ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 14: ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ನಿರೀಕ್ಷೆಯಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ತುಟ್ಟಿಭತ್ಯೆಯನ್ನು ಶೇ.3.5ರಷ್ಟು ಏರಿಕೆ ಮಾಡಲಾಗಿದೆ ಎಂದು ಹಣಕಾಸು ಇಲಾಖೆ ಬುಧವಾರ(ಏಪ್ರಿಲ್ 13) ಅಧಿಕೃತ ಆದೇಶ ಹೊರಡಿಸಿದೆ. ಚಾಂದ್ರಮಾನ ಯುಗಾದಿಗೆ ಸಿಗಬೇಕಿದ್ದ ಸಿಹಿ ಸುದ್ದಿ ಈಗ ಸೌರಮಾನ ಯುಗಾದಿಗೆ ಸಿಕ್ಕಿದೆ.

ಜನವರಿ 1, 2016ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಆದೇಶ ಜಾರಿಗೆ ಬರಲಿದೆ. ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಹೆಚ್ಚಳವಾಗಲಿದೆ. [ಹೋಳಿ ಗಿಫ್ಟ್ : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ]

Siddaramaiah Congress Government Dearness Allowance Hike

ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ಪರಿಪಾಠ ಮುಂದುವರೆದಿದೆ. ಅದರೆ, ಶೇ.4.25ರಷ್ಟು ಹೆಚ್ಚಳ ಮಾಡುವ ನಿರೀಕ್ಷೆ ಹೊಂದಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಈಗ ಮೂಲವೇತನದ ಶೇ. 33 ರಿಂದ ಶೇ36ರಷ್ಟು ಹೆಚ್ಚಿನ ಸಂಬಳ ಸಿಗಲಿದೆ.

ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.

ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government led by Siddaramaiah has announed hike dearness allowance to state government employees by 3.5 percent with effect from 1st January 2016.
Please Wait while comments are loading...