ಬಿಎಸ್‌ವೈ 'ರಾಜಾಹುಲಿ', ನಾನು 'ಟಗರು' ಎಂಬುದನ್ನು ಅವಮಾನ ಎಂದುಕೊಳ್ಳಬಹುದೇ?: ಸಿದ್ದರಾಮಯ್ಯ

ಬೆಂಗಳೂರು, ಜನವರಿ 05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕುರಿತು ನಾಯಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಕೇಳಿ ಬಂದ ಬೆನ್ನಲ್ಲೆ ಎಚ್ಚೆತ್ತ ಸಿದ್ದರಾಮಯ್ಯನವರು ತಮ್ಮ ಹೇಳಿಕೆ ಬಗ್ಗೆ ಗುರುವಾರ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯನವರು ತಮ್ಮ ಹೇಳಿಕೆ ಸಮರ್ಥಿಸಿಕೊಂಡು ಗುರುವಾರ ಸರಣಿ ಟ್ವಿಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ. ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡರೇ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೇನೆ. ಇದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಪುಕ್ಕಲು ಸ್ವಭಾವದವರು ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು. ಬೊಮ್ಮಾಯಿ ಅವರನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತವಾಗಿಯೂ ಇರಲಿಲ್ಲ.

ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ ಪಕ್ಷಿಯೂ ಕೀಳೂ ಅಲ್ಲ, ಮೇಲೂ ಅಲ್ಲ ಎಂದರು.

ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಕರ್ನಾಟಕದ ಬಿಜೆಪಿ ನಾಯಕರು ಬಿ.ಎಸ್‌. ಯಡಿಯೂರಪ್ಪ ಅವರನ್ನು "ರಾಜಾ ಹುಲಿ" ಎಂದು ಬಣ್ಣಿಸುತ್ತಾರೆ. ಇದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲವಾ ಎಂದು ಪ್ರಶ್ನಿಸಿದರು.

ನಾನು ಯಾರಿಗೆ ಗುಮ್ಮಿದ್ದೇನೆ?: ಸಿದ್ದು

ನಾನು ಯಾರಿಗೆ ಗುಮ್ಮಿದ್ದೇನೆ?: ಸಿದ್ದು

ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು 'ಟಗರು' 'ಟಗರು' ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನನಗೂ ಅವಮಾನ ಮಾಡಿದ್ದಾರೆ ಎಂದು ಕೋಪ ಮಾಡಿಕೊಳ್ಳಬಹುದಲ್ಲಾ. ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ "ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ?" ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ನಾಯಿಮರಿ ಪುಕ್ಕಲು ಸ್ವಭಾವದ್ದು

ನಾಯಿಮರಿ ಪುಕ್ಕಲು ಸ್ವಭಾವದ್ದು

ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿ ಬಿಎಸ್‌ ಬಸವರಾಜ ಬೊಮ್ಮಾಯಿ,

ಅವರನ್ನು ಹುಲಿ ಸಿಂಹಕ್ಕೆ ಹೋಲಿಸಲು ಆಗುತ್ತದೆಯೇ?. ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲವೇ.

ಸಿಎಂ ಬೇಸರ ಮಾಡಿಕೊಂಡಿರುವುದಿಲ್ಲ: ಸಿದ್ದು

ಸಿಎಂ ಬೇಸರ ಮಾಡಿಕೊಂಡಿರುವುದಿಲ್ಲ: ಸಿದ್ದು

ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜಾಗರೂಕರಾಗಿರುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಕೇಂದ್ರದೆದುರು ಸುಮ್ಮನಿದ್ದರೆ ರಾಜ್ಯಕ್ಕೆ ಅನ್ಯಾಯ

ಕೇಂದ್ರದೆದುರು ಸುಮ್ಮನಿದ್ದರೆ ರಾಜ್ಯಕ್ಕೆ ಅನ್ಯಾಯ

ನಮಗೆ ನಾಡಿನ ಹಿತ ಮುಖ್ಯ. 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ವಿಶೇಷ ಅನುದಾನವನ್ನು ನೀಡಲು ವಿತ್ತ ಸಚವಿ ನಿರ್ಮಲಾ ಸೀತಾರಾಮ್ನ ಅವರು ನಿರಾಕರಿಸಿದರು. ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬಸವರಾಜ ಬೊಮ್ಮಾಯಿ ಅವರಿಂದ ಸಾಧ್ಯವಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ?.

ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣ ಪ್ರಮಾಣದ ಜಿಎಸ್‌ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿಗಳ ಸ್ಥಾನದಲ್ಲಿರುವವರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ದರೆ ನಾಡಿಗೆ ಅನ್ಯಾಯವಾಗಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+