Cabinet Reshuffle: 10 ರಿಂದ 15 ಸಚಿವರು ಬದಲಾವಣೆ : ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು, ಜೂನ್‌ 10: 2023 ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳಿಂದ ಕಾಂಗ್ರೆಸ್‌ ಹೈಕಮಾಂಡ್‌ ರೋಸಿ ಹೋಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಬರೋಬ್ಬರಿ ಎರಡು ವರ್ಷ ಪೂರೈಸಿದ ಹಿನ್ನೆಲೆ ಕೈ ಪಾಳಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಮೂಲಗಳು ತಿಳಿಸಿದ್ದವು. ಇದೀಗ ಹೈಕಮಾಂಡ್‌ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಜೊತೆಗೆ ಸುದೀರ್ಘವಾಗಿ ಚರ್ಚೆ ನಡೆಸಿರುವುದು ಹಲವು ಅನುಮಾನಗಳು ಹುಟ್ಟಿಕೊಳ್ಳುವಂತೆ ಮಾಡಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಇದೀಗ ಸಂಪುಟ ಸರ್ಜರಿಗೆ ಕೈ ಹಾಕಿದೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಬರೋಬ್ಬರಿ 15 ಸಚಿವರಿಗೆ ಸಂಪುಟದಿಂದ ಕಿತ್ತುಹಾಕಲು ನಿರ್ಧರಿಸಿದೆ ಎನ್ನಲಾಗಿದೆ. ಅಲ್ಲದೇ ಸಿದ್ದರಾಮಯ್ಯ ಸಂಪುಟದಲ್ಲಿ ಖಾತೆ ವಹಿಸಿಕೊಂಡ ದಿನದಿಂದ ಯಾರು? ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಯಾರು ಕೆಲಸವನ್ನು ಸರಿಯಾಗಿ ನಿಭಾಯಿಸಿಲ್ಲ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲ ಎಂಬಂತೆ ಇರುವ ಸಚಿವರನ್ನು ಸಂಪುಟದಿಂದ ತೆಗೆಯಲು ಹೈಕಮಾಂಡ್‌ ನಿರ್ಧರಿಸಿದೆ ಎನ್ನಲಾಗಿದೆ. ಈ ನಡುವೆ ಹಿರಿಯ ಸಚಿವರ ಸ್ಪೋಟಕ ಹೇಳಿಕೆಯಿಂದ ಹಲವು ಮಂತ್ರಿಗಳ ಎದೆ ಬಡಿತ ಹೆಚ್ಚಾಗುವಂತೆ ಮಾಡಿದೆ.

Siddaramaiah Cabinet Reshuffle 10 To 15 Ministers May Change

ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಿದ್ದು, ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು, ಹಲವು ಖಾತೆ ಬದಲಾವಣೆಯಾಗುವ ನಿರೀಕ್ಷೆಯಿದೆ. ಇದೇ ವಿಚಾರವಾಗಿ 10 ರಿಂದ 15 ಸಚಿವರು ಬದಲಾವಣೆ ಆದರೂ ಆಗಬಹುದು ಎಂದು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಯಾಕೆ ಕರೆದಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ. ಆದರೆ 10ರಿಂದ 15 ಜನರ ಬದಲಾವಣೆಯಾದರೂ ಆಗಬಹುದು. ಜನರ ತೀರ್ಮಾನದಂತೆ ಸಚಿವ ಸಂಪುಟ ವಿಸ್ತರಣೆ ಆಗಲ್ಲ ಎಲ್ಲವನ್ನು ಪಕ್ಷದ ಹೈಕಮಾಂಡ ತೀರ್ಮಾನ ಮಾಡುತ್ತದೆ ಎಂದು ಸ್ಟೋಟಕ ಹೇಳಿಕೆ ನೀಡುವ ಮೂಲಕ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆಯಾಗುವ ಬಗ್ಗೆ ಸುಳಿವು ನೀಡಿದ್ದಾರೆ.

ಇನ್ನೂ ಸಚಿವ ಸ್ಥಾನ ನೀಡುವುದೇ ಆದರೆ 34 ಕ್ಕಿಂತ ಹೆಚ್ಚಿನ ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗಲ್ಲ. ಸಚಿವ ಸ್ಥಾನ ಯಾರಿಗೆ ನೀಡಬೇಕು ಅನ್ನೋದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸುತ್ತಾರೆ. ಸಚಿವ ಸಂಪುಟ ಪುನರ್ ರಚನೆಯಾದರೆ ಸಚಿವರ ಬದಲಾವಣೆ ಆಗುತ್ತದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿಕೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+