ಹೊಸ ಸಿಎಂ ಅಭಿನಂದಿಸಿ ಸವಾಲುಗಳನ್ನು ತಿಳಿಸಿದ ಸಿದ್ದರಾಮಯ್ಯ!
ಬೆಂಗಳೂರು, ಜುಲೈ 28; ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸಮಾರಂಭಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗೈರಾಗಿದ್ದರು. ಮೈಸೂರಿನಲ್ಲಿರುವ ಅವರು ಹೊಸ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು' ಎಂದು ಹೇಳಿದ್ದಾರೆ.
'ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ' ಎಂದು ತಿಳಿಸಿದ್ದಾರೆ.
'ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.

ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ
'ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ ಯಡಿಯೂರಪ್ಪ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಬರ ಪರಿಹಾರ, ಜಿಎಸ್‌ಟಿ ಪಾಲು
'ಬರಪರಿಹಾರ, ಜಿಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು ಈ ಎಲ್ಲ ವಿಚಾರಗಳಲ್ಲಿ ಬಿಜೆಪಿ ಸರ್ಕಾರ ಕರ್ನಾಟಕವನ್ನು ಮಲತಾಯಿ ಧೋರಣೆಯಲ್ಲಿ ಕಂಡಿದೆ' ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಚರ್ಚೆ, ಸಂವಾದಗಳು ನಿಂತಿವೆ
'ರಾಜ್ಯಕ್ಕೆ ಅನ್ಯಾಯವಾದಾಗ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪರಂಪರೆ ನಮ್ಮಲ್ಲಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಮುಕ್ತ ಚರ್ಚೆ - ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು' ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಹೇಳಿದ್ದಾರೆ.
Recommended Video
|
ವಿಷಾದದಿಂದ ಹೇಳಬೇಕಾಗಿದೆ
'ಸಾರ್ವಜನಿಕ ಮಹತ್ವದ ಹತ್ತಾರು ಪತ್ರಗಳನ್ನು ಬರೆದರೂ ಪ್ರತಿಕ್ರಿಯಿಸುವ ಸೌಜನ್ಯವನ್ನೂ ಹಿಂದಿನ ಮುಖ್ಯಮಂತ್ರಿಗಳು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications