ಎರಡು ಕ್ಷೇತ್ರಗಳಿಂದ ಸಿದ್ದರಾಮಯ್ಯ ಕಣಕ್ಕಿಳಿಯುವುದು ಖಾತ್ರಿ

Recommended Video

      ಕರ್ನಾಟಕದ ಎರಡು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಸ್ಪರ್ಧಿಸೋದು ಪಕ್ಕಾ | Oneindia Kannada

      ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಹೈಕಮಾಂಡ್‌ ಒಪ್ಪಿಗೆ ಸೂಚಿಸಿದೆ.

      ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಯ ಕಷ್ಟವಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಬೇಡಿಕೆಯನ್ನು ಹೈಕಮಾಂಡ್‌ ಮುಂದೆ ಇಟ್ಟಿದ್ದರು, ಹೈಕಮಾಂಡ್ ಸಿದ್ದರಾಮಯ್ಯ ಅವರ ಬೇಡಿಕೆಯನ್ನು ಮನ್ನಿಸಿದೆ. ಸಿದ್ದರಾಮಯ್ಯ ಅವರು ಏಪ್ರಿಲ್ 24ರಂದು ಬಾದಾಮಿ ಕ್ಷೇತ್ರ ಉಮೇದುವಾರಿಕೆಗೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

      ಸಿದ್ದರಾಮಯ್ಯ ಅವರು ಬಾದಾಮಿಯಿಂದ ಕಣಕ್ಕಿಳಿಯುವುದನ್ನು ಹಾಲಿ ಶಾಸಕ ಚಿಮ್ಮನಕಟ್ಟಿ ಅವರು ವಿರೋಧಿಸಿದ್ದರು, ಕಾಂಗ್ರೆಸ್‌ ಹೈಕಮಾಂಡ್‌ಗೆ ಈ ಬಗ್ಗೆ ದೂರು ಕೂಡ ನೀಡಿದ್ದರು. ಆದರೆ ಈಗ ಚಿಮ್ಮನಕಟ್ಟಿ ಅವರ ಮುನಿಸನ್ನು ಶಮನ ಮಾಡಲಾಗಿದ್ದು, ಸಿದ್ದರಾಮಯ್ಯ ಅವರಿಗಾಗಿ ಚಿಮ್ಮನಕಟ್ಟಿ ಅವರು ತಮ್ಮ ಸ್ಥಾನ ಬಿಟ್ಟುಕೊಡುತ್ತಿದ್ದಾರೆ.

      Siddaramaiah contesting from two constituency

      ಬಾದಾಮಿಯು ಬಿಬಿ ಚಿಮ್ಮನಕಟ್ಟಿ ಅವರ ಕ್ಷೇತ್ರವಾಗಿದ್ದು, ಸಿದ್ದರಾಮಯ್ಯ ಅವರು ಬಾದಾಮಿಯ ಕಾಂಗ್ರೆಸ್‌ ನಾಯಕರೊಂದಿಗೆ ಇಂದು ಕೃಷ್ಣಾದಲ್ಲಿ ಚರ್ಚೆ ನಡೆಸಿದ್ದಾರೆ. ಈಗಾಗಲೇ ಎಚ್‌.ಎಂ.ರೇವಣ್ಣ ಅವರು ಬಾದಾಮಿ ಕ್ಷೇತ್ರದಲ್ಲಿ ಬೀಡು ಬಿಟ್ಟಿದ್ದು, ಅಲ್ಲಿನ ಕೈ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದಾರೆ.

      ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇರುವ ಕಾರಣ ಸಿದ್ದರಾಮಯ್ಯ ಅವರು ಬಾದಾಮಿಯಿಂದಲೂ ಸ್ಪರ್ಧಿಸುವ ನಿರ್ಣಯಕ್ಕೆ ಬಂದಿದ್ದಾರೆ ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+