ತಮಿಳುನಾಡು ಸಿಎಂ ವಿಜಯ್‌ಗೆ ಸಿದ್ದರಾಮಯ್ಯ ಅಭಿನಂದನೆ: ಸಾಮಾಜಿಕ ನ್ಯಾಯಕ್ಕಾಗಿ ಜೊತೆಯಾಗಿ ಹೋರಾಡೋಣ ಎಂದು ಕರೆ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಟ, 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಸಿನಿಮಾ ರಂಗದಿಂದ ಜನಸೇವೆಯತ್ತ ವಿಜಯ್ ಕೈಗೊಂಡಿರುವ ಈ ಪ್ರಜಾಪ್ರಭುತ್ವದ ಪಯಣ ಶ್ಲಾಘನೀಯ ಎಂದು ಅವರು ಬಣ್ಣಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ ಖಾತೆಯಲ್ಲಿ ಶುಭಕೋರಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಆಳವಾದ ನಾಗರಿಕ ಸಂಬಂಧಗಳು ಹಾಗೂ ಸಾಂಸ್ಕೃತಿಕ ಸಾಮ್ಯತೆಯನ್ನು ಹಂಚಿಕೊಂಡಿವೆ ಎಂದು ತಿಳಿಸಿದ್ದಾರೆ. ಎರಡು ರಾಜ್ಯಗಳು ಸಾಮಾಜಿಕ ನ್ಯಾಯ, ಒಳಗೊಳ್ಳುವ ಬೆಳವಣಿಗೆ ಮತ್ತು ಒಕ್ಕೂಟ ಸಹಕಾರಕ್ಕಾಗಿ ಸಮಾನ ಆಕಾಂಕ್ಷೆಗಳನ್ನು ಹೊಂದಿವೆ. ಉಭಯ ರಾಜ್ಯಗಳ ನಡುವಿನ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಪಾರಂಪರಿಕ ಮೌಲ್ಯಗಳನ್ನು ಎತ್ತಿಹಿಡಿಯಲು ವಿಜಯ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಅವರು ಹೇಳಿದ್ದಾರೆ.

Siddaramaiah

ಜಾತ್ಯತೀತತೆ, ಸಾಂವಿಧಾನಿಕ ಮೌಲ್ಯಗಳನ್ನು ಮುನ್ನಡೆಸಲು ಹಾಗೂ ವಿಭಜಕ ಮತ್ತು ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧದ ಸಾಮೂಹಿಕ ಹೋರಾಟಕ್ಕಾಗಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ತಮಿಳುನಾಡಿನ ಜನರ ಸೇವೆಯಲ್ಲಿ ವಿಜಯ್ ಅವರ ಅಧಿಕಾರಾವಧಿಯು ಯಶಸ್ವಿ ಮತ್ತು ಪರಿವರ್ತನೆಯ ಹಾದಿಯಾಗಲಿ ಎಂದು ಅವರು ಶುಭ ಹಾರೈಸಿದ್ದಾರೆ. ಈ ಸಂದೇಶದ ಮೂಲಕ ಸಿದ್ದರಾಮಯ್ಯ ಅವರು ನೆರೆಯ ರಾಜ್ಯದ ನೂತನ ನಾಯಕನೊಂದಿಗೆ ಸೌಹಾರ್ದಯುತ ಸಂಬಂಧವನ್ನು ವೃದ್ಧಿಸುವ ಮತ್ತು ಪ್ರಾದೇಶಿಕ ಹಿತಾಸಕ್ತಿಗಳಿಗಾಗಿ ಒಂದಾಗಿ ಶ್ರಮಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

200 ಯೂನಿಟ್ ಉಚಿತ ವಿದ್ಯುತ್ ಹಾಗೂ 'ಸಿಂಗಂ' ಮಹಿಳಾ ಪಡೆಗೆ ಚಾಲನೆ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಟ ವಿಜಯ್ ಅವರು ಇಂದು ತಮ್ಮ ಚುನಾವಣಾ ಪ್ರಣಾಳಿಕೆಯ ಪ್ರಮುಖ ಭರವಸೆಗಳನ್ನು ಈಡೇರಿಸುವ ಮೂಲಕ ಜನಪ್ರಿಯ ಯೋಜನೆಗಳಿಗೆ ಅಧಿಕೃತ ಚಾಲನೆ ನೀಡಿದ್ದಾರೆ. ಎರಡು ತಿಂಗಳ ಅವಧಿಗೆ 500 ಯೂನಿಟ್‌ಗಳವರೆಗೆ ವಿದ್ಯುತ್ ಬಳಸುವ ಗೃಹಬಳಕೆದಾರರಿಗೆ ಪ್ರತಿ ಎರಡು ತಿಂಗಳಿಗೊಮ್ಮೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ರಾಜ್ಯದ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಲು 'ಸಿಂಗಂ ಮಹಿಳಾ ವಿಶೇಷ ಸ್ಟ್ರೈಕ್ ಫೋರ್ಸ್' ಅನ್ನು ರಚಿಸಲಾಗಿದೆ. ತಮಿಳಗ ವೆಟ್ರಿ ಕಳಗಂ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮಹಿಳಾ ಸುರಕ್ಷತೆ ಮತ್ತು ಬಡ ಹಾಗೂ ಮಧ್ಯಮ ವರ್ಗದವರ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರಗಳನ್ನು ಜಾರಿಗೆ ತಂದಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿಜಯ್ ಅವರು ಮೊದಲ ಕಡತಕ್ಕೆ ಸಹಿ ಹಾಕುವ ಮೂಲಕ ಈ ಯೋಜನೆಗಳಿಗೆ ತಾತ್ವಿಕ ಅನುಮೋದನೆ ನೀಡಿದ್ದರು. ಇಂದು ಅದನ್ನು ಅಧಿಕೃತವಾಗಿ ಜನರಿಗೆ ತಲುಪಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+