸಂಘ ಉತ್ತರವನ್ನು ಸಹ ನೀಡಿದೆ.

7ನೇ ರಾಜ್ಯ ವೇತನ ಆಯೋಗ ಈ ವರ್ಷದ ಮಾರ್ಚ್‌ನಲ್ಲಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮಾರ್ಚ್‌ 29ರಂದು ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಗೊಂಡು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿತು.

ಸರ್ಕಾರಿ ನೌಕರರು 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 1ರಂದು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಆಗ ಅಂದಿನ ಮುಖ್ಯಮಂತ್ರಿ, ಹಣಕಾಸು ಸಚಿವರೂ ಆಗಿದ್ದ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನವನ್ನು ಘೋಷಣೆ ಮಾಡಿದ್ದರು.

ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಹಳೆ ಪಿಂಚಣಿ ಯೋಜನೆ (ಒಪಿಎಸ್‌) ಜಾರಿ ಮಾಡಬೇಕು ಎನ್ನುವುದು ಆಗಿದೆ. ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಈ ಕುರಿತು ಸರ್ಕಾರಿ ನೌಕರರಿಗೆ ಭರವಸೆ ನೀಡಿದೆ. ಆದ್ದರಿಂದ ಬಜೆಟ್‌ನಲ್ಲಿ ಈ ಕುರಿತು ಘೋಷಣೆಯಾಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+