ರೈತ ಆತ್ಮಹತ್ಯೆ ಬಗ್ಗೆ ಸಿಎಂ ವಿವಾದಾತ್ಮಕ ಹೇಳಿಕೆ

ಬೆಂಗಳೂರು, ಏ. 3 : ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುವಾಗ ಆತ್ಮಹತ್ಯೆ ಮಾಡಿಕೊಂಡ ರೈತ ವಿಠಲ ಅರಭಾವಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಪಕ್ಷಗಳು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿದ್ದು ಅವರು ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿವೆ.

ಬುಧವಾರ ರಾತ್ರಿ ಮಡಿಕೇರಿಯ ನಾಪೋಕ್ಲುವಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರದಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ, "ಬೆಳಗಾವಿಯಲ್ಲಿ ಅಧಿವೇಶನದ ವೇಳೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಆ ರೈತ ಚೆನ್ನಾಗಿ ಕುಡಿದಿದ್ರು, ಆದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಹೇಳಿದ್ದರು. [ಮೋದಿ ಮಾತನ್ನು ಕನ್ನಡಲ್ಲಿ ಕೇಳಿರಿ]

ಈ ಹೇಳಿಕೆ ಮಾಧ್ಯಮಗಳಲ್ಲಿ ಪ್ರಕಟವಾದ ತಕ್ಷಣ ಪ್ರತಿಪಕ್ಷಗಳು ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿವೆ. ಗುರುವಾರ ತಮ್ಮ ಹೇಳಿಕೆ ಬಗ್ಗೆ ಸಮರ್ಥನೆ ನೀಡಿರುವ ಸಿಎಂ "ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೆ" ಎಂದು ತಿಳಿಸಿದ್ದಾರೆ. ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿದ್ದುಗೆ ಪ್ರತಿಪಕ್ಷಗಳ ಗುದ್ದು

ರೈತರ ಕ್ಷಮೆ ಕೇಳಬೇಕು

ರೈತರ ಕ್ಷಮೆ ಕೇಳಬೇಕು

ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, "ಸರ್ಕಾರ ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಲು ವಿಳಂಬ ಮಾಡಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ" ಮುಖ್ಯಮಂತ್ರಿಗಳು ತಮ್ಮ ಸ್ಥಾನದ ಜವಾಬ್ದಾರಿ ಅರಿತು ಮಾತನಾಡಬೇಕು. ಕೂಡಲೇ ಸಿಎಂ ರೈತರ ಕ್ಷಮೆಯಾಚಿಸಬೇಕು ಎಂದು ಗುಡುಗಿದ್ದಾರೆ.

ಬೇಜವಾಬ್ದಾರಿ ಹೇಳಿಕೆ

ಬೇಜವಾಬ್ದಾರಿ ಹೇಳಿಕೆ

ಸಿಎಂ ಸಿದ್ದರಾಮಯ್ಯ ಅವರದ್ದು ಬೇಜವಾಬ್ದಾರಿ ಹೇಳಿಕೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಡಿವಿ ಸದಾನಂದ ಗೌಡ ಹೇಳಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ಎರಡು ದಿನಗಳಿಂದ ರೈತರು ಧರಣಿ ಕುಳಿತಿದ್ದರೂ ಸರ್ಕಾರ ಸ್ಪಂದಿಸಲಿಲ್ಲ. ಆದ್ದರಿಂದ, ರೈತ ಅನಿವಾರ್ಯವಾಗಿ ತನ್ನ ಪ್ರಾಣತ್ಯಾಗ ಮಾಡಬೇಕಾದ ಪರಿಸ್ಥಿತಿ ಬಂದಿತ್ತು. ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ದೂರಿದರು.

ಸರ್ಕಾರ ಏನು ಮಾಡುತ್ತಿತ್ತು?

ಸರ್ಕಾರ ಏನು ಮಾಡುತ್ತಿತ್ತು?

ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯನವರು ಸಾರ್ವಜನಿಕವಾಗಿ ರೈತರ ಕ್ಷಮೆಯಾಚಿಸಬೇಕು. ರೈತ ಆತ್ಮಹತ್ಯೆ ಮಾಡಿಕೊಳ್ಳುವಾಗ ಸರ್ಕಾರ ಏನು ಮಾಡುತ್ತಿತ್ತು. ಕಳೆದ 5-6 ತಿಂಗಳಿನಿಂದ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಹೇಳಿಕೆ ವಾಪಸ್ ಪಡೆಯಲಿ

ಹೇಳಿಕೆ ವಾಪಸ್ ಪಡೆಯಲಿ

ಸಿಎಂ ಸಿದ್ದರಾಮಯ್ಯ ಕೂಡಲೆ ತಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದು ಶಾಸಕ ಮತ್ತು ರೈತ ಮುಖಂಡ ಕೆಎಸ್ ಪುಟ್ಟಣ್ಣಯ್ಯ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಬಾರದು. ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ರೈತ ಆತ್ಮಹತ್ಯೆ ಮಾಡಿಕೊಂಡರೆ ಸರ್ಕಾರಕ್ಕೆ ಸಂಬಂಧವಿಲ್ಲ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಬಾರದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+