ಕಾಂಗ್ರೆಸ್‌ ಸಚಿವರಿಗೆ ಭೋಜನಕೂಟ ಆಯೋಜಿಸಿದ ಸಿದ್ದರಾಮಯ್ಯ

Recommended Video

      ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಡಿನ್ನರ್ ಪಾಲಿಟಿಕ್ಸ್ ಮತ್ತೆ ಶುರು | Oneindia Kannada

      ಬೆಂಗಳೂರು, ಆಗಸ್ಟ್ 01 : ಕರ್ನಾಟಕದಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್ ಆರಂಭವಾಗಿದೆ?. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಚಿವರಿಗೆ ಮಾತ್ರ ಭೋಜನಕೂಟವನ್ನು ಆಯೋಜನೆ ಮಾಡಿದ್ದಾರೆ.

      ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ಸಚಿವರಿಗೆ ಭೋಜನಕೂಟ ಏರ್ಪಡಿಸಿದ್ದಾರೆ. ಬುಧವಾರ ರಾತ್ರಿ ಕಾವೇರಿ ನಿವಾಸದಲ್ಲಿ ಭೋಜನಕೂಟ ಆಯೋಜನೆ ಮಾಡಲಾಗಿದೆ.

      ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕದ ಬಳಿಕ ಸಿದ್ದರಾಮಯ್ಯ ಅವರು ಸಚಿವರಿಗೆ ಭೋಜನ ಕೂಟ ಆಯೋಜನೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

      Siddaramaiah calls dinner party for Congress ministers

      ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್‌, ಜಮೀರ್ ಅಹಮದ್ ಖಾನ್, ರಮೇಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ 14 ಸಚಿವರು ಇದ್ದಾರೆ.

      ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ನ ಹಲವು ಸಚಿವರು ಇದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ಸಚಿವರನ್ನು ಮಾತ್ರ ಭೋಜನಕೂಟಕ್ಕೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಯಾವ-ಯಾವ ಸಚಿವರು ಪಾಲ್ಗೊಳ್ಳಲಿದ್ದಾರೆ? ಎಂದು ಕಾದು ನೋಡಬೇಕಿದೆ.

      ಈ ಹಿಂದೆ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಕಾಂಗ್ರೆಸ್-ಜೆಡಿಎಸ್‌ನ ಎಲ್ಲಾ ಶಾಸಕರಿಗೆ ಭೋಜನಕೂಟ ಏರ್ಪಡಿಸಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+