ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ಸಿಎಂ ಅಭಿನಂದಿಸಿ ಸವಾಲುಗಳನ್ನು ತಿಳಿಸಿದ ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಜುಲೈ 28; ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸಮಾರಂಭಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗೈರಾಗಿದ್ದರು. ಮೈಸೂರಿನಲ್ಲಿರುವ ಅವರು ಹೊಸ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು' ಎಂದು ಹೇಳಿದ್ದಾರೆ.

ಹಿಂದಿನ ನೆನಪು; ಬಸವರಾಜ ಬೊಮ್ಮಾಯಿ ಬಿಜೆಪಿ ಸೇರಿದ್ದು ಹೇಗೆ?ಹಿಂದಿನ ನೆನಪು; ಬಸವರಾಜ ಬೊಮ್ಮಾಯಿ ಬಿಜೆಪಿ ಸೇರಿದ್ದು ಹೇಗೆ?

'ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ' ಎಂದು ತಿಳಿಸಿದ್ದಾರೆ.

 ಯಡಿಯೂರಪ್ಪ ಜತೆಗೆ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಬೇಕು: ಸಿದ್ದರಾಮಯ್ಯ ಯಡಿಯೂರಪ್ಪ ಜತೆಗೆ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಬೇಕು: ಸಿದ್ದರಾಮಯ್ಯ

'ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.

ಒಟ್ಟಿಗೆ ರಾಹುಲ್ ಭೇಟಿಯಾದ ಡಿಕೆಶಿ, ಸಿದ್ದರಾಮಯ್ಯ! ಒಟ್ಟಿಗೆ ರಾಹುಲ್ ಭೇಟಿಯಾದ ಡಿಕೆಶಿ, ಸಿದ್ದರಾಮಯ್ಯ!

ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ

ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ

'ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ ಯಡಿಯೂರಪ್ಪ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬರ ಪರಿಹಾರ, ಜಿಎಸ್‌ಟಿ ಪಾಲು

'ಬರಪರಿಹಾರ, ಜಿಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು ಈ ಎಲ್ಲ ವಿಚಾರಗಳಲ್ಲಿ ಬಿಜೆಪಿ ಸರ್ಕಾರ ಕರ್ನಾಟಕವನ್ನು ಮಲತಾಯಿ ಧೋರಣೆಯಲ್ಲಿ ಕಂಡಿದೆ' ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಚರ್ಚೆ, ಸಂವಾದಗಳು ನಿಂತಿವೆ

ಚರ್ಚೆ, ಸಂವಾದಗಳು ನಿಂತಿವೆ

'ರಾಜ್ಯಕ್ಕೆ ಅನ್ಯಾಯವಾದಾಗ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪರಂಪರೆ ನಮ್ಮಲ್ಲಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಮುಕ್ತ ಚರ್ಚೆ - ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು' ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಹೇಳಿದ್ದಾರೆ.

Recommended Video

ಬೊಮ್ಮಾಯಿ ಹಿಂದೆ ಗಿರಕಿ ಹೊಡಿಯುತ್ತಿರುವ ವಲಸಿಗರು! | Oneindia Kannada

ವಿಷಾದದಿಂದ ಹೇಳಬೇಕಾಗಿದೆ

'ಸಾರ್ವಜನಿಕ ಮಹತ್ವದ ಹತ್ತಾರು ಪತ್ರಗಳನ್ನು ಬರೆದರೂ ಪ್ರತಿಕ್ರಿಯಿಸುವ ಸೌಜನ್ಯವನ್ನೂ ಹಿಂದಿನ ಮುಖ್ಯಮಂತ್ರಿಗಳು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
Leader of opposition Siddaramaiah congratulated Karnataka chief minister Basavaraj Bommai and explained the challenges ahead for him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X