ದಿಲ್ಲಿಯಿಂದ ಸಂದೇಶ ಬಂದಿದೆ, ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರುತ್ತಾರೆ ಗೊತ್ತಾ?
ಬೆಂಗಳೂರು, ಸೆಪ್ಟೆಂಬರ್ 05: ಮುಡಾ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಹಲವು ಕಾಂಗ್ರೆಸ್ ನಾಯಕರು ಸಿಎಂ ರೇಸ್ ನಲ್ಲಿದ್ದು, ಮುಖ್ಯಮಂತ್ರಿ ಸ್ಥಾನ ಆಸೆ ಕುರಿತು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವವರ ಕುರಿತು ಮಾಜಿ ಸಂಸದ ಡಿ ಕೆ ಸುರೇಶ್ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾಜಿ ಸಂಸದ ಹಾಗೂ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆದರೆ ಕೇಳುವುದರಲ್ಲಿ ತಪ್ಪಿಲ್ಲ.ಬಿಜೆಪಿ-ಜೆಡಿಎಸ್ ಅವರು ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ಸಿಗಬೇಕು ಎಂಬುದು ಬಿಟ್ಟು ಬೇರೇನೂ ಇಲ್ಲ ಎಂದು ತಿಳಿಸಿದ್ದಾರೆ.

ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಎಐಸಿಸಿ ಅಧ್ಯಕ್ಷರು ಸೇರಿದಂತೆ ದೆಹಲಿ ಹೈಕಮಾಂಡ್ ಸ್ಪಷ್ಟ ಸಂದೇಶ ಕಳುಹಿಸಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕರು ಕೂಡ ಇದನ್ನೇ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರೇ ಐದು ವರ್ಷವೂ ಮುಖ್ಯಮಂತ್ರಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಛಲವಾದಿ ಅವರು ಸ್ವಜನ ಪಕ್ಷಪಾತ ಎಸಗಿದ್ದಾರೆ: ರಮೇಶ್ ಬಾಬು
ವಿಧಾನಸಭೆಗಿಂತಲೂ ಹೆಚ್ಚು ವಿಧಾನ ಪರಿಷತ್ತಿಗೆ ದೊಡ್ಡ ಇತಿಹಾಸವಿದೆ. ಸ್ವಾತಂತ್ರ್ಯ ಪೂರ್ವದಲ್ಲೇ ಪ್ರಜಾಪ್ರತಿನಿಧಿ ಸಭೆ ಸ್ಥಾಪನೆಯಾಗಿತ್ತು. ಇದರ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸ್ವಜನ ಪಕ್ಷಪಾತ ಎಸಗಿದ್ದಾರೆ ಎಂದು ರಮೇಶ್ ಬಾಬು ಅವರು ಹೇಳಿದರು.
ಸಿಎ ನಿವೇಶನ ಪಡೆಯಲು ಅಕ್ರಮ ಎಸಗಿರುವ ವಿಧಾನಪರಿಷತ್ ಬಿಜೆಪಿ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರನ್ನು ಎರಡೂ ಸ್ಥಾನದಿಂದ ಅನರ್ಹ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸದಸ್ಯರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
24.11.2002 ರಿಂದ 05.05.2005 ರ ವರೆಗೆ ಕರ್ನಾಟಕ ಗೃಹ ಮಂಡಳಿ ಸದಸ್ಯರಾಗಿದ್ದ ನಾರಾಯಣಸ್ವಾಮಿ ಅವರು ಈ ವೇಳೆ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಹೊಸಕೋಟೆಯ ವೀರೇಂದ್ರ ಸಿಂಗ್ ಅವರ ಕುಟುಂಬದ ಭೂಮಿಯನ್ನು ಕೆಎಚ್ ಬಿ ಸ್ವಾಧೀನ ಪಡಿಸಿಕೊಂಡಿರುತ್ತದೆ. ಈ ಕುಟುಂಬದವರು 20.11.2003 ರಲ್ಲಿ ಉಳಿಕೆ ಜಮೀನನ್ನು ಮರಳಿ ನೀಡಿ ಎಂದು ಕೆಎಚ್ ಬಿಗೆ ಅರ್ಜಿ ನೀಡುತ್ತಾರೆ.
ಇದೇ ವೇಳೆ ನಾರಾಯಣಸ್ವಾಮಿ ಅವರು ಸದಸ್ಯರಾಗಿದ್ದರು. ಅವರಿಗೆ ನಿವೇಶನ ಹಂಚಿಕೆ ಮಾಡಿಕೊಳ್ಳಲು ಬರುವುದಿಲ್ಲ. ಆದರೆ ಇವರು ಶಾಲೆಯನ್ನು ಕಟ್ಟಲು ಸಿಎ ನಿವೇಶನವನ್ನು 26.05.2004 ರಂದು ಪಡೆಯುತ್ತಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು 25,841 ಅಡಿ ನಿವೇಶನವನ್ನು ಅಕ್ರಮವಾಗಿ ಪಡೆಯುತ್ತಾರೆ. 12,27,479 ರೂಪಾಯಿ ಹಣವನ್ನು 25.07.2004 ರಲ್ಲಿ ಕಟ್ಟುತ್ತಾರೆ.
ಶಾಲಾ ಕಟ್ಟಡ ನಿರ್ಮಾಣಕ್ಕೆ ಮಾತ್ರ ಬಳಸಬೇಕು. ಮುಂದಿನ 5 ವರ್ಷಗಳಲ್ಲಿ ಶಾಲಾ ಕಟ್ಟಡ ನಿರ್ಮಾಣ ಪೂರ್ಣಗೊಳಿಸಬೇಕು ಇಲ್ಲದಿದ್ದರೇ ಮರಳಿ ಪಡೆಯಲಾಗುವುದು ಎಂದು ಕೆಎಚ್ ಬಿ ತಿಳಿಸುತ್ತದೆ. ಆನಂತರ 28.07.2006 ರಲ್ಲಿ ಕ್ರಯಪತ್ರ ಆಗುವಾಗ ನಿವೇಶನ ಪಡೆದ ಉದ್ದೇಶ ಬದಲಾವಣೆ ಮಾಡಿದ್ದಾರೆ. ಟೆಲಿ ಕಮ್ಯೂನಿಕೇಶನ್ ಮತ್ತು ಪಬ್ಲಿಕ್ ಸರ್ವೀಸ್ ಎಂದು ಬದಲಾಯಿಸುತ್ತಾರೆ. ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ನಿವೇಶನವನ್ನು ಅಕ್ರಮವಾಗಿ ಉಪಯೋಗಿಸುತ್ತಿದ್ದಾರೆ.












Click it and Unblock the Notifications